ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯ ಕರಡು ಸಲ್ಲಿಕೆಗೆ ಸಿದ್ಧ: ಸಮಿತಿ ಮುಖ್ಯಸ್ಥೆ ರಂಜನಾ ದೇಸಾಯಿ
ಉತ್ತರಾಖಂಡದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ ಕರಡು ಈಗ ಪೂರ್ಣಗೊಂಡಿದೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗುತ್ತಿದೆ ಎಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇಸಾಯಿ ಹೇಳಿದ್ದಾರೆ.
ಉತ್ತರಾಖಂಡದ (Uttarakhand) ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ (Uniform Civil Code) ಕರಡು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ನ್ಯಾಯಮೂರ್ತಿ (ನಿವೃತ್ತ) ರಂಜನಾ ಪ್ರಕಾಶ್ ದೇಸಾಯಿ (Ranjana Prakash Desai )ಇಂದು(ಶುಕ್ರವಾರ)ಹೇಳಿದ್ದಾರೆ. ಕಳೆದ ವರ್ಷ ಉತ್ತರಾಖಂಡ ಸರ್ಕಾರವು ಸ್ಥಾಪಿಸಿದ ತಜ್ಞರ ಸಮಿತಿಯ ಮುಖ್ಯಸ್ಥರಾದ ದೇಸಾಯಿ, ಸಮಿತಿಯು ಎಲ್ಲಾ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಂಡು ಸಂಹಿತೆಯನ್ನು ರಚಿಸಿದೆ. ಆಯ್ದ ದೇಶಗಳಲ್ಲಿನ ಶಾಸನಬದ್ಧ ಚೌಕಟ್ಟು ಸೇರಿದಂತೆ ವಿವಿಧ ಕಾನೂನುಗಳು ಪರಿಶೀಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದಲ್ಲದೆ, ಸಮಿತಿಯು ಉತ್ತರಾಖಂಡದ ವಿವಿಧ ಭಾಗಗಳಲ್ಲಿ ಚಾಲ್ತಿಯಲ್ಲಿರುವ ವಿವಿಧ ಸಾಂಪ್ರದಾಯಿಕ ಆಚರಣೆಗಳ ಅತೀ ಸೂಕ್ಷ್ಮ ವ್ಯತ್ಯಾಸಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ ಎಂದಿದ್ದಾರೆ. ಈ ಬೆಳವಣಿಗೆ ಬಹಳ ಮಹತ್ವಪೂರ್ಣ ಎನಿಸಿದೆ. ಯಾಕೆಂದರೆ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೂಡ ಈಗ ಏಕರೂಪ ನಾಗರಿಕ ಸಂಹಿತೆ ತರುವ ಬಗ್ಗೆ ಒಲವು ತೋರಿಸಿದೆ. ಈ ಹಿನ್ನೆಲೆಯಲ್ಲಿ, ಉತ್ತರಾಖಂಡದಲ್ಲಿ ನಡೆದಿರುವ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ಉತ್ತರಾಖಂಡದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ ಕರಡು ಈಗ ಪೂರ್ಣಗೊಂಡಿದೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗುತ್ತಿದೆ ಎಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇಸಾಯಿ ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆಯ ಕರಡು ಜತೆ ಸಮಿತಿಯ ವರದಿಯನ್ನು ಶೀಘ್ರದಲ್ಲೇ ಮುದ್ರಿಸಿ ಉತ್ತರಾಖಂಡ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
#WATCH समिति ने राजनीतिक दलों के प्रतिनिधियों, राज्य वैधानिक आयोग के साथ-साथ विभिन्न धार्मिक संप्रदायों के नेताओं के साथ भी बातचीत की… मुझे आपको यह बताते हुए बेहद खुशी हो रही है कि उत्तराखंड के प्रस्तावित समान नागरिक संहिता का मसौदा अब पूरा हो गया है। ड्राफ्ट के साथ विशेषज्ञ… pic.twitter.com/pBLKjm9X4G
— ANI_HindiNews (@AHindinews) June 30, 2023
ಉತ್ತರಾಖಂಡದ ನಿವಾಸಿಗಳ ವೈಯಕ್ತಿಕ ವಿಷಯಗಳನ್ನು ನಿಯಂತ್ರಿಸುವ ವಿವಿಧ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಪರಿಶೀಲಿಸಲು ಮತ್ತು ಕರಡು ಕಾನೂನು ಅಥವಾ ಕಾನೂನುಗಳನ್ನು ತಯಾರಿಸಲು ಅಥವಾ ಅಸ್ತಿತ್ವದಲ್ಲಿರುವ ಕಾನೂನುಗಳಲ್ಲಿ ಬದಲಾವಣೆಗಳನ್ನು ಸೂಚಿಸಲು ಉತ್ತರಾಖಂಡ ಸರ್ಕಾರವು ಕಳೆದ ವರ್ಷ ಮೇ ತಿಂಗಳಲ್ಲಿ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶೆ ದೇಸಾಯಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ರಚಿಸಿತ್ತು.
ಈ ನಿಟ್ಟಿನಲ್ಲಿ ಮೇ 27, 2022 ರಂದು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಕಳೆದ ವರ್ಷ ಜೂನ್ 10 ರಂದು ಉಲ್ಲೇಖದ ನಿಯಮಗಳನ್ನು ತಿಳಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ದೇಸಾಯಿ, ಕರಡು ಯುಸಿಸಿ ಅಥವಾ ಸಮಿತಿಯ ವರದಿಯ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿದ್ದು, ಅದನ್ನು ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಧರ್ಮ, ವೈಯಕ್ತಿಕ ಕಾನೂನುಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ?
ಮಹಿಳೆಯರು, ಮಕ್ಕಳು ಮತ್ತು ಅಂಗವಿಕಲರನ್ನು ಗಮನದಲ್ಲಿಟ್ಟುಕೊಂಡು ಲಿಂಗ ಸಮಾನತೆಯನ್ನು ಖಚಿತಪಡಿಸುವುದು. ನಾವು ಅನಿಯಂತ್ರಿತತೆ ಮತ್ತು ತಾರತಮ್ಯವನ್ನು ತೊಡೆದುಹಾಕುವ ಮೂಲಕ ಎಲ್ಲರನ್ನೂ ಸಮಾನ ಹೆಜ್ಜೆಯಲ್ಲಿ ತರಲು ಪ್ರಯತ್ನಿಸಿದ್ದೇವೆ. ಸಮಿತಿಯು ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ವಿವಿಧ ದೇಶಗಳಲ್ಲಿ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಅಧ್ಯಯನ ಮಾಡಿದೆ. ಆದರೆ ಅದರ ಹೆಸರುಗಳನ್ನು ಹಂಚಿಕೊಳ್ಳಲು ದೇಸಾಯಿ ನಿರಾಕರಿಸಿದ್ದಾರೆ.
ನಾವು ಎಲ್ಲವನ್ನೂ ನೋಡಿದ್ದೇವೆ, ವೈಯಕ್ತಿಕ ಕಾನೂನುಗಳನ್ನು ಅಧ್ಯಯನ ಮಾಡಿದ್ದೇವೆ. ನಾವು ಕಾನೂನು ಆಯೋಗದ ವರದಿಯನ್ನು ಸಹ ಅಧ್ಯಯನ ಮಾಡಿದ್ದೇವೆ. ನೀವು ನಮ್ಮ ಕರಡನ್ನು ಓದಿದರೆ ಸಮಿತಿಯು ಎಲ್ಲವನ್ನೂ ಪರಿಗಣಿಸಿದೆ ಎಂದು ನಿಮಗೆ ಅನಿಸುತ್ತದೆ ಎಂದು ಅವರು ಹೇಳಿದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:48 pm, Fri, 30 June 23