ಏನು ಉತ್ತರ ಪ್ರದೇಶವೋ.. ಪೈಶಾಚಿಕ ಕೃತ್ಯಗಳಿಂದ ತತ್ತರ, ತಾಜಾ ಯಾವುದು?

| Updated By: ಸಾಧು ಶ್ರೀನಾಥ್​

Updated on: Oct 06, 2020 | 4:19 PM

ಲಕ್ನೋ: ಗಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ಸಾಖಾ ಗ್ರಾಮದಲ್ಲಿ ಸೋಮವಾರ ನಡೆದ ಸಂಭ್ರಮಾಚರಣೆಯ ವೇಳೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, 55 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಅಪ್ರಾಪ್ತ ಬಾಲಕಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಳ್ಳಿಯಲ್ಲಿ ನಡೆದ ಸಮಾರಂಭವೊಂದರಲ್ಲಿ, ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಲೈಸೆನ್ಸ್ ಹೊಂದಿರುವ ತನ್ನ ಗನ್​ನಿಂದ ಗುಂಡು ಹಾರಿಸಿದ್ದಾನೆ. ಇದರಿಂದ ರಾಜಬಾಯಿ (55) ಎಂಬ ಮಹಿಳೆ ಮೃತಪಟ್ಟಿದ್ದಾಳೆ. ಹಾಗೂ ಸೋನಾ ದೇವಿ (16) ಎಂಬ ಬಾಲಕಿಗೆ ಗಾಯಗಳಾಗಿವೆ. ಗಾಯಾಳನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ […]

ಏನು ಉತ್ತರ ಪ್ರದೇಶವೋ.. ಪೈಶಾಚಿಕ ಕೃತ್ಯಗಳಿಂದ ತತ್ತರ, ತಾಜಾ ಯಾವುದು?
Follow us on

ಲಕ್ನೋ: ಗಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ಸಾಖಾ ಗ್ರಾಮದಲ್ಲಿ ಸೋಮವಾರ ನಡೆದ ಸಂಭ್ರಮಾಚರಣೆಯ ವೇಳೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, 55 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಅಪ್ರಾಪ್ತ ಬಾಲಕಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಳ್ಳಿಯಲ್ಲಿ ನಡೆದ ಸಮಾರಂಭವೊಂದರಲ್ಲಿ, ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಲೈಸೆನ್ಸ್ ಹೊಂದಿರುವ ತನ್ನ ಗನ್​ನಿಂದ ಗುಂಡು ಹಾರಿಸಿದ್ದಾನೆ. ಇದರಿಂದ ರಾಜಬಾಯಿ (55) ಎಂಬ ಮಹಿಳೆ ಮೃತಪಟ್ಟಿದ್ದಾಳೆ. ಹಾಗೂ ಸೋನಾ ದೇವಿ (16) ಎಂಬ ಬಾಲಕಿಗೆ ಗಾಯಗಳಾಗಿವೆ. ಗಾಯಾಳನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರ್ಕಲ್ ಆಫೀಸರ್ ನಾರೈನಿ ಸಿಯಾರಾಮ್ ಹೇಳಿದರು.

ಗುಂಡು ಹಾರಿಸಿದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಆತನನ್ನು ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಕರೆದೊಯ್ದು ತನಿಖೆ ನಡೆಸುತ್ತಿದ್ದಾರೆ ಎಂದು ಸಿಒ ತಿಳಿಸಿದ್ದಾರೆ. ಇನ್ನು ಕುಟುಂಬ ಸದಸ್ಯರು ಮತ್ತು ಪೊಲೀಸರು ರಾಜಾಬಾಯಿಯನ್ನು ಕರೆದುಕೊಂಡು ಬಂದಾಗಲೇ ಸತ್ತಿದ್ದರು. ಆದರೆ ಬಾಲಕಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದು ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಯ ಡಾ.ಪ್ರದೀಪ್ ಗುಪ್ತಾ ತಿಳಿಸಿದ್ರು.