AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕರ ಮುಂದೆ ಮೂತ್ರ ವಿಸರ್ಜನೆ ಮಾಡಿದ ಕುಡುಕ

ಖಾನ್ ಅವರನ್ನು ಬಂಧಿಸಿ ಸಫ್ದರ್‌ಜಂಗ್ ಆಸ್ಪತ್ರೆಗೆ ಕಳುಹಿಸಲಾಯಿತು, ಅಲ್ಲಿ ಆತ ಕುಡಿದಿದ್ದ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 294 (ಅಶ್ಲೀಲ ಕೃತ್ಯ) ಮತ್ತು 510 (ಕುಡಿತದ ವ್ಯಕ್ತಿಯಿಂದ ಸಾರ್ವಜನಿಕವಾಗಿ ದುರ್ವರ್ತನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೆಹಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕರ ಮುಂದೆ ಮೂತ್ರ ವಿಸರ್ಜನೆ ಮಾಡಿದ ಕುಡುಕ
ದೆಹಲಿ ವಿಮಾನ ನಿಲ್ದಾಣ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 11, 2023 | 3:24 PM

Share

ದೆಹಲಿ:ಜ.8ರಂದು ದೆಹಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ(IGI Airport) ಟಿ3ಯಲ್ಲಿ ಪಾನಮತ್ತ ವ್ಯಕ್ತಿಯೊಬ್ಬರು ನಿರ್ಗಮನ ಗೇಟ್‌ 6ರ ಮುಂದೆ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿರುವುದು ವರದಿಯಾಗಿದೆ. ಅವರು ದೆಹಲಿಯಿಂದ (Delhi) ದಮ್ಮಾಮ್‌ಗೆ ವಿಮಾನದಲ್ಲಿ ತೆರಳಬೇಕಿತ್ತು. ವ್ಯಕ್ತಿಯನ್ನು ಜೌಹರ್ ಅಲಿ ಖಾನ್ ಎಂದು ಗುರುತಿಸಲಾಗಿದೆ. ಸಹ ಪ್ರಯಾಣಿಕರ ಪ್ರಕಾರ, ಖಾನ್ ಕುಡಿದ ಮತ್ತಿನಲ್ಲಿದ್ದ ಇತರ ಪ್ರಯಾಣಿಕರನ್ನು ನಿಂದಿಸಿದ್ದಾನೆಆತನನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಜೌಹರ್ ಅಲಿ ಖಾನ್ ಎಂಬ ಪ್ರಯಾಣಿಕ ಡಿಪಾರ್ಚರ್ ಗೇಟ್ ನಂ. 6 ಮುಂಭಾಗದ ಪ್ರದೇಶದಲ್ಲಿ ಕುಡಿದ ಸ್ಥಿತಿಯಲ್ಲಿದ್ದರು. ಪ್ರಯಾಣಿಕರು ಮತ್ತು ಸಂದರ್ಶಕರ ನಡುವೆ ಸಾರ್ವಜನಿಕ ಸ್ಥಳದಲ್ಲಿ ಆತ ಮೂತ್ರ ವಿಸರ್ಜಿಸಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ಕಿರುಚುವ ಮತ್ತು ಸಾಮಾನ್ಯ ಜನರ ಮೇಲೆ ನಿಂದನೆ ಮಾಡುವ ಮೂಲಕ ಅವನು ಸಾರ್ವಜನಿಕ ಸ್ಥಳದಲ್ಲಿ ಉಪದ್ರವವನ್ನು ಸೃಷ್ಟಿಸಿದನು ಎಂದು ಎಫ್‌ಐಆರ್ ನಲ್ಲಿ ಹೇಳಲಾಗಿದೆ.

ಖಾನ್ ಅವರನ್ನು ಬಂಧಿಸಿ ಸಫ್ದರ್‌ಜಂಗ್ ಆಸ್ಪತ್ರೆಗೆ ಕಳುಹಿಸಲಾಯಿತು, ಅಲ್ಲಿ ಆತ ಕುಡಿದಿದ್ದ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 294 (ಅಶ್ಲೀಲ ಕೃತ್ಯ) ಮತ್ತು 510 (ಕುಡಿತದ ವ್ಯಕ್ತಿಯಿಂದ ಸಾರ್ವಜನಿಕವಾಗಿ ದುರ್ವರ್ತನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Bhopal Gas Tragedy: ಭೋಪಾಲ್ ಅನಿಲ ದುರಂತದ ಪರಿಹಾರದ ಬಗ್ಗೆ 30 ವರ್ಷದ ನಂತರ ಮರುಪರಿಶೀಲನೆ ಅಸಾಧ್ಯ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಏರ್ ಇಂಡಿಯಾ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ ಅವರನ್ನು ಬಂಧಿಸಲಾಗಿರುವ ಘಟನೆಯ ನಡುವೆ ಈ ಘಟನೆ ನಡೆದಿದೆ. ವಿಮಾನ ನಿಲ್ದಾಣದಲ್ಲಿ ಅಥವಾ ವಿಮಾನದೊಳಗೆ ಕುಡಿದು ಪ್ರಯಾಣಿಕರು ಅನುಚಿತವಾಗಿ ವರ್ತಿಸಿದ ಕಳೆದ ವಾರದಲ್ಲಿ ಇದು ಮೂರನೇ ಘಟನೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​