AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಹಿಂದುತ್ವ ಕಲಿಸುವ ಧೈರ್ಯ ಮಾಡಬೇಡಿ; ಬಿಜೆಪಿಗೆ ಉದ್ಧವ್ ಠಾಕ್ರೆ ಎಚ್ಚರಿಕೆ

ಯಾರ ಹೆಸರುಗಳನ್ನೂ ಹೇಳದೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ದಸರಾ ರ‍್ಯಾಲಿಯಲ್ಲಿ ಶಿಂಧೆ ಬಣದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಕ್ಷ ಮತ್ತು ಚಿಹ್ನೆಯನ್ನು ಕದ್ದವರು ಎಂದಿಗೂ ಮೂಲ ಶಿವಸೇನೆ ಪಕ್ಷದ ಮುಖ್ಯಸ್ಥರಾಗಲು ಸಾಧ್ಯವಿಲ್ಲ ಎಂದು ಅವರು ಟೀಕಿಸಿದ್ದಾರೆ. ಬಿಜೆಪಿ ನಮಗೆ ಹಿಂದುತ್ವವನ್ನು ಕಲಿಸಲು ಪ್ರಯತ್ನಿಸುತ್ತಿದ್ದರೆ, ಆ ಧೈರ್ಯ ಮಾಡಬೇಡಿ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ನಮಗೆ ಹಿಂದುತ್ವ ಕಲಿಸುವ ಧೈರ್ಯ ಮಾಡಬೇಡಿ; ಬಿಜೆಪಿಗೆ ಉದ್ಧವ್ ಠಾಕ್ರೆ ಎಚ್ಚರಿಕೆ
Uddhav Thackeray
ಸುಷ್ಮಾ ಚಕ್ರೆ
|

Updated on:Oct 02, 2025 | 10:49 PM

Share

ಮುಂಬೈ, ಅಕ್ಟೋಬರ್ 2: ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಇಂದು ಮಹಾರಾಷ್ಟ್ರದ ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ನಮಗೆ ಹಿಂದುತ್ವದ (Hindutva) ಬಗ್ಗೆ ಉಪನ್ಯಾಸ ನೀಡಬೇಡಿ ಎಂದು ಎಚ್ಚರಿಸಿದ್ದಾರೆ. ಯಾವುದೇ ಹೆಸರುಗಳನ್ನು ತೆಗೆದುಕೊಳ್ಳದೆ, ಪಕ್ಷ ಮತ್ತು ಚಿಹ್ನೆಯನ್ನು ಕದ್ದವರು ಎಂದಿಗೂ ಮೂಲ ಶಿವಸೇನೆ ಪಕ್ಷದ ಮುಖ್ಯಸ್ಥ ಆಗಲು ಸಾಧ್ಯವಿಲ್ಲ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಕೆಸರು ಮತ್ತು ಮಳೆಯ ಹೊರತಾಗಿಯೂ ನೀವೆಲ್ಲರೂ ಇಲ್ಲಿಗೆ ಬಂದಿದ್ದೀರಿ. ಇದು ಯಾರಿಗೆ ಜನರ ಬೆಂಬಲವಿದೆ ಎಂಬುದನ್ನು ತೋರಿಸುತ್ತದೆ ಎಂದು ಮುಂಬೈನ ದಾದರ್‌ನ ಶಿವಾಜಿ ಪಾರ್ಕ್‌ನಲ್ಲಿ ನಡೆದ ತಮ್ಮ ರ‍್ಯಾಲಿಯಲ್ಲಿ ಉದ್ಧವ್ ಠಾಕ್ರೆ ಹೇಳಿದರು.

ಇದನ್ನೂ ಓದಿ: ಉದ್ಧವ್ ಠಾಕ್ರೆ, ರಾಜ್ ಠಾಕ್ರೆ ‘ಮಹಾ’ ಸಂಗಮ: ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ

“ಎರಡು ಸಮುದಾಯಗಳ ನಡುವೆ ಶಾಂತಿಯನ್ನು ಕಾಪಾಡಿಕೊಳ್ಳಲು ಆರ್‌ಎಸ್‌ಎಸ್ ಮುಖ್ಯಸ್ಥರು ಮುಸ್ಲಿಂ ನಾಯಕರೊಂದಿಗೆ ಸಭೆಗಳನ್ನು ನಡೆಸಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಏನು ಹೇಳುತ್ತಾರೆಂದು ನನಗೆ ಕುತೂಹಲವಿದೆ. ನೀವು ಮೋಹನ್ ಭಾಗವತ್ ಅವರನ್ನೂ ಪ್ರಶ್ನಿಸುತ್ತೀರಾ?” ಎಂದು ಅವರು ಕೇಳಿದ್ದಾರೆ.

“ಬಿಜೆಪಿ ನಮಗೆ ಹಿಂದುತ್ವವನ್ನು ಕಲಿಸಲು ಪ್ರಯತ್ನಿಸುತ್ತಿದ್ದರೆ, ಆ ಧೈರ್ಯ ಮಾಡಬೇಡಿ. ಹಿಂದುತ್ವದ ವಿಷಯದ ಬಗ್ಗೆ ನಮ್ಮ ವಿರುದ್ಧ ಮಾತನಾಡಲು ನೀವು ಧೈರ್ಯ ಮಾಡಬೇಡಿ ಎಂದು ನಾನು ಇಂದು ಬಿಜೆಪಿಗೆ ಎಚ್ಚರಿಕೆ ನೀಡುತ್ತಿದ್ದೇನೆ” ಎಂದು ಉದ್ಧವ್ ಠಾಕ್ರೆ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 pm, Thu, 2 October 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ