AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದ್ಲಾಪುರ ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತೆ ಉದ್ಧವ್ ಠಾಕ್ರೆ ಒತ್ತಾಯ

ಶನಿವಾರದ 'ಮಹಾರಾಷ್ಟ್ರ ಬಂದ್' ರಾಜಕೀಯವಲ್ಲ ಎಂದ ಠಾಕ್ರೆ, ಬಂದ್ "ವಿಕೃತಿ" ವಿರುದ್ಧವಾಗಿದೆ. ಆದ್ದರಿಂದ ಜಾತಿ ಮತ್ತು ಧರ್ಮ ಭೇದವಿಲ್ಲದೆ ಜನರು ಇದರಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ಜನರ ಪರವಾಗಿ ಬಂದ್ ಆಚರಿಸಲಾಗುವುದು ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥರು ತಿಳಿಸಿದ್ದಾರೆ.

ಬದ್ಲಾಪುರ ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತೆ ಉದ್ಧವ್ ಠಾಕ್ರೆ ಒತ್ತಾಯ
ಉದ್ದವ್ ಠಾಕ್ರೆ
ರಶ್ಮಿ ಕಲ್ಲಕಟ್ಟ
|

Updated on:Aug 23, 2024 | 3:45 PM

Share

ಮುಂಬೈ ಆಗಸ್ಟ್ 23: ಬದ್ಲಾಪುರದಲ್ಲಿ (Badlapur Case) ಇಬ್ಬರು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸಿದವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕು. ಒಂದು ವೇಳೆ ಹಾಗೆ ಮಾಡದಿದ್ದರೆ ಪ್ರತಿಪಕ್ಷಗಳು ಬೀದಿಗಿಳಿಯಲಿವೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ( Uddhav Thackeray) ಶುಕ್ರವಾರ ಹೇಳಿದ್ದಾರೆ.

ಶನಿವಾರದ ‘ಮಹಾರಾಷ್ಟ್ರ ಬಂದ್’ ರಾಜಕೀಯವಲ್ಲ ಎಂದ ಠಾಕ್ರೆ, ಬಂದ್ “ವಿಕೃತಿ” ವಿರುದ್ಧವಾಗಿದೆ. ಆದ್ದರಿಂದ ಜಾತಿ ಮತ್ತು ಧರ್ಮ ಭೇದವಿಲ್ಲದೆ ಜನರು ಇದರಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ಜನರ ಪರವಾಗಿ ಬಂದ್ ಆಚರಿಸಲಾಗುವುದು ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮಹಾರಾಷ್ಟ್ರದ ಬದ್ಲಾಪುರದ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆಗಸ್ಟ್ 17 ರಂದು, ಬಾಲಕಿಯರ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲೆಯ ಅಟೆಂಡರ್‌ನನ್ನು ಪೊಲೀಸರು ಬಂಧಿಸಿದ್ದರು.

ಪ್ರತಿಭಟನೆಯ ಬಗ್ಗೆ ಆಡಳಿತಾರೂಢ ಏಕನಾಥ್ ಶಿಂಧೆ ಸರ್ಕಾರದ ಕ್ರಮವನ್ನು ಟೀಕಿಸಿದ ಠಾಕ್ರೆ, “ಬದ್ಲಾಪುರದಲ್ಲಿ ಇನ್ನೂ ಬಂಧನಗಳು ನಡೆಯುತ್ತಿವೆ. ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಇಲ್ಲವಾದಲ್ಲಿ ಬೀದಿಗಿಳಿಯತ್ತೇವೆ ಎಂದಿದ್ದಾರೆ. ಪ್ರತಿಭಟನೆಯ ವೇಳೆ ರೈಲ್ವೆ ನಿಲ್ದಾಣ ಮತ್ತು ಬದ್ಲಾಪುರದ ಇತರ ಭಾಗಗಳಲ್ಲಿ ಕಲ್ಲು ತೂರಾಟದ ಘಟನೆಗಳಲ್ಲಿ ಕನಿಷ್ಠ 25 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಹಿಂಸಾಚಾರದ ವೇಳೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 72 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ

ಪೋಕ್ಸೋ ಕಾಯ್ದೆಯ ಸೆಕ್ಷನ್ 19 ರ ನಿಬಂಧನೆಗಳನ್ನು ಅನುಸರಿಸದ ಶಾಲಾ ಅಧಿಕಾರಿಗಳ ವಿರುದ್ಧ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಎಫ್‌ಐಆರ್ ದಾಖಲಿಸಿದೆ.

ಅಪ್ರಾಪ್ತರ ವಿರುದ್ಧ ಅಂತಹ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿದಾಗ, ಮುಂದಿನ ಕ್ರಮಕ್ಕಾಗಿ ಪೊಲೀಸ್ ಅಧಿಕಾರಿಗಳಿಗೆ ವರದಿ ಮಾಡಬೇಕಾಗಿದೆ. ಎಎನ್‌ಐ ವರದಿಯ ಪ್ರಕಾರ, ಶಾಲೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಲಿಲ್ಲ ಮತ್ತು ಅದಕ್ಕಾಗಿಯೇ ಅವರ ವಿರುದ್ಧ ಪೋಕ್ಸೊ ಕಾಯ್ದೆಯ ಸೆಕ್ಷನ್ 21 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ಇದು ಅದೇ ಕಾಯ್ದೆಯ ಸೆಕ್ಷನ್ 19 ರ ಉಲ್ಲಂಘನೆಗಾಗಿ ಶಿಕ್ಷೆಯಾಗಿದೆ.

ಇದನ್ನೂ ಓದಿ: ಅರ್ಹತೆ ಹೊಂದಿರದ ಸಿಬ್ಬಂದಿಯಿಂದ ವಿಮಾನ ನಿರ್ವಹಣೆ: ಏರ್ ಇಂಡಿಯಾಗೆ ₹98 ಲಕ್ಷ ದಂಡ

ಮಹಾರಾಷ್ಟ್ರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (MSCPCR) ರಾಜ್ಯದಾದ್ಯಂತ ಪ್ರತಿ ಪೊಲೀಸ್ ಠಾಣೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗಾಗಿ ವಿಶೇಷ ಶಾಖೆಗಳನ್ನು ಅಥವಾ “ಮಿನಿ-ಪೊಲೀಸ್ ಠಾಣೆಗಳನ್ನು” ಸ್ಥಾಪಿಸಲು ಶಿಫಾರಸು ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Fri, 23 August 24