Draupadi Murmu: ಒಡಿಶಾದ ದೇಗುಲದಲ್ಲಿ ಕಸ ಗುಡಿಸಿ, ಪೂಜೆ ಸಲ್ಲಿಸಿದ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ದೇಗುಲಕ್ಕೆ ಬಂದಿದ್ದ ಇತರ ಭಕ್ತರು ಮುರ್ಮು ಅವರನ್ನು ಅಭಿನಂದಿಸಿದರು. ಮುರ್ಮು ಅವರು ಸಹ ಭಕ್ತರಿಗೆ ನಗುನಗುತ್ತಲೇ ಪ್ರತಿವಂದಿಸಿದರು.

Draupadi Murmu: ಒಡಿಶಾದ ದೇಗುಲದಲ್ಲಿ ಕಸ ಗುಡಿಸಿ, ಪೂಜೆ ಸಲ್ಲಿಸಿದ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
ಒಡಿಶಾದ ದೇಗುದಲ್ಲಿ ದ್ರೌಪದಿ ಮುರ್ಮು ಪೂಜೆ ಸಲ್ಲಿಸಿದರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 22, 2022 | 10:59 AM

ಭುವನೇಶ್ವರ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (National Democratic Alliance – NDA) ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಬುಧವಾರ (ಜೂನ್ 22) ಮುಂಜಾನೆ ಒಡಿಶಾದ ರೈರಂಗ್​ಪುರ್ ನಗರದ ಜಗನ್ನಾಥ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಮುರ್ಮು ಭೇಟಿ ನೀಡುವ ಹಿನ್ನೆಲೆಯಲ್ಲಿ ದೇಗುಲಕ್ಕೆ ಭಾರೀ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿತ್ತು. ದೇಗುಲಕ್ಕೆ ಬಂದಿದ್ದ ಇತರ ಭಕ್ತರು ಮುರ್ಮು ಅವರನ್ನು ಅಭಿನಂದಿಸಿದರು. ಮುರ್ಮು ಅವರು ಸಹ ಭಕ್ತರಿಗೆ ನಗುನಗುತ್ತಲೇ ಪ್ರತಿವಂದನೆ ಸಲ್ಲಿಸಿದರು. ರೈರಂಗ್​ಪುರದ ಶಿವ ದೇಗುಲಕ್ಕೂ ಭೇಟಿ ನೀಡಿದ ಅವರು, ಪ್ರಾರ್ಥನೆ ಸಲ್ಲಿಸುವ ಮೊದಲು ದೇಗುಲ ಪ್ರಾಂಗಣದಲ್ಲಿ ಕಸಗುಡಿಸಿದರು.

ಈ ಮೊದಲು ಜಾರ್ಖಂಡ್ ರಾಜ್ಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಮುರ್ಮು ಅವರನ್ನು ತನ್ನ ರಾಷ್ಟ್ರಪತಿ ಅಭ್ಯರ್ಥಿಯಾಗಿ ಎನ್​ಡಿಎ ನಿನ್ನೆಯಷ್ಟೇ (ಜೂನ್ 21) ಘೋಷಿಸಿತ್ತು. ವಿರೋಧ ಪಕ್ಷಗಳು ತಮ್ಮ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ ಅವರನ್ನು ಘೋಷಿಸಿದೆ.

ಇದನ್ನೂ ಓದಿ
Image
Draupadi Murmu Profile: ದ್ರೌಪದಿ ಮುರ್ಮು ಎನ್​ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ! ಯಾರಿವರು? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ
Image
Draupadi Murmu ರಾಷ್ಟ್ರಪತಿ ಚುನಾವಣೆ: ಎನ್​​ಡಿಎಯ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹೆಸರು ಘೋಷಣೆ
Image
Yashwant Sinha ರಾಷ್ಟ್ರಪತಿ ಚುನಾವಣೆ: ಯಶವಂತ್ ಸಿನ್ಹಾ ವಿರೋಧ ಪಕ್ಷಗಳ ಅಭ್ಯರ್ಥಿ
Image
Presidential polls 2022 ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ವಿರೋಧ ಪಕ್ಷಗಳ ಸಭೆಯಲ್ಲಿ ತೀರ್ಮಾನ

ದ್ರೌಪದಿ ಮುರ್ಮು ಯಾರು?

ಸಂತಲ್ ಸಮುದಾಯದ ದ್ರೌಪದಿ ಮುರ್ಮು 1997ರಲ್ಲಿ ರೈರಂಗ್​ಪುರದ ನಗರ ಪಂಚಾಯಿತಿಯ ಕೌನ್ಸಿಲರ್ ಆಗಿ ರಾಜಕೀಯ ಜೀವನ ಆರಂಭಿಸಿದರು. ಬುದ್ಧಿವಂತಿಕೆ ಮತ್ತು ಚುರುಕಿನ ಆಡಳಿತದಿಂದ ಬಹುಬೇಗ ಮೇಲೇರಿಸಿದರು. 2000ನೇ ಇಸವಿಯಲ್ಲಿ ಒಡಿಶಾ ಸರ್ಕಾರದ ಸಚಿವರಾದರು. 2015ರಲ್ಲಿ ಜಾರ್ಝಂಡ್ ರಾಜ್ಯಪಾಲರಾದರು.

ರೈರಂಗ್​ಪುರ್​ ಕ್ಷೇತ್ರದಿಂದ ಎರಡು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಬಿಜು ಜನತಾ ದಳ (ಬಿಜೆಡಿ) ಪಕ್ಷವು ಬಿಜೆಪಿಯೊಂದಿಗೆ ನಂಟು ಕಳೆದುಕೊಂಡ ನಂತರ ನಡೆದ ಚುನಾವಣೆಯಲ್ಲಿ (2009) ಮುರ್ಮು ತಮ್ಮ ಸ್ಥಾನ ಉಳಿಸಿಕೊಂಡಿದ್ದರು. ಆ ವರ್ಷ ನಡೆದ ಚುನಾವಣೆಯಲ್ಲಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಇಡೀ ರಾಜ್ಯದಲ್ಲಿ ಜಯಗಳಿಸಿತ್ತು. ಜಾರ್ಖಂಡ್ ರಾಜ್ಯದ ಮೊದಲ ಮಹಿಳಾ ರಾಜ್ಯಪಾಲರಾಗಿದ್ದ ಗೌರವವೂ ಅವರಿಗೆ ಸಂದಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:49 am, Wed, 22 June 22

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು