ಡೆಹ್ರಾಡೂನ್‌ನಲ್ಲಿ ಮದ್ಯಪಾನ ಮಾಡಿದ ಯುವಕರ ಕಾರು ಡಿಕ್ಕಿ; 6 ವಿದ್ಯಾರ್ಥಿಗಳ ಸಾವು

|

Updated on: Nov 15, 2024 | 8:02 PM

ಉತ್ತರಾಖಂಡದ ಡೆಹ್ರಾಡೂನ್​​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 6 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ. ಕುಡಿದು ಕಾರಿನಲ್ಲಿ ಜಾಲಿ ರೈಡ್​​ ಮಾಡುತ್ತಿದ್ದ ವಿದ್ಯಾರ್ಥಿಗಳಿಂದ ಈ ಅಪಘಾತ ಸಂಭವಿಸಿದೆ. ಈ ವೇಳೆ ಟ್ರಕ್​ಗೆ ಕಾರು ಡಿಕ್ಕಿಯಾಗಿ 6 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಡೆಹ್ರಾಡೂನ್‌ನಲ್ಲಿ ಮದ್ಯಪಾನ ಮಾಡಿದ ಯುವಕರ ಕಾರು ಡಿಕ್ಕಿ; 6 ವಿದ್ಯಾರ್ಥಿಗಳ ಸಾವು
ಕಾರು ಅಪಘಾತ
Follow us on

ಡೆಹ್ರಾಡೂನ್: ನವೆಂಬರ್ 12ರಂದು ಡೆಹ್ರಾಡೂನ್‌ನಲ್ಲಿ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಆರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ವಿದ್ಯಾರ್ಥಿಗಳ ದೇಹಗಳು ಚೆಲ್ಲಾಪಿಲ್ಲಿಯಾಗಿವೆ. ರಾತ್ರಿ ಕುಡಿದು ಪಾರ್ಟಿ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳು ಮೃತರಾಗಿದ್ದಾರೆ.

ನವೆಂಬರ್ 12ರಂದು ಉತ್ತರಾಖಂಡ್‌ನ ಡೆಹ್ರಾಡೂನ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ವಿದ್ಯಾರ್ಥಿಗಳು ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಗಾಯಗೊಂಡ ಸುಮಾರು ಒಂದೆರಡು ದಿನಗಳ ನಂತರ, ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಕಾರು ಅಪಘಾತಕ್ಕೂ ಮುನ್ನ ಆ ಸ್ನೇಹಿತರ ಗುಂಪು ಮದ್ಯ ಸೇವಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಹೊರಬಿದ್ದಿದೆ. ಇದಾದ ನಂತರ ಕುಡಿದು ವಾಹನ ಚಲಾಯಿಸಿದ ಆ ಯುವಕರು ಮೃತಪಟ್ಟಿದ್ದಾರೆ.


ಇದನ್ನೂ ಓದಿ: ತಾಜ್ ಮಹಲ್ ನಿರ್ಮಾಣವಾಗಿದ್ದು ಹೇಗೆ?; ಎಐ ವಿಡಿಯೋ ವೈರಲ್

ನವೆಂಬರ್ 12ರಂದು ಮಧ್ಯರಾತ್ರಿ 1.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಒಎನ್‌ಜಿಸಿ ಚೌಕ್‌ನಲ್ಲಿ ಡಿಕ್ಕಿ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಇದರ ಪರಿಣಾಮ ಕೆಲವರ ತಲೆ ತುಂಡಾಗಿದ್ದು, ಕೆಲವರ ದೇಹದ ಭಾಗಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊಗಳು ಮೆದುಳಿನ ಒಂದು ಭಾಗವು ಸ್ಥಳದಲ್ಲೇ ಕಂಡುಬಂದಿದೆ ಎಂದು ಸೂಚಿಸಿವೆ. ಟ್ರಕ್ ಚಾಲಕ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ಕಾರುಗಳನ್ನು ಕತ್ತರಿಸಿ ವಿದ್ಯಾರ್ಥಿಗಳ ಮೃತದೇಹಗಳನ್ನು ಹೊರತೆಗೆಯಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ