ಆಂಧ್ರಪ್ರದೇಶ: ಕುಡಿದ ಮತ್ತಿನಲ್ಲಿ ಪೊಲೀಸ್​ ಅಧಿಕಾರಿ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ ವ್ಯಕ್ತಿ

ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಪೊಲೀಸ್ ಅಧಿಕಾರಿ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಅಂಗಡಿಯೊಂದಕ್ಕೆ ಪೊಲೀಸ್​ ಹಿಂದೆಯೇ ಹೋಗಿ ಪ್ರಜ್ಞೆತಪ್ಪುವಷ್ಟು ಹೊಡೆದಿದ್ದಾನೆ.

ಆಂಧ್ರಪ್ರದೇಶ: ಕುಡಿದ ಮತ್ತಿನಲ್ಲಿ ಪೊಲೀಸ್​ ಅಧಿಕಾರಿ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ ವ್ಯಕ್ತಿ
ಪೊಲೀಸ್​ ಮೇಲೆ ಹಲ್ಲೆ
Follow us
ನಯನಾ ರಾಜೀವ್
|

Updated on: Jul 20, 2024 | 10:21 AM

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್​ ಅಧಿಕಾರಿ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ತಿರುಪತಿ ಜಿಲ್ಲೆಯ ಗುಡೂರು ಪಟ್ಟಣದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದಾಗ ಆರೋಪಿ ಕುಡಿದ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ ಹೆಡ್ ಕಾನ್ಸ್‌ಟೇಬಲ್ ಸ್ವಾಮಿ ದಾಸ್ ಎಂದು ಗುರುತಿಸಲಾದ ಪೊಲೀಸ್ ತಲೆಗೆ ತೀವ್ರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಪೊಲೀಸರು ಅಂಗಡಿಯೊಂದಕ್ಕೆ ಹೋಗುತ್ತಿರುವುದನ್ನು ತೋರಿಸಿದೆ. ಸ್ವಲ್ಪ ಸಮಯದ ನಂತರ, ಆರೋಪಿಯು ತನ್ನ ಕೈಯಲ್ಲಿ ದೊಣ್ಣೆಯನ್ನು ಹಿಡಿದುಕೊಂಡು ಆತ ಆರೋಪಿ ಕೂಡ ಹಿಂಬಾಲಿಸಿದ್ದ.

ಆರೋಪಿ ದಾಸ್ ತಲೆಗೆ ಹೊಡೆದಿರುವುದು ವಿಡಿಯೋದಲ್ಲಿದೆ. ಪೊಲೀಸ್ ಸಿಬ್ಬಂದಿ ನೆಲಕ್ಕೆ ಕುಸಿದು ಬೀಳುತ್ತಿರುವುದು ಕಂಡು ಬರುತ್ತಿದೆ. ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯರು ಮಧ್ಯಪ್ರವೇಶಿಸುವ ಮೊದಲು ಆರೋಪಿಯು ಒಂದೆರಡು ಏಟು ಹೊಡೆದಿದ್ದಾನೆ.

ಸ್ಥಳೀಯರು ದಾಸ್ ಅವರನ್ನು ಎದ್ದು ನಿಲ್ಲಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು, ಆದರೆ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ನಂತರ ಗಾಯಗೊಂಡ ಪೊಲೀಸರನ್ನು ಅಂಗಡಿಯಿಂದ ಹೊರಕ್ಕೆ ಹೊತ್ತೊಯ್ಯುತ್ತಿರುವುದು ಕಂಡುಬರುತ್ತದೆ.

ಮತ್ತಷ್ಟು ಓದಿ: ಕುಡಿದ ಮತ್ತಿನಲ್ಲಿ ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಗ್ರಾ.ಪಂ.‌ ಸದಸ್ಯನಿಂದ ಹಲ್ಲೆ ಆರೋಪ: ಅವಾಚ್ಯವಾಗಿ ನಿಂದನೆ

ಸ್ವಾಮಿ ದಾಸ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಚಿಕಿತ್ಸೆಗಾಗಿ ಗುಡೂರು ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಡೂರು ಡಿಎಸ್‌ಪಿ ಸೂರ್ಯನಾರಾಯಣರೆಡ್ಡಿ ಮಾತನಾಡಿ, ಗುಡೂರು ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್‌ಕಾನ್ಸ್‌ಟೇಬಲ್‌ ಮೇಲೆ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ. ದಾಳಿಕೋರನನ್ನು ಪಶ್ಚಿಮ ಬಂಗಾಳದ ಲಾಲ್ತುಕ್ ಕಾಲಿಂದ ಎಂದು ಗುರುತಿಸಲಾಗಿದ್ದು, ಯಾವ ಕಾರಣದಿಂದ ಹಲ್ಲೆ ನಡೆಸಿದ್ದಾನೆ ಎಂಬುದು ತಿಳಿದುಬಂದಿಲ್ಲ. ದಾಳಿಕೋರನನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್