Delhi violence ಕೆಂಪುಕೋಟೆ ಬಳಿ ಹಿಂಸಾಚಾರ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಲು ಒಪ್ಪದ ಸುಪ್ರೀಂ ಕೋರ್ಟ್; ಅರ್ಜಿ ಹಿಂಪಡೆಯಲು ಸೂಚನೆ

| Updated By: ಸಾಧು ಶ್ರೀನಾಥ್​

Updated on: Feb 03, 2021 | 3:41 PM

ಮೂರು ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ತಾತ್ಕಾಲಿಕ ತಡೆ ನೀಡಿ ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಬಿಕ್ಕಟ್ಟು ಪರಿಹಾರಕ್ಕೆ ನಾಲ್ವರು ಸದಸ್ಯರನ್ನೊಳಗೊಂಡ ಸಮಿತಿಯನ್ನೂ ರಚಿಸಿದೆ.

Delhi violence ಕೆಂಪುಕೋಟೆ ಬಳಿ ಹಿಂಸಾಚಾರ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಲು ಒಪ್ಪದ ಸುಪ್ರೀಂ ಕೋರ್ಟ್; ಅರ್ಜಿ ಹಿಂಪಡೆಯಲು ಸೂಚನೆ
ಸುಪ್ರೀಂಕೋರ್ಟ್​
Follow us on

ದೆಹಲಿ: ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸ ದಿನದಂದು ನಡೆದ ಹಿಂಸಾಚಾರ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಲು ಸುಪ್ರೀಂ ಕೋರ್ಟ್​ ನಿರಾಕರಿಸಿದೆ.

ದೆಹಲಿಯಲ್ಲಿ ಜನವರಿ 26ರಂದು ಹಿಂಸಾಚಾರ ನಡೆದ ಬೆನ್ನಲ್ಲೆ, ಮಧ್ಯ ಪ್ರವೇಶ ಮಾಡುವಂತೆ ಸುಪ್ರೀಂ ಕೋರ್ಟ್​ಗೆ ಹಲವರು ಪಿಐಎಲ್​ ಸಲ್ಲಿಸಿದ್ದರು. ಈ ವಿಚಾರವನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಎಸ್​. ಎ.ಬೊಬ್ಡೆ ನೇತೃತ್ವದ, ನ್ಯಾಯಮೂರ್ತಿಗಳಾದ ಎಸ್​. ಎ.ಬೋಪಣ್ಣ, ವಿ.ರಾಮಸುಬ್ರಹ್ಮಣ್ಯನ್​ ಅವರನ್ನೊಳಗೊಂಡ ಪೀಠವು ತಾವು ಯಾವ ಕಾರಣಕ್ಕೂ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಕೆಂಪುಕೋಟೆ ಬಳಿ ನಡೆದ ಹಿಂಸಾಚಾರ, ಧ್ವಜಾರೋಹಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದೆ.

ಅಂದಿನ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಕಾನೂನು ತನ್ನದೇ ಆದ ಹಾದಿಯಲ್ಲಿ ಕೆಲಸ ಮಾಡುತ್ತದೆ ಎಂದು ಪ್ರಧಾನ ಮಂತ್ರಿಯವರು ಹೇಳಿದ್ದಾಗಿ ನಾವೂ ಪತ್ರಿಕೆಗಳಲ್ಲಿ ಓದಿದ್ದೇವೆ. ಕಾನೂನು ತನ್ನ ಪಥದಲ್ಲಿ ನಡೆಯುತ್ತದೆಂಬ ಭರವಸೆ ನಮಗೂ ಇದೆ. ಕೇಂದ್ರದ ಮೇಲೆ ನಂಬಿಕೆ ಇಟ್ಟಿದ್ದೇವೆ. ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಸಿಜೆಐ (CJI) ಎಸ್​. ಎ.ಬೊಬ್ಡೆ (SA Bobde) ಹೇಳಿದ್ದಾರೆ. ಅಷ್ಟೇ ಅಲ್ಲ, ನಿಮ್ಮ ಅರ್ಜಿಗಳನ್ನು ವಾಪಸ್​ ಪಡೆಯಿರಿ ಎಂದು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ.

ಹಾಗೇ ಕೆಲವು ಮಾಧ್ಯಮಗಳಲ್ಲಿ ರೈತರನ್ನು ಉಗ್ರರು ಎಂದು ಉಲ್ಲೇಖಿಸಲಾಗುತ್ತಿದೆ. ಯಾವುದೇ ದಾಖಲೆಯಿಲ್ಲದೆ ಅವರನ್ನು ಉಗ್ರರು ಎಂದು ಉಲ್ಲೇಖಿಸಬಾರದು ಎಂದು ಸೂಚನೆ ನೀಡುವಂತೆ ವಕೀಲ ಮನೋಹರ್​ ಲಾಲ್ ಶರ್ಮಾ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿಯನ್ನೂ ಈ ಪೀಠ ವಜಾಗೊಳಿಸಿದೆ.

ಮೂರು ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ತಾತ್ಕಾಲಿಕ ತಡೆ ನೀಡಿ ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಬಿಕ್ಕಟ್ಟು ಪರಿಹಾರಕ್ಕೆ ನಾಲ್ವರು ಸದಸ್ಯರನ್ನೊಳಗೊಂಡ ಸಮಿತಿಯನ್ನೂ ರಚಿಸಿದೆ. ಇಷ್ಟಾದರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು

 

 

ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಾಟ: ಪ್ರಕರಣ ಹಿಂದಿದೆ ಬಿಜೆಪಿ ಬೆಂಬಲಿಗ, ನಟ ದೀಪ್‌ ಸಿಧು ಕೈವಾಡ?