AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾರುಖ್​ ಖಾನ್ ಬಿಜೆಪಿ ಸೇರಿದರೆ, ಡ್ರಗ್ಸ್​ ಸಕ್ಕರೆ ಪುಡಿಯಾಗಿ ಬದಲಾಗುತ್ತದೆ’-ಮಹಾ ಸಚಿವನ ವ್ಯಂಗ್ಯ

ಗುಜರಾತ್​ನ ಮುಂದ್ರಾ ಬಂದರಿನಲ್ಲಿ ಭಾರೀ ಪ್ರಮಾಣದ ಮಾದಕದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಆ ಬಗ್ಗೆ ತನಿಖೆ ನಡೆಸದೆ, ಆರ್ಯನ್​ ಖಾನ್​ರನ್ನು ಟಾರ್ಗೆಟ್​ ಮಾಡಲಾಗುತ್ತಿದೆ ಎಂದೂ ಛಗನ್ ಭುಜ್​ಬಲ್ ಟೀಕಿಸಿದ್ದಾರೆ.

‘ಶಾರುಖ್​ ಖಾನ್ ಬಿಜೆಪಿ ಸೇರಿದರೆ, ಡ್ರಗ್ಸ್​ ಸಕ್ಕರೆ ಪುಡಿಯಾಗಿ ಬದಲಾಗುತ್ತದೆ’-ಮಹಾ ಸಚಿವನ ವ್ಯಂಗ್ಯ
ಛಗನ್​ ಭುಜ್​ಬಲ್​
TV9 Web
| Edited By: |

Updated on:Oct 24, 2021 | 1:29 PM

Share

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನ ಡ್ರಗ್ಸ್​ ಪಾರ್ಟಿ ಪ್ರಕರಣದಲ್ಲಿ ಬಾಲಿವುಡ್​ ನಟ ಶಾರುಖ್ ಖಾನ್​ ಪುತ್ರ ಆರ್ಯನ್​ ಖಾನ್(Aryan Khan)​​ರನ್ನು ಬಂಧಿಸಿ, ಅವರಿಗೆ ಜಾಮೀನು ಕೂಡ ನೀಡದೆ ನಿರಂತರವಾಗಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಮಹಾರಾಷ್ಟ್ರ ಸಚಿವ, ಎನ್​ಸಿಪಿ ಮುಖಂಡ ಛಗನ್ ಭುಜ್​ಬಲ್​ ಟೀಕಿಸಿದ್ದಾರೆ. ಈಗ ಏನಾದರೂ ಶಾರುಖ್​ ಖಾನ್ ಬಿಜೆಪಿಗೆ ಸೇರ್ಪಡೆಯಾದರೆ ಡ್ರಗ್ಸ್​ ಎನ್ನುವುದು ಸಕ್ಕರೆಯ ಪುಡಿಯಾಗಿ ಬದಲಾಗಬಹುದು ಎಂದು ವ್ಯಂಗ್ಯವಾಡಿದ್ದಾರೆ.  

ಗುಜರಾತ್​ನ ಮುಂದ್ರಾ ಬಂದರಿನಲ್ಲಿ ಭಾರೀ ಪ್ರಮಾಣದ ಮಾದಕದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಪದೇಪದೆ ಹೆರಾಯಿನ್​​​ಗಳು ಸಿಕ್ಕಿವೆ. ಈ ಪ್ರಕರಣವನ್ನು ವ್ಯಾಪಕವಾಗಿ ತನಿಖೆ ನಡೆಸುವುದು ಬಿಟ್ಟು, ಎನ್​ಸಿಬಿ ಶಾರುಖ್​ ಖಾನ್​ ಪುತ್ರನನ್ನು ಹಿಡಿದುಕೊಂಡಿದೆ ಎಂದು ಹೇಳಿದ್ದಾರೆ.  ಹಾಗೇ, ಶಾರುಖ್​ ಖಾನ್​ ಬಿಜೆಪಿ ಸೇರ್ಪಡೆಯಾದರೆ ಡ್ರಗ್ಸ್​​ನ್ನು ಸಕ್ಕರೆ ಪೌಡರ್​ ಎಂದು ನಿರೂಪಿಸಿ, ಆರ್ಯನ್ ಬಿಡುಗಡೆಯಾಗುತ್ತದೆ ಎಂದು ಹೇಳಿದ್ದಾರೆ.

ಡ್ರಗ್ಸ್​ ಕೇಸ್​​ನಲ್ಲಿ ಆರ್ಯನ್ ಖಾನ್​ಗೆ ಜಾಮೀನು ಕೂಡ ಸಿಗುತ್ತಿಲ್ಲ. ಇದೀಗ ಅವರ ಪರ ವಕೀಲರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಇತ್ತೀಚೆಗೆ ಜಮ್ಮು-ಕಾಶ್ಮಿರದ ಮೆಹಬೂಬಾ ಮುಫ್ತಿ ಕೂಡ ಆರ್ಯನ್​ ಬಂಧನದ ಬಗ್ಗೆ ಕಿಡಿಕಾರಿದ್ದರು. ಅವರು ಖಾನ್​ ಎಂಬ ಒಂದೇ ಕಾರಣಕ್ಕೆ ಟಾರ್ಗೆಟ್​ ಮಾಡಲಾಗುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಆರ್ಯನ್​ ಖಾನ್​ ಜೊತೆ ಸ್ನೇಹ ಹೊಂದಿರುವ ಅನನ್ಯಾ ಪಾಂಡೆ ಅವರಿಗೂ ಈಗ ಸಂಕಷ್ಟ ಎದುರಾಗಿದೆ. ಅವರ ಮನೆ ಮೇಲೆ ಎನ್​ಸಿಬಿ ಅಧಿಕಾರಿಗಳು ಇತ್ತೀಚೆಗೆ ದಾಳಿ ಮಾಡಿದ್ದರು. ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಸದ್ಯ ಅವರ ಮೊಬೈಲ್​ ಮತ್ತು ಲ್ಯಾಪ್​​ಟಾಪ್​ ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿನ ವಾಟ್ಸಪ್​ ಚಾಟ್​ಗಳನ್ನು ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ: ಕಾಂಗ್ರೆಸ್​ನವರು ಮತ ಹಾಕಿಸಿಕೊಂಡು ಐದು ವರ್ಷ ನಿಮ್ಮನ್ನು ಅಂಧಕಾರದಲ್ಲಿ ಇಡುತ್ತಾರೆ -ಸಿಎಂ ಬಸವರಾಜ ಬೊಮ್ಮಾಯಿ

ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ

Published On - 1:29 pm, Sun, 24 October 21

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ