AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್​​ಸ್ಟರ್ ಎನ್‌ಕೌಂಟರ್​: ಅನಿಲ್ ದುಜಾನಾಗೆ ಗುಂಡಿಕ್ಕಿ ಹತ್ಯೆಗೈದ ಪೊಲೀಸ್

Anil Dujana Encounter:ದುಜಾನಾ ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಸಂಘಟಿತ ಕ್ರಿಮಿನಲ್ ಗ್ಯಾಂಗ್ ಅನ್ನು ನಡೆಸುತ್ತಿದ್ದನು. ಈತನ ವಿರುದ್ಧ 18 ಕೊಲೆಗಳು, ಸುಲಿಗೆ, ದರೋಡೆ, ಭೂಹಗರಣ, ಉಚ್ಚಾಟನೆ ಸೇರಿದಂತೆ 62 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್​​ಸ್ಟರ್ ಎನ್‌ಕೌಂಟರ್​: ಅನಿಲ್ ದುಜಾನಾಗೆ ಗುಂಡಿಕ್ಕಿ ಹತ್ಯೆಗೈದ ಪೊಲೀಸ್
ಅನಿಲ್ ದುಜಾನಾ
ರಶ್ಮಿ ಕಲ್ಲಕಟ್ಟ
|

Updated on:May 04, 2023 | 4:12 PM

Share

ಉತ್ತರ ಪ್ರದೇಶದ (Uttar Pradesh) ಮೀರತ್ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF) ಗ್ಯಾಂಗ್​​ಸ್ಟರ್​​ ಅನಿಲ್ ದುಜಾನಾನನ್ನು (Gangster Anil Dujana) ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ. ಗ್ಯಾಂಗ್‌ಸ್ಟರ್ ಅನಿಲ್ ದುಜಾನಾ ಗೌತಮ್ ಬುದ್ಧ ನಗರ ಜಿಲ್ಲೆಯ ಬಾದಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದುಜಾನಾ ಗ್ರಾಮದ ನಿವಾಸಿ. ದುಜಾನಾ ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಸಂಘಟಿತ ಕ್ರಿಮಿನಲ್ ಗ್ಯಾಂಗ್ ಅನ್ನು ನಡೆಸುತ್ತಿದ್ದನು. ಈತನ ವಿರುದ್ಧ 18 ಕೊಲೆಗಳು, ಸುಲಿಗೆ, ದರೋಡೆ, ಭೂಹಗರಣ, ಉಚ್ಚಾಟನೆ ಸೇರಿದಂತೆ 62 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಉತ್ತರ ಪ್ರದೇಶದಲ್ಲಿ ಮಾಫಿಯಾ ಮತ್ತು ಗ್ಯಾಂಗ್​​ಸ್ಟರ್​​ಗಳ ವಿರುದ್ಧದ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಅನಿಲ್ ದುಜಾನಾ ಎನ್‌ಕೌಂಟರ್ ನಡೆದಿದೆ. ಝಾನ್ಸಿಯಲ್ಲಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಹತ್ಯೆಯ ನಂತರ ಯುಪಿ ಎಸ್‌ಟಿಎಫ್ ಎನ್‌ಕೌಂಟರ್‌ನಲ್ಲಿ ನಡೆಸಿದ ಎರಡನೇ ಹೈ ಪ್ರೊಫೈಲ್ ಹತ್ಯೆ ಇದಾಗಿದೆ. ಉಮೇಶ್ ಪಾಲ್ ಹತ್ಯೆಯಲ್ಲಿ ಅಸದ್ ವಾಂಟೆಂಡ್ ವ್ಯಕ್ತಿಯಾಗಿದ್ದ.

ಇದನ್ನೂ ಓದಿ:Bihar: ಬಿಹಾರದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ಬ್ರೇಕ್​​ ಹಾಕಿದ ಪಾಟ್ನಾ ಹೈಕೋರ್ಟ್

ಡಿಸೆಂಬರ್ 2022 ರಲ್ಲಿ, ಅನಿಲ್ ದುಜಾನಾ ಅವರನ್ನು ದೆಹಲಿ ಪೊಲೀಸರು ಮಯೂರ್ ವಿಹಾರ್ ಪ್ರದೇಶದಿಂದ ಬಂಧಿಸಿದರು. ದುಜಾನಾ ಅವರ ತಲೆಗೆ 50,000 ರೂ ಬಹುಮಾನ ಘೋಷಿಸಿದ್ದು ಈತ ಉತ್ತರ ಪ್ರದೇಶದ ಮೋಸ್ಟ್ ವಾಂಟೆಡ್ ಕ್ರಿಮಿನಲ್‌ಗಳ ಪಟ್ಟಿಯಲ್ಲಿದ್ದನು.

ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್‌ಎಸ್‌ಎ), ಗೂಂಡಾ ಕಾಯಿದೆ ಸೇರಿದಂತೆ ಹಲವು ಆರೋಪಗಳಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಲವು ಪ್ರಕರಣಗಳಲ್ಲಿ ಹಾಜರಾಗದ ಕಾರಣ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ದುಜಾನಾಗೆ ಬಾದಲ್ಪುರ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Thu, 4 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ