ಕಾಂಗ್ರೆಸ್ ಒಗ್ಗಟ್ಟಾಗಿರಲು ಗಾಂಧಿ ಕುಟುಂಬ ಮುಖ್ಯ, ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕು: ಅಶೋಕ್ ಗೆಹ್ಲೋಟ್

ಪ್ರತಿಸ್ಪರ್ಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, "ಧ್ರುವೀಕರಣದ ರಾಜಕೀಯ ಸುಲಭವಾಗಿದೆ. ಬಿಜೆಪಿಯು ಕಾಂಗ್ರೆಸ್ ಅನ್ನು ಮುಸ್ಲಿಮರ ಪಕ್ಷ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದೆ. ದೇಶದ ಸಮಗ್ರತೆ ಮತ್ತು ಏಕತೆಯನ್ನು ಕಾಪಾಡುವುದು ನಮ್ಮ ಮಾರ್ಗವಾಗಿದೆ

ಕಾಂಗ್ರೆಸ್ ಒಗ್ಗಟ್ಟಾಗಿರಲು ಗಾಂಧಿ ಕುಟುಂಬ ಮುಖ್ಯ, ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕು: ಅಶೋಕ್ ಗೆಹ್ಲೋಟ್
ರಾಹುಲ್ ಗಾಂಧಿ-ಅಶೋಕ್ ಗೆಹ್ಲೋಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 13, 2022 | 4:34 PM

ದೆಹಲಿ: ಭಾನುವಾರ ನಡೆದ ಕಾಂಗ್ರೆಸ್‌ನ (Congress) ಉನ್ನತ ಮಟ್ಟದ  ಸಭೆಗೆ ಮುಂಚಿತವಾಗಿ ರಾಜಸ್ಥಾನ ಮುಖ್ಯಮಂತ್ರಿ ಮತ್ತು ಪಕ್ಷದ ಉನ್ನತ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ (Ashok Gehlot) ಅವರು “ಆಂತರಿಕ ಸಂಘರ್ಷದಿಂದಾಗಿ” ಪಕ್ಷವು ಪಂಜಾಬ್ ಅನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.  ಅದೇ ವೇಳೆ ಪಕ್ಷದ ಒಗ್ಗಟ್ಟಿಗೆ ಗಾಂಧಿ ಕುಟುಂಬ ಮುಖ್ಯ ಎಂದು ಒತ್ತಿ ಹೇಳಿದರು. ರಾಹುಲ್ ಗಾಂಧಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಬೇಕು ಎಂದ ಅವರು 2017 ರಲ್ಲಿ ಕಾಂಗ್ರೆಸ್ ಒಟ್ಟಾಗಿದ್ದು ನಾವು ಪಂಜಾಬ್ ಚುನಾವಣೆ ಗೆದ್ದಿದ್ದೇವೆ. ಚರಣ್​​ಜಿತ್ ಸಿಂಗ್ ಚನ್ನಿ ಮುಖ್ಯಮಂತ್ರಿಯಾದ ನಂತರ, ಪರಿಸ್ಥಿತಿಯೂ  ಅನುಕೂಲಕರವಾಗಿತ್ತು. ಆದರೆ ಆಂತರಿಕ ಸಂಘರ್ಷದಿಂದ ನಾವು ಪಂಜಾಬ್ ನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದು ನಮ್ಮ ತಪ್ಪು ಎಂದು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು. ಸುಮಾರು ಮೂರು ದಶಕಗಳಿಂದ ಗಾಂಧಿ ಕುಟುಂಬದಿಂದ ಯಾರೂ ಪ್ರಧಾನಿಯಾಗಲಿ, ಮಂತ್ರಿಯಾಗಲಿ ಆಗಿಲ್ಲ. ಕಾಂಗ್ರೆಸ್‌ನ ಏಕತೆಗೆ ಗಾಂಧಿ ಕುಟುಂಬ ಮುಖ್ಯವಾಗಿದೆ ಎಂದು ಅರ್ಥಮಾಡಿಕೊಳ್ಳಬೇಕಿದೆ ಎಂದು 70 ವರ್ಷದ ನಾಯಕ ಗೆಹ್ಲೋಟ್ ಹೇಳಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಧ್ರುವೀಕರಣದ ರಾಜಕೀಯ ಸುಲಭವಾಗಿದೆ. ಬಿಜೆಪಿಯು ಕಾಂಗ್ರೆಸ್ ಅನ್ನು ಮುಸ್ಲಿಮರ ಪಕ್ಷ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದೆ. ದೇಶದ ಸಮಗ್ರತೆ ಮತ್ತು ಏಕತೆಯನ್ನು ಕಾಪಾಡುವುದು ನಮ್ಮ ಮಾರ್ಗವಾಗಿದೆ. ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಧರ್ಮವು  ಮುಖ್ಯ ವಿಷಯವಾಗುತ್ತದೆ,  ಹಣದುಬ್ಬರ ಮತ್ತು ಉದ್ಯೋಗಗಳ ಸಮಸ್ಯೆಗಳು ನಂತರದ್ದಾಗಿರುತ್ತವೆ ಎಂದಿದ್ದಾರೆ ಗೆಹ್ಲೋಟ್.

ಐದು ರಾಜ್ಯಗಳಲ್ಲಿನ ಭಾರೀ ಸೋಲು ಗಾಂಧಿ ಕುಟುಂಬದ ವಿರುದ್ಧದ ಟೀಕೆಗಳನ್ನು ಹೆಚ್ಚಿಸಿದ್ದು, ಸಂಪೂರ್ಣ ಕೂಲಂಕಷ ಮತ್ತು ನಾಯಕತ್ವ ಬದಲಾವಣೆಯ ಬೇಡಿಕೆಗಳನ್ನು ಪುನರುಜ್ಜೀವನಗೊಳಿಸಿದೆ.

ಇಂದಿನ ಸಿಡಬ್ಲ್ಯುಸಿ ಸಭೆಯಲ್ಲಿ ಆಗಸ್ಟ್-ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿದ್ದ ಹೊಸ ಪಕ್ಷದ ಮುಖ್ಯಸ್ಥರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಸಾಂಸ್ಥಿಕ ಚುನಾವಣೆಗಳು ಈಗ ಎರಡು ಮೂರು ತಿಂಗಳುಗಳ ಕಾಲ ಮುಂದುವರಿಯಬಹುದು ಎಂದು ಮೂಲಗಳು ಹೇಳುತ್ತವೆ.

ಈ ಸಭೆಯಲ್ಲಿ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ರಾಜೀನಾಮೆ ನೀಡುತ್ತಾರೆ ಎಂಬುದನ್ನು ಕಾಂಗ್ರೆಸ್ ಸ್ಪಷ್ಟವಾಗಿ ನಿರಾಕರಿಸಿದೆ. ಸಭೆಯ ಮೊದಲು, ಜಾರ್ಖಂಡ್ ಕಾಂಗ್ರೆಸ್ ಸೋನಿಯಾ ಮತ್ತು ರಾಹುಲ್ ಗಾಂಧಿಯನ್ನು ಬೆಂಬಲಿಸುವ ನಿರ್ಣಯವನ್ನು ಅಂಗೀಕರಿಸಿತು.

ರಾಹುಲ್  ಅಧ್ಯಕ್ಷರಾಗಲಿ: ಡಿಕೆ ಶಿವಕುಮಾರ್

ನಾನು ಮೊದಲೇ ಹೇಳಿದಂತೆ  ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ತಕ್ಷಣವೇ ಪೂರ್ಣಾವಧಿಯ ಪಾತ್ರದಲ್ಲಿ ತೆಗೆದುಕೊಳ್ಳಬೇಕು. ಇದು ನನ್ನಂತಹ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರ ಆಶಯ  ಎಂದು ಡಿಕೆ ಶಿವಕುಮಾರ್  ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮುಕುಲ್​ ವಾಸ್ನಿಕ್​​ರನ್ನು ಕಾಂಗ್ರೆಸ್​​ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಜಿ 23 ನಾಯಕರ ಒತ್ತಾಯ; ಆದರೆ ಆಗಿದ್ದೇನು?

Published On - 4:04 pm, Sun, 13 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್