JEE Main Postponed: ಏಪ್ರಿಲ್​ 27ರಿಂದ ನಡೆಯಲಿದ್ದ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ..; ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ನಿರ್ಧಾರವೆಂದ ಶಿಕ್ಷಣ ಸಚಿವರು

ದೇಶದಲ್ಲಿ ಸದ್ಯದಲ್ಲಿರುವ ಕೊವಿಡ್​ 19 ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಪರೀಕ್ಷಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಏಪ್ರಿಲ್​ ಸೆಷನ್​​ನಲ್ಲಿ ನಡೆಯಬೇಕಿದ್ದ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎನ್​ಟಿಎ ಹೇಳಿಕೆ ಬಿಡುಗಡೆ ಮಾಡಿದೆ.

JEE Main Postponed: ಏಪ್ರಿಲ್​ 27ರಿಂದ ನಡೆಯಲಿದ್ದ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ..; ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ನಿರ್ಧಾರವೆಂದ ಶಿಕ್ಷಣ ಸಚಿವರು
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on:Apr 18, 2021 | 1:00 PM

ದೆಹಲಿ: ದೇಶಾದ್ಯಂತ ಕೊರೊನ ಸೋಂಕು ಮತ್ತೆ ಮಿತಿಮೀರುತ್ತಿದ್ದು ಶಿಕ್ಷಣ ವ್ಯವಸ್ಥೆಯ ಮೇಲೆ ಪ್ರಭಾವ ಬೀರುತ್ತಿದೆ. ಮತ್ತೆ ಪರೀಕ್ಷೆಗಳು ಮುಂದೂಡಲ್ಪಡುತ್ತಿದ್ದು, ಇದೀಗ ಈ ಸಾಲಿಗೆ ಜಂಟಿ ಪ್ರವೇಶ ಮುಖ್ಯ ಪರೀಕ್ಷೆ (JEE) ಯೂ ಸೇರಿದೆ. ಏಪ್ರಿಲ್​ 27ರಿಂದ 30ರವರೆಗೆ ನಡೆಯಲಿದ್ದ JEE ಮುಖ್ಯ ಪರೀಕ್ಷೆ(2021)ಯನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ಮುಂದೂಡಿದೆ. ಸದ್ಯಕ್ಕೇನೂ ಪರೀಕ್ಷೆಯ ಹೊಸ ದಿನಾಂಕವನ್ನು ಘೋಷಣೆ ಮಾಡಿಲ್ಲ.

ದೇಶದಲ್ಲಿ ಸದ್ಯದಲ್ಲಿರುವ ಕೊವಿಡ್​ 19 ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಪರೀಕ್ಷಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಏಪ್ರಿಲ್​ ಸೆಷನ್​​ನಲ್ಲಿ ನಡೆಯಬೇಕಿದ್ದ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎನ್​ಟಿಎ ಹೇಳಿಕೆ ಬಿಡುಗಡೆ ಮಾಡಿದೆ. ಇನ್ನು ಪರೀಕ್ಷೆ ನಡೆಸುವ 15 ದಿನಗಳ ಮೊದಲು ದಿನಾಂಕ ಘೋಷಿಸಲಾಗುವುದು ಎಂದು ತಿಳಿಸಿದೆ.

ಇನ್ನು ಜೆಇಇ ಮುಖ್ಯಪರೀಕ್ಷೆಯ ಫೆಬ್ರವರಿ ಮತ್ತು ಮಾರ್ಚ್​ ಸೆಷನ್​ಗಳು ಮುಕ್ತಾಯಗೊಂಡಿದ್ದು, ಏಪ್ರಿಲ್​ದು 27ರಿಂದ ಪ್ರಾರಂಭವಾಗಲಿತ್ತು. ಆದರೆ ಅದನ್ನು ಮುಂದೂಡಬೇಕು. ಕೊರೊನಾ ಸಮಯದಲ್ಲಿ ಪರೀಕ್ಷೆ ಬರೆಯುವುದು ಸುರಕ್ಷಿತವಲ್ಲ ಎಂದು ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಕೂಡ ಬೇಡಿಕೆ ಮುಂದಿಟ್ಟಿದ್ದರು. ಈ ಬಗ್ಗೆ ಆಕ್ರೋಶವನ್ನೂ ಹೊರಹಾಕಿದ್ದರು. ಪರೀಕ್ಷೆ ಮುಂದೂಡಲ್ಪಟ್ಟಿದ್ದನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಕೂಡ ದೃಢಪಡಿಸಿದ್ದಾರೆ. ಸದ್ಯದ ಕೊವಿಡ್​-19 ಸ್ಥಿತಿಯಲ್ಲಿ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡುವುದೇ ಒಳಿತು ಎಂದು ನಾನೂ ಸಹ ಎನ್​ಟಿಎಗೆ ಸಲಹೆ ನೀಡಿದ್ದೆ. ವಿದ್ಯಾರ್ಥಿಗಳ ಶಿಕ್ಷಣದೊಂದಿಗೆ ಅವರ ಸುರಕ್ಷತೆ ನನ್ನ ಮತ್ತು ಶಿಕ್ಷಣ ಸಚಿವಾಲಯದ ಮೊದಲ ಆದ್ಯತೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಎನ್​ಟಿಎ ವೆಬ್​ಸೈಟ್ www.nta.ac.in ಮತ್ತು https://jeemain.nta.nic.in/ ಕ್ಕೆ ಭೇಟಿ ಕೊಡಬಹುದು.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಕೊವಿಡ್ ಪ್ರಕರಣ ಏರಿಕೆ; ಸಾರ್ವಜನಿಕ ರ‍್ಯಾಲಿಗಳನ್ನು ರದ್ದು ಮಾಡಿದ ರಾಹುಲ್ ಗಾಂಧಿ

ಬೆಂಗಳೂರು ನಗರದಲ್ಲಿ ವಿಶೇಷ ಕಠಿಣ ಕ್ರಮ ಅನಿವಾರ್ಯ; ಆರೋಗ್ಯ ಸಚಿವ ಡಾ.ಸುಧಾಕರ್

ವೈದ್ಯರಾಗಿದ್ದರೂ ತಂದೆ-ತಾಯಿಯನ್ನು ಉಳಿಸಿಕೊಳ್ಳಲಾಗಲಿಲ್ಲ.. ಪೋಷಕರ ಕಳೆದುಕೊಂಡು ಕಣ್ಣೀರಿಟ್ಟ ವೈದ್ಯೆ

Published On - 12:56 pm, Sun, 18 April 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ