AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸಿಎಂ ರೇಖಾ ಗುಪ್ತಾ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ನುಗ್ಗಿ ಘೋಷಣೆ ಕೂಗಿದ ವ್ಯಕ್ತಿ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಅವರ ವಿರುದ್ಧ ಘೋಷಣೆ ಕೂಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಗಾಂಧಿ ನಗರದ ಅಜೀತ್ ನಗರದ ಪ್ರವೀಣ್ ಶರ್ಮಾ (60) ಎಂಬ ವ್ಯಕ್ತಿ, ಟಿವಿ ಕೇಬಲ್ ವ್ಯವಹಾರ ನಡೆಸುತ್ತಿದ್ದು, ಕಳೆದ 40 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನೆಂದು ಹೇಳಿಕೊಳ್ಳುತ್ತಿದ್ದಾರೆ.

ದೆಹಲಿ ಸಿಎಂ ರೇಖಾ ಗುಪ್ತಾ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ನುಗ್ಗಿ ಘೋಷಣೆ ಕೂಗಿದ ವ್ಯಕ್ತಿ
ರೇಖಾ ಗುಪ್ತಾ
ನಯನಾ ರಾಜೀವ್
|

Updated on: Aug 22, 2025 | 2:27 PM

Share

ನವದೆಹಲಿ, ಆಗಸ್ಟ್​ 22: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ(Rekha Gupta) ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಅವರ ವಿರುದ್ಧ ಘೋಷಣೆ ಕೂಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಗಾಂಧಿ ನಗರದ ಅಜೀತ್ ನಗರದ ಪ್ರವೀಣ್ ಶರ್ಮಾ (60) ಎಂಬ ವ್ಯಕ್ತಿ, ಟಿವಿ ಕೇಬಲ್ ವ್ಯವಹಾರ ನಡೆಸುತ್ತಿದ್ದು, ಕಳೆದ 40 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನೆಂದು ಹೇಳಿಕೊಳ್ಳುತ್ತಿದ್ದಾರೆ.

ಇಂದು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಶಾಸಕ ಶ್ರೀ ಅರವಿಂದರ್ ಸಿಂಗ್ ಲವ್ಲಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರವೀಣ್ ಶರ್ಮಾ ತಮ್ಮ ಧ್ವನಿ ಮುಖ್ಯಮಂತ್ರಿಯನ್ನು ತಲುಪಬೇಕೆಂದು ಬಯಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರವೀಣ್ ಶರ್ಮಾ ಬ್ಯಾರಿಕೇಡ್‌ಗಳ ಹಿಂದೆ, ಒಂದು ಬದಿಯಲ್ಲಿ ನಿಂತಿದ್ದರು ಮತ್ತು ಅವರನ್ನು ಪೊಲೀಸರು ತಕ್ಷಣವೇ ಹಿಡಿದಿದ್ದಾರೆ. ಭದ್ರತೆಯ ಉಲ್ಲಂಘಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದರು. ರಾಷ್ಟ್ರ ರಾಜಧಾನಿಯ ಸಿವಿಲ್ ಲೈನ್ಸ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ರೇಖಾ ಗುಪ್ತಾ ಮೇಲೆ ದಾಳಿ ನಡೆದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ .

ಮತ್ತಷ್ಟು ಓದಿ: Rekha Gupta Attacked: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ

ರಾಜೇಶ್ ಭಾಯಿ ಖಿಮ್ಜಿ ಸಕರೈಯಾ ಎಂಬ ವ್ಯಕ್ತಿ ಮೊದಲು ಕೆಲವು ಕಾಗದಪತ್ರಗಳನ್ನು ಮುಖ್ಯಮಂತ್ರಿಯವರಿಗೆ ಹಸ್ತಾಂತರಿಸಿ, ನಂತರ ಕೂಗುತ್ತಾ ಸಿಂಗೆ ಹೊಡೆದು, ಕೂದಲು ಹಿಡಿದು ಎಳೆದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಕ್ಷಣವೇ ಆತನನ್ನು ಬಂಧಿಸಲಾಯಿತು. ಪೊಲೀಸ್ ಮೂಲಗಳ ಪ್ರಕಾರ, ರಾಜೇಶ್ ಸಕಾರಿಯ ಅವರ ಸಂಬಂಧಿಕರೊಬ್ಬರು ಜೈಲಿನಲ್ಲಿದ್ದಾರೆ ಮತ್ತು ಅವರು ತಮ್ಮ ಬಿಡುಗಡೆಗಾಗಿ ಅರ್ಜಿಯೊಂದಿಗೆ ಬಂದಿದ್ದರು.

ಈ ಪ್ರಕರಣವು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಇದೆ. ಅವರ ಕುಟುಂಬವು ಅವರ ಹಿನ್ನೆಲೆಯ ಬಗ್ಗೆಯೂ ಬೆಳಕು ಚೆಲ್ಲಿದೆ. ಪೊಲೀಸರು ಅವರನ್ನು ಬಂಧಿಸುವ ಮೊದಲು ಕಾರ್ಯಕ್ರಮದಲ್ಲಿದ್ದ ಇತರರು ಅವರನ್ನು ಥಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಘಟನೆಯ ಒಂದು ದಿನದ ನಂತರ, ಕೇಂದ್ರ ಗೃಹ ಸಚಿವಾಲಯ ನಡೆಸಿದ ಪರಿಶೀಲನೆಯ ನಂತರ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಭದ್ರತಾ ವ್ಯಾಪ್ತಿಯನ್ನು ಹೆಚ್ಚಿಸಲಾಯಿತು.ಝಡ್ ಶ್ರೇಣಿಯ ಭದ್ರತೆಯನ್ನು ಕಲ್ಪಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ