ಮುಂಬೈನಿಂದ ನ್ಯೂಯಾರ್ಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ
ಮುಂಬೈನಿಂದ ನ್ಯೂಯಾರ್ಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನಿಂದ ನ್ಯೂಯಾರ್ಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಕಾರಣಗಳಿಗಾಗಿ ಏರ್ ಇಂಡಿಯಾ ವಿಮಾನವನ್ನು ದೆಹಲಿಗೆ ತಿರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವು ಪ್ರಸ್ತುತ ಐಜಿಐ ವಿಮಾನ ನಿಲ್ದಾಣದಲ್ಲಿದೆ ಮತ್ತು ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಗುಣಮಟ್ಟದ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುತ್ತಿದೆ.
ಅಕ್ಟೋಬರ್ 14 ರಂದು ಮುಂಬೈನಿಂದ JFK ಗೆ ಹಾರುವ AI119 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಆಗಸ್ಟ್‌ನಲ್ಲಿ ಮುಂಬೈನಿಂದ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ವಿಮಾನದ ಟಾಯ್ಲೆಟ್‌ನಲ್ಲಿ ಟಿಶ್ಯೂ ಪೇಪರ್‌ನಲ್ಲಿ ವಿಮಾನದಲ್ಲಿ ಬಾಂಬ್ ಇದೆ ಎಂಬ ಸಂದೇಶ ಬರೆದಿರುವುದು ಪತ್ತೆಯಾಗಿತ್ತು.
Flight AI119 operating from Mumbai to JFK on October 14 received a specific security alert and on instructions of the government’s security regulatory committee was diverted to Delhi. All passengers have disembarked and are at the Delhi airport terminal: Air India Spokesperson https://t.co/x9scGAXPM5 pic.twitter.com/p1L5Qt6yWu
— ANI (@ANI) October 14, 2024
ಅದರಲ್ಲಿ 135 ಪ್ರಯಾಣಿಕರಿದ್ದರು. ಇದಾದ ಬಳಿಕ ಪೈಲಟ್ ಎಟಿಸಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು.
ಬೆದರಿಕೆ ಹಿನ್ನೆಲೆಯಲ್ಲಿ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಆದರೆ, ತನಿಖೆಯ ನಂತರ ಬೆದರಿಕೆ ಸುಳ್ಳು ಎಂಬುದು ಸಾಬೀತಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ