AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಠಪೂರ್ತಿ ಕುಡಿದ ಪ್ರಿನ್ಸಿಪಾಲ್​ನಿಂದ ಶಿಕ್ಷಕಿಗೆ ಆಲ್ಕೋಹಾಲ್ ಸೇವಿಸಿ, ಸಿಗರೇಟ್ ಸೇದಲು ಒತ್ತಾಯ

ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಕುಡುಕ ಪ್ರಾಂಶುಪಾಲರೊಬ್ಬರು ತಮ್ಮ ಶಾಲೆಯ ಶಿಕ್ಷಕಿಗೆ ಮದ್ಯಪಾನ ಮಾಡಿ, ಸಿಗರೇಟ್ ಸೇವಿಸುವಂತೆ ಒತ್ತಾಯಿಸಿದ್ದಾರೆ. ಆಕೆ ಅದಕ್ಕೆ ಒಪ್ಪದಿದ್ದಾಗ ಮೊಣಕಾಲಿನ ಮೇಲೆ ಕೂರುವಂತೆ ಶಿಕ್ಷೆ ನೀಡಿದ್ದಾರೆ. ಪ್ರಾಂಶುಪಾಲ ಕ್ಷಿತಿಜ್ ಜೇಕಬ್ ಎಂಬುವವರು ಶಿಕ್ಷಕಿಯನ್ನು ಕೆಲಸದ ನೆಪದಲ್ಲಿ ದುಮ್ನಾ ರಸ್ತೆಗೆ ಕರೆದೊಯ್ದು ಕಿರುಕುಳ ನೀಡಿದ್ದಾರೆ.

ಕಂಠಪೂರ್ತಿ ಕುಡಿದ ಪ್ರಿನ್ಸಿಪಾಲ್​ನಿಂದ ಶಿಕ್ಷಕಿಗೆ ಆಲ್ಕೋಹಾಲ್ ಸೇವಿಸಿ, ಸಿಗರೇಟ್ ಸೇದಲು ಒತ್ತಾಯ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Dec 04, 2024 | 4:50 PM

Share

ಜಬಲ್‌ಪುರ: ಮಧ್ಯಪ್ರದೇಶದ ಜಬಲ್‌ಪುರದ ಸಾಲಿವಾಡದಲ್ಲಿ ಕುಡಿದ ಅಮಲಿನಲ್ಲಿ ಶಾಲೆಯ ಪ್ರಾಂಶುಪಾಲರು ಮಹಿಳಾ ಶಿಕ್ಷಕಿಯೊಬ್ಬರಿಗೆ ಸಿಗರೇಟ್ ಸೇದಲು ಮತ್ತು ಮದ್ಯ ಸೇವಿಸಲು ಒತ್ತಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಲಿವಾಡದ ಕಾನ್ವೆಂಟ್ ಶಾಲೆಯ ಪ್ರಾಂಶುಪಾಲ ಕ್ಷಿತಿಜ್ ಜಾಕೋಬ್ ಶಿಕ್ಷಕಿಯನ್ನು ಕೆಲಸದ ಬಗ್ಗೆ ಚರ್ಚಿಸುವ ನೆಪದಲ್ಲಿ ದುಮ್ನಾ ರಸ್ತೆಗೆ ಕರೆದೊಯ್ದು ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಪ್ರಾಂಶುಪಾಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಖಮಾರಿಯಾ ಪೊಲೀಸ್ ಠಾಣೆ ಪ್ರಾಂಶುಪಾಲ ಕ್ಷಿತಿಜ್ ಜಾಕೋಬ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ಪೊಲೀಸರು ಶಾಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ವಕ್ಫ್ ಹಿಂಸೆಗೆ ಇನ್ನೆಷ್ಟು ಬಲಿ ಬೇಕು ಸಿದ್ದರಾಮಯ್ಯನವರೇ? ಪ್ರಲ್ಹಾದ್​ ಜೋಶಿ

ಶಿಕ್ಷಕಿಯ ಹೇಳಿಕೆಯಂತೆ, ಪ್ರಿನ್ಸಿಪಾಲ್ ಆಕೆಗೆ ಮದ್ಯ ಮತ್ತು ಸಿಗರೇಟ್ ಸೇವಿಸುವಂತೆ ಒತ್ತಾಯಿಸಿದರು. ಆಕೆ ವಿರೋಧಿಸಿದಾಗ ಮಾನಸಿಕ ಮತ್ತು ದೈಹಿಕ ಕಿರುಕುಳವನ್ನು ನೀಡಿದರು. ಕೆಲಸದ ಬಗ್ಗೆ ಚರ್ಚಿಸುವ ನೆಪದಲ್ಲಿ ಪ್ರಾಂಶುಪಾಲರು ಆಕೆಯನ್ನು ದುಮ್ನಾ ರಸ್ತೆಗೆ ಕರೆದೊಯ್ದು ಮದ್ಯಪಾನ ಮತ್ತು ಧೂಮಪಾನ ಮಾಡುವಂತೆ ಒತ್ತಡ ಹೇರಿದ್ದಾರೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ. ಆಕೆ ಅದಕ್ಕೆ ನಿರಾಕರಿಸಿದ ನಂತರ ಮರುದಿನ ಇಡೀ ಶಾಲೆಯ ಮುಂದೆ ಆಕೆಯನ್ನು ಅವಮಾನಿಸಿ, ಮಂಡಿಯೂರುವಂತೆ ಮಾಡಿ ಮಾನಸಿಕ ಕಿರುಕುಳ ನೀಡಲಾಯಿತು.

ಇದನ್ನೂ ಓದಿ: ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ; ಗುಪ್ತಾಂಗಕ್ಕೆ ಕೋಲು, ಮೆಣಸಿನ ಪುಡಿ ತುರುಕಿ ಚಿತ್ರಹಿಂಸೆ

ಪ್ರಾಂಶುಪಾಲರು ಆಗಾಗ ತನ್ನೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು ಎಂದು ಕೂಡ ಶಿಕ್ಷಕಿ ಹೇಳಿದ್ದಾರೆ. ಆಗಾಗ ಆಕೆಯನ್ನು ತನ್ನ ಕಛೇರಿಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸುತ್ತಿದ್ದರು ಎಂದಿದ್ದಾರೆ. ಅಲ್ಲದೆ, ಆಕೆಯನ್ನು ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ತನಗೆ ಉದ್ಯೋಗದ ಅವಶ್ಯಕತೆ ಇದ್ದುದರಿಂದ ಉದ್ಯೋಗ ಕಳೆದುಕೊಳ್ಳುವ ಭಯದಿಂದ ಎರಡು ವರ್ಷಗಳಿಂದ ಇದನ್ನು ಸಹಿಸಿಕೊಂಡಿದ್ದೆ ಎಂದು ಆಕೆ ಹೇಳಿದ್ದಾರೆ.

ಆ ಆರೋಪ ಸಾಬೀತಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ. ಆದರೆ, ಪ್ರಾಂಶುಪಾಲ ಕ್ಷಿತಿಜ್ ಜೇಕಬ್ ಆರೋಪದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ