ವಿದ್ಯುತ್ ತಂತಿ ಮೇಲೆ ಹರಿದ ಟ್ರಕ್​, ಏಕಾಏಕಿ ಹೊತ್ತಿಕೊಂಡ ಬೆಂಕಿ, ಚಾಲಕ ಸಾವು

|

Updated on: Feb 11, 2024 | 11:46 AM

ಆಂಧ್ರಪ್ರದೇಶದ ಎನ್‌ಟಿಆರ್‌ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಟ್ರಕ್‌ ವಿದ್ಯುತ್‌ ತಂತಿಗೆ ತಗುಲಿ ವ್ಯಕ್ತಿಯೊಬ್ಬರು ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಟ್ರಕ್ ಬೆಂಕಿಗೆ ಆಹುತಿಯಾಗಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ವಿದ್ಯುತ್ ತಂತಿ ಮೇಲೆ ಹರಿದ ಟ್ರಕ್​, ಏಕಾಏಕಿ ಹೊತ್ತಿಕೊಂಡ ಬೆಂಕಿ, ಚಾಲಕ ಸಾವು
ಟ್ರಕ್​ಗೆ ಬೆಂಕಿ
Image Credit source: India Today
Follow us on

ಟ್ರಕ್​ ಒಂದು ತುಂಡಾಗಿ ಬಿದ್ದಿದ್ದ ವಿದ್ಯುತ್ ಲೈನ್​ ಮೇಲೆ ಹರಿದ ಪರಿಣಾಮ ತಕ್ಷಣವೇ ಬೆಂಕಿ ಹೊತ್ತಿಕೊಂಡು, ಚಾಲಕ ಸಮೇತ ಸುಟ್ಟು ಕರಕಲಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಚಾಲಕನ ಮೃತದೇಹವನ್ನು ಮೈಲವರಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ತನಿಖೆ ನಡೆಯುತ್ತಿದೆ. ಇದಕ್ಕೂ ಮುನ್ನ ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು, 15 ಮಂದಿ ಗಾಯಗೊಂಡಿದ್ದರು.

ಜಾನುವಾರುಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಕಬ್ಬಿಣ ಸಾಗಿಸುತ್ತಿದ್ದ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಘಟನೆ ನೆಲ್ಲೂರು ಮುಸುನೂರು ಟೋಲ್ ಪ್ಲಾಜಾದಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಬ್ಬಿಣ ತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಪ್ರಯಾಣಿಕರ ಬಸ್‌ಗೆ ಡಿಕ್ಕಿ ಹೊಡೆದಿದೆ.

ಮತ್ತಷ್ಟು ಓದಿ: ವಿದ್ಯುತ್ ಸ್ಪರ್ಶ: ಕೂಡ್ಲಿಗಿಯ ಶಿವಪುರ ಗ್ರಾಮ‌ ಪಂಚಾಯತ್ ಸದಸ್ಯ ಸಾವು

ವಿದ್ಯುತ್ ಸ್ಪರ್ಶಿಸಿ ತಾಯಿ, ಮಗು ಸಾವು
ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಮತ್ತು ಆಕೆಯ ಒಂಬತ್ತು ತಿಂಗಳ ಮಗು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಕಳೆದ ವರ್ಷ ನಡೆದಿತ್ತು.

ತಮಿಳುನಾಡಿನಲ್ಲಿ ದೀಪಾವಳಿ ಆಚರಿಸಿ ಬೆಂಗಳೂರಿಗೆ ಆಗಮಿಸಿದ್ದ ಸೌಂದರ್ಯ (23ವ) ಮತ್ತು ಅವರ ಪುತ್ರಿ ಸುವೀಕ್ಷಾ(9 ತಿಂಗಳ ಮಗು) ಮೊನ್ನೆ ನವೆಂಬರ್ 19 ರಂದು ವೈಫ್‌ಫೀಲ್ಡ್ ಮುಖ್ಯರಸ್ತೆಯ ಹೋಪ್ ಫಾರ್ಮ್ ಜಂಕ್ಷನ್ ಬಳಿ ಪಾದಚಾರಿ ಮಾರ್ಗದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದರು.

ಬೆಸ್ಕಾಂನ ವೆಬ್‌ಸೈಟ್‌ ಪ್ರಕಾರ, 2015-16 ರಿಂದ 2021-22 ರವರೆಗೆ ಪ್ರತಿ ವರ್ಷ ಸರಾಸರಿ 200 ರಿಂದ 280 ಅಪಘಾತಗಳು ವರದಿಯಾಗಿವೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ