AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರಿ ಜಗನ್ನಾಥ ದೇವಾಲಯಕ್ಕೆ ಭಕ್ತರು ಇನ್ಮುಂದೆ ಹರಿದ ಜೀನ್ಸ್​, ಸ್ಕರ್ಟ್​ ತೊಟ್ಟು ಬರುವಂತಿಲ್ಲ

ಒಡಿಶಾದ ಪುರಿ ಜಗನ್ನಾಥ ದೇವಾಲಯಕ್ಕೆ ಭಕ್ತರು ಇನ್ನುಮುಂದೆ ಹರಿದ ಜೀನ್ಸ್​, ಸ್ಕರ್ಟ್​ ತೊಟ್ಟು ಬರುವಂತಿಲ್ಲ ಎಂದು ದೇವಸ್ಥಾನದ ಆಡಳಿತ ತಿಳಿಸಿದೆ. ದೇವಾಲಯವು ಜನವರಿ 1 ರಿಂದ ಭಕ್ತರಿಗೆ ಡ್ರೆಸ್ ಕೋಡ್ ಅನ್ನು ಜಾರಿಗೊಳಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇವಸ್ಥಾನದಲ್ಲಿ ಕೆಲವರು ಅಸಭ್ಯ ವಸ್ತ್ರಗಳಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ‘ನೀತಿ’ ಉಪಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಪುರಿ ಜಗನ್ನಾಥ ದೇವಾಲಯಕ್ಕೆ ಭಕ್ತರು ಇನ್ಮುಂದೆ ಹರಿದ ಜೀನ್ಸ್​, ಸ್ಕರ್ಟ್​ ತೊಟ್ಟು ಬರುವಂತಿಲ್ಲ
ಪುರಿ ಜಗನ್ನಾಥ ದೇವಸ್ಥಾನImage Credit source: Tripsavvy
ನಯನಾ ರಾಜೀವ್
|

Updated on: Oct 10, 2023 | 9:19 AM

Share

ಒಡಿಶಾದ ಪುರಿ ಜಗನ್ನಾಥ ದೇವಾಲಯ(Puri Jagannath Temple)ಕ್ಕೆ ಭಕ್ತರು ಇನ್ನುಮುಂದೆ ಹರಿದ ಜೀನ್ಸ್​, ಸ್ಕರ್ಟ್​ ತೊಟ್ಟು ಬರುವಂತಿಲ್ಲ ಎಂದು ದೇವಸ್ಥಾನದ ಆಡಳಿತ ತಿಳಿಸಿದೆ. ದೇವಾಲಯವು ಜನವರಿ 1 ರಿಂದ ಭಕ್ತರಿಗೆ ಡ್ರೆಸ್ ಕೋಡ್ ಅನ್ನು ಜಾರಿಗೊಳಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇವಸ್ಥಾನದಲ್ಲಿ ಕೆಲವರು ಅಸಭ್ಯ ವಸ್ತ್ರಗಳಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ‘ನೀತಿ’ ಉಪಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ದೇವಸ್ಥಾನದ ಘನತೆ ಮತ್ತು ಪಾವಿತ್ರ್ಯತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ದುರದೃಷ್ಟವಶಾತ್, ಕೆಲವರು ಇತರರ ಧಾರ್ಮಿಕ ಭಾವನೆಗಳನ್ನು ಲೆಕ್ಕಿಸದೆ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದು ಕಂಡುಬಂದಿದೆ ಎಂದು ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತ ಮುಖ್ಯಸ್ಥ ರಂಜನ್ ಕುಮಾರ್ ದಾಸ್ ಹೇಳಿದ್ದಾರೆ.

ದೇವಸ್ಥಾನದಲ್ಲಿ ಹರಿದ ಜೀನ್ಸ್ ಪ್ಯಾಂಟ್, ಸ್ಲೀವ್ ಲೆಸ್ ಡ್ರೆಸ್, ಹಾಫ್ ಪ್ಯಾಂಟ್ ಹಾಕಿಕೊಂಡು ಸಮುದ್ರ ತೀರದಲ್ಲೋ, ಉದ್ಯಾನವನದಲ್ಲೋ ಅಡ್ಡಾಡುತ್ತಿರುವುದು ಕಂಡು ಬಂದಿದ್ದು, ದೇವಸ್ಥಾನ ದೇವರ ವಾಸಸ್ಥಾನವೇ ಹೊರತು ಮನರಂಜನಾ ಸ್ಥಳವಲ್ಲ ಎಂದು ಹೇಳಿದ್ದಾರೆ. ಯಾವ ರೀತಿಯ ಉಡುಪುಗಳನ್ನು ಅನುಮತಿಸಬೇಕು ಎಂಬುದನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಅಚ್ಚರಿಗಳ ಆಲಯ.. ಪುರಿ ದೇಗುಲದಲ್ಲಿ ವಿಜ್ಞಾನ ಲೋಕವೇ ಚಕಿತಗೊಳ್ಳುವ ಅಚ್ಚರಿ!

ಜನವರಿ 1, 2024 ರಿಂದ ದೇವಾಲಯದೊಳಗೆ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ದೇವಾಲಯದ ‘ಸಿಂಗ ದ್ವಾರ’ದಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ಮತ್ತು ದೇವಾಲಯದೊಳಗಿನ ಪ್ರತೀಹಾರಿ ಸೇವಕರಿಗೆ ಕೋಡ್ ಅನ್ನು ಜಾರಿಗೊಳಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಹೇಳಿದ್ದಾರೆ.

ದೇವಾಲಯದ ಆಡಳಿತ ಮಂಡಳಿ ಮಂಗಳವಾರದಿಂದ ಭಕ್ತರಲ್ಲಿ ವಸ್ತ್ರ ಸಂಹಿತೆ ಕುರಿತು ಜಾಗೃತಿ ಮೂಡಿಸಲಿದೆ ಎಂದರು. ಹಾಫ್ ಪ್ಯಾಂಟ್, ಶಾರ್ಟ್ಸ್, ಹರಿದ ಜೀನ್ಸ್, ಸ್ಕರ್ಟ್ ಮತ್ತು ಸ್ಲೀವ್‌ಲೆಸ್ ಡ್ರೆಸ್‌ಗಳನ್ನು ಧರಿಸಿದವರಿಗೆ ದೇವಸ್ಥಾನದೊಳಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ