ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ಮೋದಿ ಭೇಟಿ ಮಾಡಿದ ಪದ್ಮ ವಿಭೂಷಣ ವೀರೇಂದ್ರ ಹೆಗ್ಗಡೆ

| Updated By: ಸಾಧು ಶ್ರೀನಾಥ್​

Updated on: Jul 21, 2022 | 3:39 PM

ಪ್ರಧಾನಿ ಮೋದಿಯವರನ್ನು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಭೇಟಿ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಉಪಸ್ಥಿತರಿದ್ದರು.

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ಮೋದಿ ಭೇಟಿ ಮಾಡಿದ ಪದ್ಮ ವಿಭೂಷಣ ವೀರೇಂದ್ರ ಹೆಗ್ಗಡೆ
ಪ್ರಧಾನಿ ಮೋದಿ ಭೇಟಿ ಮಾಡಿದ ವೀರೇಂದ್ರ ಹೆಗ್ಗಡೆ
Follow us on

ದೆಹಲಿ: ರಾಜ್ಯಸಭೆ ಸದಸ್ಯರಾಗಿ(Rajya Sabha Member) ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು (Padma Vibhushan Veerendra Heggade) ರಾಜ್ಯಸಭೆಯಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ನಂತರ ನವದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ(PM Narendra Modi) ಯವರನ್ನು ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿಯವರನ್ನು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಭೇಟಿ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಉಪಸ್ಥಿತರಿದ್ದರು.

ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿದ್ದ ಡಾ. ವೀರೇಂದ್ರ ಹೆಗ್ಗಡೆ

ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ( Padma Vibhushan Veerendra Heggade) ರಾಜ್ಯಸಭೆಯಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನ (Pralhad Joshi) ಸೌಜನ್ಯಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.

ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನ ಸೌಜನ್ಯಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅತ್ಯಂತ ಗೌರವಯುತವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಬರಮಾಡಿಕೊಂಡು ಸನ್ಮಾನಿಸಿ ಅಭಿನಂದಿಸಿದರು.

ನಂತರ ವೀರೇಂದ್ರ ಹೆಗ್ಗಡೆ ಅವರನ್ನು ಕುರಿತು ನಮ್ಮ ಕರ್ನಾಟಕ ಹಾಗೂ ನಮ್ಮ ದೇಶದ ಹೆಮ್ಮೆಯಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದು ಭೇಟಿ ವೇಳೆ ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದ್ದಾರೆ. ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Published On - 3:21 pm, Thu, 21 July 22