AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ ಎಂದು ಲಿವ್​-ಇನ್ ಸಂಗಾತಿಯ ಹತ್ಯೆಗೈದ ವ್ಯಕ್ತಿ

ತನಗೆ ಇಷ್ಟವಾದ ಅಡುಗೆ ಮಾಡಿಲ್ಲ ಎನ್ನುವ ಕಾರಣಕ್ಕೆ ಕೋಪಗೊಂಡ ವ್ಯಕ್ತಿ ತನ್ನ ಲಿವ್-ಇನ್ ಸಂಗಾತಿಯನ್ನೇ ಹತ್ಯೆಗೈದಿದ್ದಾನೆ. ಲಲ್ಲನ್ ಯಾದವ್ (35) ವಿಚಾರಣೆ ವೇಳೆ ಮದ್ಯದ ಅಮಲಿನಲ್ಲಿ ತನ್ನ ಸಂಗಾತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ ಎಂದು ಲಿವ್​-ಇನ್ ಸಂಗಾತಿಯ ಹತ್ಯೆಗೈದ ವ್ಯಕ್ತಿ
ಅಪರಾಧ
ನಯನಾ ರಾಜೀವ್
|

Updated on: Mar 17, 2024 | 3:10 PM

Share

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ ಎಂದು ವ್ಯಕ್ತಿಯೊಬ್ಬ ತನ್ನ ಲಿವ್​-ಇನ್ ಸಂಗಾತಿಯನ್ನು ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ಆತ ತನ್ನ ಲಿವ್​ ಇನ್ ಸಂಗಾತಿಯನ್ನು ಹೊಡೆದು ಹತ್ಯೆ ಮಾಡಿದ್ದಾನೆ. ಲಲ್ಲನ್ ಯಾದವ್ (35) ವಿಚಾರಣೆ ವೇಳೆ ಮದ್ಯದ ಅಮಲಿನಲ್ಲಿ ತನ್ನ ಸಂಗಾತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆ ಮೊಟ್ಟೆ ಕರಿ ಮಾಡಲು ನಿರಾಕರಿಸಿದಾಗ ಆತ ತನ್ನ ತಾಳ್ಮೆ ಕಳೆದುಕೊಂಡು ಸುತ್ತಿಗೆ ಮತ್ತು ಬೆಲ್ಟ್‌ನಿಂದ ಹೊಡೆದಿದ್ದಾನೆ ಎಂದು ಯಾದವ್ ಪೊಲೀಸರಿಗೆ ತಿಳಿಸಿದ್ದಾರೆ. ಬಿಹಾರದ ಮಾಧೇಪುರ ಜಿಲ್ಲೆಯ ಔರಾಹಿ ಗ್ರಾಮದವರಾದ ಯಾದವ್ ಅವರನ್ನು ಪಾಲಮ್ ವಿಹಾರ್ ಪೊಲೀಸ್ ಠಾಣೆಯ ತಂಡ ದೆಹಲಿಯ ಸರಾಯ್ ಕಾಲೇ ಖಾನ್ ಪ್ರದೇಶದಿಂದ ಬಂಧಿಸಿದೆ.

ಚಿಂದಿ ಆಯುವ ಅಂಜಲಿ (32) ಚೌಮಾ ಗ್ರಾಮದ ನಿರ್ಮಾಣ ಹಂತದ ಕಟ್ಟಡದಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ. ಶವವನ್ನು ಕಂಡ ನಂತರ ಕಟ್ಟಡದ ಉಸ್ತುವಾರಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರ ಪ್ರಕಾರ, ಯಾದವ್ ಮತ್ತು ಅಂಜಲಿಯನ್ನು ಮಾರ್ಚ್ 10 ರಂದು ಗುರುಗ್ರಾಮ ಬಸ್ ನಿಲ್ದಾಣದಿಂದ ಕೆಲಸದ ಸ್ಥಳಕ್ಕೆ ಕರೆತರಲಾಗಿತ್ತು.

ಮತ್ತಷ್ಟು ಓದಿ: Uttar Pradesh: ನಿರಂತರ ಕಿರುಕುಳದಿಂದ ಬೇಸತ್ತು ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಅವರ ಸರಿಯಾದ ಹೆಸರುಗಳು, ವಿಳಾಸಗಳು ಮತ್ತು ಐಡಿಗಳನ್ನು ಸಹ ಮನೆ ಮಾಲೀಕರು ತೆಗೆದುಕೊಂಡಿಲ್ಲ. ಯಾದವ್ ಅಂಜಲಿಯನ್ನು ತನ್ನ ಹೆಂಡತಿ ಎಂದು ಪರಿಚಯಿಸಿದ್ದ. ಆರು ವರ್ಷಗಳ ಹಿಂದೆ ಹಾವು ಕಡಿತದಿಂದ ಪತ್ನಿ ಮೃತಪಟ್ಟಿದ್ದು, ಬಳಿಕ ದೆಹಲಿಗೆ ಬಂದಿದ್ದಾಗಿ ಯಾದವ್ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾರೆ.

ಸುಮಾರು ಏಳು ತಿಂಗಳ ಹಿಂದೆ, ಅವರು ಚಿಂದಿ ಆಯುವ ಅಂಜಲಿಯನ್ನು ಭೇಟಿಯಾಗಿದ್ದ ಮತ್ತು ಇಬ್ಬರೂ ಕೂಲಿ ಕೆಲಸ ಮಾಡುವಾಗ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಕೊಂದು ಆತ ಪರಾರಿಯಾಗಿದ್ದ, ಕೊಲೆಗೆ ಬಳಸಿದ ಸುತ್ತಿಗೆ ಮತ್ತು ಬೆಲ್ಟ್ ಅನ್ನು ನಾವು ವಶಪಡಿಸಿಕೊಂಡಿದ್ದೇವೆ ಮತ್ತು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪಾಲಂ ವಿಹಾರ್ ಎಸಿಪಿ ನವೀನ್ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ