ಮಲಯಾಳಂ ಭಾಷೆಯಲ್ಲಿ ಟ್ವೀಟ್ ಮಾಡಿದ ಯುಎಇ ಪ್ರಧಾನಿಗೆ ಅರೇಬಿಕ್​ನಲ್ಲಿ ಉತ್ತರಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

ಯುಎಇ ಕೇರಳದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದೆ. ದುಬೈ ಮತ್ತು ಯುಎಇಯ ಆರ್ಥಿಕ ಮತ್ತು ಅಭಿವೃದ್ಧಿಯ ಬೆಳವಣಿಗೆಯಲ್ಲಿ ಕೇರಳಿಗರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಯುಎಇ ಪ್ರಧಾನಿ ಶೇಖ್ ಮೊಹಮ್ಮದ್ ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ.

ಮಲಯಾಳಂ ಭಾಷೆಯಲ್ಲಿ ಟ್ವೀಟ್ ಮಾಡಿದ ಯುಎಇ ಪ್ರಧಾನಿಗೆ ಅರೇಬಿಕ್​ನಲ್ಲಿ ಉತ್ತರಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್
ಯುಎಇ ಪ್ರಧಾನಿ ಜೊತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 03, 2022 | 6:14 PM

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರನ್ನು ಎಮಿರೇಟ್ಸ್‌ನಲ್ಲಿ ಭೇಟಿಯಾದ ಬೆನ್ನಲ್ಲೇ ಯುಎಇ (UAE) ಉಪಾಧ್ಯಕ್ಷ ಹಾಗೂ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು ಮಲಯಾಳಂನಲ್ಲಿ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ಟ್ವೀಟ್ ಅನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, ಟ್ವೀಟ್ ಜೊತೆಗೆ ಯುಎಇ ಪ್ರಧಾನ ಮಂತ್ರಿ ನಿನ್ನೆ ದುಬೈ ಎಕ್ಸ್‌ಪೋ 2020ರ ಸ್ಥಳದಲ್ಲಿ ಪಿಣರಾಯಿ ವಿಜಯನ್‌ ಅವರನ್ನು ಸ್ವಾಗತಿಸಿದ ಫೋಟೋವನ್ನು ಕೂಡ ಹಂಚಿಕೊಂಡಿದ್ದಾರೆ.

ಯುಎಇ ಪ್ರಧಾನಿ ಮಾಡಿದ ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ತಮ್ಮ ಟ್ವಿಟರ್ ಪೇಜಿನಲ್ಲಿ ಹಂಚಿಕೊಂಡಿದ್ದಾರೆ. ಯುಎಇ ಕೇರಳದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದೆ. ದುಬೈ ಮತ್ತು ಯುಎಇಯ ಆರ್ಥಿಕ ಮತ್ತು ಅಭಿವೃದ್ಧಿಯ ಬೆಳವಣಿಗೆಯಲ್ಲಿ ಕೇರಳಿಗರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಯುಎಇ ಪ್ರಧಾನಿ ಶೇಖ್ ಮೊಹಮ್ಮದ್ ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ.

ಕುತೂಹಲಕರವಾದ ವಿಚಾರವೆಂದರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶೇಖ್ ಮೊಹಮ್ಮದ್ ಬಿನ್ ರಶೀದ್ ಅವರಿಗೆ ಅರೇಬಿಕ್ ಭಾಷೆಯ ಟ್ವೀಟ್ ಮೂಲಕ ಧನ್ಯವಾದ ಅರ್ಪಿಸಿದ್ದಾರೆ. “ನಿಮ್ಮ ಆತಿಥ್ಯ ಮತ್ತು ಆತ್ಮೀಯ ಸ್ವಾಗತದಿಂದ ನಾನು ವಿನಮ್ರನಾಗಿದ್ದೇನೆ” ಎಂದು ಪಿಣರಾಯಿ ವಿಜಯನ್ ಅರೇಬಿಕ್ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಕೇರಳ ರಾಜ್ಯವು ಯುಎಇ ಮತ್ತು ದುಬೈನೊಂದಿಗಿನ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ಬಯಸುತ್ತದೆ ಎಂದು ಕೂಡ ಸಿಎಂ ಪಿಣರಾಯಿ ವಿಜಯನ್ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಹಾವು ಹಿಡಿಯುತ್ತಿದ್ದಾಗ ವಾವಾ ಸುರೇಶ್​​ಗೆ ಕಚ್ಚಿದ ನಾಗರ; ಆಸ್ಪ್ರತೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದ ವೈದ್ಯರು

Viral News: 3 ವರ್ಷ ಸಿಗರೇಟ್ ಸೇದುವುದು ಬಿಟ್ಟಿದ್ದಕ್ಕೆ ಲಕ್ಷಾಧಿಪತಿಯಾದ; ಹೇಗೆ ಅಂತೀರಾ?

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್