ಬಿಜೆಪಿಯನ್ನು ಯಾರು ಅಧಿಕಾರಕ್ಕೆ ತಂದರೋ ಗೊತ್ತಿಲ್ಲ: ಬೆಲೆ ಏರಿಕೆ ವಿರುದ್ಧ ಜಯಾ ಬಚ್ಚನ್ ವಾಗ್ದಾಳಿ

ಸರ್ಕಾರ ಹೀಗೆಯೇ ಮಾಡುತ್ತದೆ, ಅಖಿಲೇಶ್ ಯಾದವ್ ತಮ್ಮ ಪ್ರಚಾರದಲ್ಲಿ ಪದೇ ಪದೇ ಹೇಳುತ್ತಿದ್ದಾರೆ, ಜನರೇ ಎಚ್ಚರವಾಗಿರಿ, ಚುನಾವಣೆ ನಂತರ ಬೆಲೆ ಹೆಚ್ಚಾಗಲಿದೆ. ಅವರನ್ನು (ಬಿಜೆಪಿ) ಯಾರು ಅಧಿಕಾರಕ್ಕೆ ತಂದರೋ ಗೊತ್ತಿಲ್ಲಎಂದು ಜಯಾ ಬಚ್ಚನ್ ಹೇಳಿದ್ದಾರೆ . 

ಬಿಜೆಪಿಯನ್ನು ಯಾರು ಅಧಿಕಾರಕ್ಕೆ ತಂದರೋ ಗೊತ್ತಿಲ್ಲ: ಬೆಲೆ ಏರಿಕೆ ವಿರುದ್ಧ ಜಯಾ ಬಚ್ಚನ್ ವಾಗ್ದಾಳಿ
ಜಯಾ ಬಚ್ಚನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 22, 2022 | 2:28 PM

ದೆಹಲಿ: ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ (Jaya Bachchan)ಅವರು ಮಂಗಳವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಇಂಧನ ಬೆಲೆಗಳ ಏರಿಕೆಯ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದು ಅವರನ್ನು (ಬಿಜೆಪಿ) ಯಾರು ಅಧಿಕಾರಕ್ಕೆ ತಂದರೋ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 73ರ ಹರೆಯದ ನಟಿ-ರಾಜಕಾರಣಿಯು ಬೆಲೆ ಏರಿಕೆಯನ್ನು ಐದು ರಾಜ್ಯಗಳ ಚುನಾವಣೆಗಳಿಗೆ ಲಿಂಕ್ ಮಾಡಿದ್ದಾರೆ. ಸರ್ಕಾರ ಹೀಗೆಯೇ ಮಾಡುತ್ತದೆ, ಅಖಿಲೇಶ್ ಯಾದವ್ (Akhilesh Yadav) ತಮ್ಮ ಪ್ರಚಾರದಲ್ಲಿ ಪದೇ ಪದೇ ಹೇಳುತ್ತಿದ್ದಾರೆ, ಜನರೇ ಎಚ್ಚರವಾಗಿರಿ, ಚುನಾವಣೆ ನಂತರ ಬೆಲೆ ಹೆಚ್ಚಾಗಲಿದೆ. ಅವರನ್ನು (BJP) ಯಾರು ಅಧಿಕಾರಕ್ಕೆ ತಂದರೋ ಗೊತ್ತಿಲ್ಲಎಂದು ಜಯಾ ಬಚ್ಚನ್ ಹೇಳಿದ್ದಾರೆ .  ಫೆಬ್ರವರಿ 26 ರಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ರಾಜ್ಯ ಚುನಾವಣೆಗಳು ಮುಗಿದ ನಂತರ ಕೇಂದ್ರವು ಇಂಧನ ಬೆಲೆಯನ್ನು ಹೆಚ್ಚಿಸಲಿದೆ ಎಂದು ಹೇಳಿದ್ದರು. ರೈತರಿಗೆ ಟ್ರ್ಯಾಕ್ಟರ್ ಓಡಿಸಲು ಸಾಧ್ಯವಾಗುತ್ತಿಲ್ಲ, ಇದನ್ನು ಗಮನದಲ್ಲಿಟ್ಟುಕೊಳ್ಳಿ, ಚುನಾವಣೆ ಮುಗಿದ ತಕ್ಷಣ ಬಿಜೆಪಿಯವರು ಪೆಟ್ರೋಲ್ ಬೆಲೆ ₹ 200ಕ್ಕೆ ಏರಿಸುತ್ತಾರೆ ಎಂದು ಪತ್ರಿಕೆಗಳೂ ಬರೆಯಲಾರಂಭಿಸಿವೆ’ ಎಂದಿದ್ದರು.  ಅಖಿಲೇಶ್ ಯಾದವ್ ಮತ್ತೊಮ್ಮೆ ಗೃಹ ಅಡುಗೆ ಅನಿಲದ ಬೆಲೆ ಏರಿಕೆಯ ಬಗ್ಗೆ ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು ಇದು ರಾಜ್ಯ ಚುನಾವಣೆಯ ನಂತರ ಜನರಿಗೆ “ಹಣದುಬ್ಬರದ ಮತ್ತೊಂದು ಕೊಡುಗೆ” ಎಂದು ಬಣ್ಣಿಸಿದರು.

ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 80 ಪೈಸೆ ಏರಿಕೆಯಾಗಿದ್ದು, ಗೃಹಬಳಕೆಯ ಅಡುಗೆ ಅನಿಲದ ಬೆಲೆ ಸಿಲಿಂಡರ್‌ಗೆ ₹ 50 ಏರಿಕೆಯಾಗಿದೆ. ನವೆಂಬರ್‌ನಲ್ಲಿ ದೇಶವು ಕೊನೆಯ ಬಾರಿ ಇಂಧನ ಬೆಲೆ ಏರಿಕೆಯನ್ನು ಕಂಡಿತು.

ಅಖಿಲೇಶ್ ಯಾದವ್, ಜಯಾ ಬಚ್ಚನ್ ಅಲ್ಲದೆ ರಾಹುಲ್ ಗಾಂಧಿ ಕೂಡ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ. “ನೀವು ಪ್ರಧಾನಿಯನ್ನು ಕೇಳಿದರೆ, ಅವರು ತಟ್ಟೆಗಳನ್ನು ಬಡಿಯುವಂತೆ ಹೇಳುತ್ತಾರೆ ಎಂದಿದ್ದಾರೆ ರಾಹುಲ್ . “ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳ ಮೇಲೆ ವಿಧಿಸಲಾದ ‘ಲಾಕ್‌ಡೌನ್’ ಅನ್ನು ತೆಗೆದುಹಾಕಲಾಗಿದೆ. ಈಗ ಸರ್ಕಾರವು ನಿರಂತರವಾಗಿ ಬೆಲೆಗಳನ್ನು ‘ಅಭಿವೃದ್ಧಿಪಡಿಸುತ್ತದೆ’ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  ಮಾರ್ಚ್ 28ರಂದು ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ