Draupadi Murmu: ರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಇಂದು ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

Draupadi Murmu: ರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 24, 2022 | 1:10 PM

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ (Presidential Elections) ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು (Draupadi Murmu) ಅವರು ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಂಪುಟ ಸಚಿವರು, ಬಿಜೆಪಿ ಮತ್ತು ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಇಂದು ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಬೆಳಿಗ್ಗೆ ಒಡಿಶಾ ಭವನದಿಂದ ಸಂಸತ್ತಿಗೆ ಹೊರಟ ದ್ರೌಪದಿ ಮುರ್ಮು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಜೆ.ಪಿ. ನಡ್ಡಾ ಮುಂತಾದ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ದ್ರೌಪದಿ ಮುರ್ಮು ಅವರ ನಾಮಪತ್ರ ಸಲ್ಲಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ ಸಂಸತ್ ಭವನಕ್ಕೆ ಆಗಮಿಸಿದರು. ನಾಮಪತ್ರ ಸಲ್ಲಿಸುವ ಒಂದು ದಿನದ ಮುನ್ನ ದ್ರೌಪದಿ ಮುರ್ಮು ಅವರು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಜೆ.ಪಿ. ನಡ್ಡಾ ಅವರನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೇಟಿ ಮಾಡಿದ್ದರು. ಎಲ್ಲರಿಗೂ ಧನ್ಯವಾದಗಳು. ಅಧ್ಯಕ್ಷೀಯ ಚುನಾವಣೆಗೆ ನಾನು ಎಲ್ಲರಿಂದ ಸಹಕಾರವನ್ನು ಕೋರುತ್ತೇನೆ. ನಾನು ಎಲ್ಲಾ ಮತದಾರರನ್ನು (ಶಾಸಕರನ್ನು) ಭೇಟಿ ಮಾಡುತ್ತೇನೆ. ಜುಲೈ 18ರ ಮೊದಲು ಅವರ ಬೆಂಬಲವನ್ನು ಕೇಳುತ್ತೇನೆ ಎಂದು ದ್ರೌಪದಿ ಮುರ್ಮು ಹೇಳಿದ್ದರು.

ಇದನ್ನೂ ಓದಿ: Draupadi Murmu: ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಕೆ, ಬಿಜೆಡಿ-ವೈಎಸ್​ಆರ್​ಪಿ ಬೆಂಬಲ ಘೋಷಣೆ

ಒಡಿಶಾದ ಸಂತಾಲ್ ಸಮುದಾಯದಿಂದ 64 ವರ್ಷದ ಅವರನ್ನು ಮಂಗಳವಾರ ರಾತ್ರಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿ ಎಂದು ಹೆಸರಿಸಲಾಯಿತು. ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರಮುಖ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಆಡಳಿತಾರೂಢ ಎನ್‌ಡಿಎ ಪರವಾಗಿ ಅಂಕಿ-ಅಂಶಗಳು ಹೆಚ್ಚಿರುವುದರಿಂದ ಮುರ್ಮು ಅವರ ಆಯ್ಕೆ ಬಹುತೇಕ ಖಚಿತವಾಗಿದೆ.

Published On - 1:00 pm, Fri, 24 June 22