AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಚಾಲನಾ ಪರವಾನಗಿ ಮಾಡಿಸಬೇಕಾ? ಈ ರಾಜ್ಯದಲ್ಲಿ ಆಗಸ್ಟ್ 1ರಿಂದ ಹೊಸ ನಿಯಮ ಜಾರಿ

ನೀವೇನಾದರೂ ಮಹಾರಾಷ್ಟ್ರದಲ್ಲಿ ಹೊಸ ಚಾಲನಾ ಪರವಾನಗಿ ಪಡೆಯಲು ಯೋಜಿಸುತ್ತಿದ್ದರೆ, ಇತ್ತೀಚೆಗೆ ಪ್ರಕಟಿಸಲಾದ ಹೊಸ ಬದಲಾವಣೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು. ವರದಿಗಳ ಪ್ರಕಾರ, ರಾಜ್ಯ ಸಾರಿಗೆ ಇಲಾಖೆಯು ಹೊಸ ಡ್ರೈವಿಂಗ್ ಲೈಸೆನ್ಸ್‌ಗಳಿಗಾಗಿ ಆಗಸ್ಟ್ 1ರಿಂದ ರಾಜ್ಯದ ಮೂಲ ನಿವಾಸ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲು ಸಿದ್ಧತೆ ನಡೆಸುತ್ತಿದೆ. ಈ ನಿಯಮ ಜಾರಿಗೆ ಬಂದರೆ, ಮೊದಲ ಬಾರಿಗೆ ಡ್ರೈವಿಂಗ್ ಲೈಸೆನ್ಸ್‌ಗೆ ಅರ್ಜಿ ಸಲ್ಲಿಸುವವರು ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಈ ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ.

ಹೊಸ ಚಾಲನಾ ಪರವಾನಗಿ ಮಾಡಿಸಬೇಕಾ? ಈ ರಾಜ್ಯದಲ್ಲಿ ಆಗಸ್ಟ್ 1ರಿಂದ ಹೊಸ ನಿಯಮ ಜಾರಿ
Driving LicenceImage Credit source: Getty Image
ಸುಷ್ಮಾ ಚಕ್ರೆ
|

Updated on: Jul 17, 2026 | 3:20 PM

Share

ಮುಂಬೈ, ಜುಲೈ 17: ಮಹಾರಾಷ್ಟ್ರದ ಚಾಲನಾ ಪರವಾನಗಿ ನಿಯಮಗಳು ಆಗಸ್ಟ್ 1ರಿಂದ ಬದಲಾಗಲಿವೆ. ಇನ್ಮುಂದೆ ನಿವಾಸ ಪ್ರಮಾಣಪತ್ರವಿಲ್ಲದೆ ಚಾಲನಾ ಪರವಾನಗಿಯನ್ನು (Driving Licence) ನೀಡಲಾಗುವುದಿಲ್ಲ. ಮುಂದಿನ ತಿಂಗಳಿನಿಂದ ಚಾಲನಾ ಪರವಾನಗಿಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಈ ಪ್ರಮುಖ ಬದಲಾವಣೆಯನ್ನು ಮಾಡಲಿದೆ. ನೀವು ಮಹಾರಾಷ್ಟ್ರದಲ್ಲಿ ವಾಸಿಸುತ್ತಿದ್ದರೆ ಮತ್ತು ಡ್ರೈವಿಂಗ್ ಲೈಸೆನ್ಸ್ ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ ಈ ಹೊಸ ನಿಯಮಗಳನ್ನು ತಿಳಿದುಕೊಳ್ಳುವುದು ಉತ್ತಮ. ಮಹಾರಾಷ್ಟ್ರದಲ್ಲಿ ಚಾಲನಾ ಪರವಾನಗಿ ಪಡೆಯಲು ನಿವಾಸ ಪ್ರಮಾಣಪತ್ರವನ್ನು ಒದಗಿಸುವುದು ಕಡ್ಡಾಯವಾಗಿರುತ್ತದೆ.

ಈ ಪ್ರಸ್ತಾವನೆಗೆ ಅಂತಿಮ ಅನುಮೋದನೆ ದೊರೆತರೆ ಈ ಹೊಸ ನಿಯಮವು ಆಗಸ್ಟ್ 1ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಈ ಕ್ರಮವು ಸಂಪೂರ್ಣ ಪರವಾನಗಿ ನೀಡುವ ಪ್ರಕ್ರಿಯೆಯನ್ನು ಹೆಚ್ಚು ಸುರಕ್ಷಿತ ಮತ್ತು ವ್ಯವಸ್ಥಿತಗೊಳಿಸುತ್ತದೆ ಎಂದು ಸರ್ಕಾರ ಹೇಳಿದೆ. ಅಂದಹಾಗೆ, ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಇತ್ತೀಚೆಗೆ ವಿಧಾನಸಭೆಯಲ್ಲಿ ಈ ಹೊಸ ನಿಯಮವನ್ನು ಪ್ರಸ್ತಾಪಿಸಿದ್ದರು. ರಾಜ್ಯ ಮಟ್ಟದಲ್ಲಿ ಪರವಾನಗಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿಸಲು ಈ ಹೊಸ ನೀತಿಯನ್ನು ರೂಪಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಹೊಸ ನಿಯಮದ ಕರಡನ್ನು ಅಂತಿಮ ಅನುಮೋದನೆಗಾಗಿ ಕಾನೂನು ಮತ್ತು ನ್ಯಾಯ ಇಲಾಖೆಗೆ ಕಳುಹಿಸಲಾಗಿದೆ. ಇದಕ್ಕೆ ಹಸಿರು ನಿಶಾನೆ ಸಿಕ್ಕ ತಕ್ಷಣ, ಅದನ್ನು ತಕ್ಷಣವೇ ಜಾರಿಗೆ ತರಲಾಗುವುದು.

ಇದನ್ನೂ ಓದಿ: Driving Licence: ಸುಲಭವಾಗಿ ಆನ್‌ಲೈನ್‌ನಲ್ಲಿ ಡ್ರೈವಿಂಗ್ ಲೈಸೆನ್ಸ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ಹೊಸ ನಿಯಮಗಳಲ್ಲಿ ಆಗಲಿರುವ ಬದಲಾವಣೆಗಳೇನು?:

ರಾಜ್ಯ ಸಾರಿಗೆ ಇಲಾಖೆಯು ಹೊಸ ಡ್ರೈವಿಂಗ್ ಲೈಸೆನ್ಸ್‌ಗೆ ಅರ್ಜಿ ಸಲ್ಲಿಸುವವರಿಂದ ಮಹಾರಾಷ್ಟ್ರದ ಮೂಲ ನಿವಾಸ ಪ್ರಮಾಣ ಪತ್ರವನ್ನು ಕೇಳಲು ಯೋಜಿಸುತ್ತಿದೆ. ಇದು ಜಾರಿಗೆ ಬಂದರೆ, ಹೊಸ ಚಾಲನಾ ಪರವಾನಗಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಬಹುದು. ಆದರೆ, ಈ ನಿಯಮಕ್ಕೆ ಸಂಬಂಧಿಸಿದಂತೆ ಇನ್ನು ಅಂತಿಮ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿಲ್ಲ ಮತ್ತು ಅಧಿಕೃತ ಘೋಷಣೆಯ ನಂತರವಷ್ಟೇ ಇದು ಜಾರಿಗೆ ಬರಲಿದೆ. ಈ ನಿಯಮಗಳು ಮಹಾರಾಷ್ಟ್ರಕ್ಕೆ ಮಾತ್ರ ಅನ್ವಯವಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ