Oxygen Shortage: ಹರ್ಯಾಣದ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಸಿಗದೆ 5 ರೋಗಿಗಳು ಸಾವು

|

Updated on: Apr 26, 2021 | 1:04 PM

Haryana: ವೈದ್ಯಕೀಯ ಆಕ್ಸಿಜನ್ ಲಭಿಸದೇ ಇದ್ದ ಕಾರಣ 5 ರೋಗಿಗಳು ಮೃತಪಟ್ಟಿದ್ದಾರೆ ಎಂದು ರೋಗಿಗಳ ಕುಟುಂಬದವರು ಆರೋಪಿಸಿದ್ದು, ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

Oxygen Shortage: ಹರ್ಯಾಣದ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಸಿಗದೆ 5 ರೋಗಿಗಳು ಸಾವು
ಪ್ರಾತಿನಿಧಿಕ ಚಿತ್ರ
Follow us on

ಹಿಸಾರ್: ಹರ್ಯಾಣದ ಹಿಸಾರ್ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ 5 ಕೊವಿಡ್ ರೋಗಿಗಳು ಮೃತಪಟ್ಟಿದ್ದಾರೆ. ವೈದ್ಯಕೀಯ ಆಕ್ಸಿಜನ್ ಲಭಿಸದೇ ಇದ್ದ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ರೋಗಿಗಳ ಕುಟುಂಬದವರು ಆರೋಪಿಸಿದ್ದು, ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕಳೆದ 24ಗಂಟೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಹರ್ಯಾಣದಲ್ಲಿ ಸಂಭವಿಸಿದ ಮೂರನೇ ಘಟನೆಯಾಗಿದೆ ಇದು.

ಭಾನುವಾರ ಗುರುಗಾಂವ್​ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ನಾಲ್ವರು ರೋಗಿಗಳು ಮೃತಪಟ್ಟಿದ್ದರು ರೆವಾರಿಯಲ್ಲಿರುವ ಆಸ್ಪತ್ರೆಯಲ್ಲಿಯೂ ನಾಲ್ಕು ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ. ಈ ಎರಡು ಪ್ರಕರಣಗಳ ಬಗ್ಗೆ ಜಿಲ್ಲಾಮಟ್ಟದಲ್ಲಿ ತನಿಖೆ ನಡೆಸಲು ಆದೇಶಿಸಲಾಗಿದೆ .

ಭಾರತದಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚುತ್ತಿದಂತೆ ದೆಹಲಿಯ ಹಲವಾರು ಪ್ರಮುಖ ಆಸ್ಪತ್ರೆಗಳು SOS ಸಂದೇಶ ಕಳುಹಿಸಿವೆ. ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ಆಕ್ಸಿಜನ್ ಕೊರತೆಯಿಂದ 25 ರೋಗಿಗಳು ಸಾವಿಗೀಡಾಗಿದ್ದಾರೆ.
ದೇಶದಇತರ ರಾಜ್ಯಗಳಂತೆ ಹರ್ಯಾಣದಲ್ಲಿಯೂ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 10,000ಕ್ಕಿಂತಲೂ ಹೆಚ್ಚು ಪ್ರಕರಣಗಳು ವರದಿ ಆಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ4.24 ಲಕ್ಷಕ್ಕೇರಿದೆ.

ಹರ್ಯಾಣದ ಪ್ರಧಾನ ಕಾರ್ಯದರ್ಶಿ ವಿಜಯ್ ವರ್ಧನ್ ಅವರು ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಕ್ಸಿಜನ್ ಪೂರೈಕೆ ಬಗ್ಗೆ ಮೇಲ್ವಿಚಾರಣೆ ವಹಿಸಲು ಸಮತಿ ರಚಿಸುವಂತೆ ಆಯುಕ್ತರಿಗೆ ಆದೇಶಿಸಿದ್ದಾರೆ.
ಆಮ್ಲಜನಕದ ಕೊರತೆಯಿಂದಾಗಿ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಸದಸ್ಯರG ನಮಗೆ ತಿಳಿಸಲಾಗಿದೆ. ಕೋವಿಡ್ ನಿಯಮಾವಳಿಗಳ ಪ್ರಕಾರ ಆರೋಗ್ಯ ಇಲಾಖೆ ಮೃತದೇಹಗಳನ್ನು ತೆಗೆದುಕೊಂಡು ಹೋಗಿದೆ ಎಂದು ಮಾಧ್ಯಮದವರಲ್ಲಿ ಮಾತನಾಡಿದ ಪೊಲೀಸ್ ಅಧಿಕಾರಿ ರಾಜ್ಬೀರ್ ಸಿಂಗ್ ಹೇಳಿದ್ದಾರೆ.

ರುಗಾಂವ್​ನಲ್ಲಿರುವರುವ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ ಇದೆ ಎಂಬ ಆರೋಪವನ್ನು ಆಸ್ಪತ್ರೆ ನಿರಾಕರಿಸಿದೆ. ಈ ರೋಗಿಗಳು ತೀವ್ರವಾದ ಕೊವಿಡ್ ಹೊಂದಿದ್ದರು. ನಾವು ಆಮ್ಲಜನಕದ ಪೂರೈಕೆಯಲ್ಲಿ ಕೊರತೆ ಎದುರಿಸುತ್ತಿದ್ದೇವೆ. ಆದರೆ ಈ ರೋಗಿಗಳಿಗೆ ಆಮ್ಲಜನಕದ ಕೊರತೆ ಬಾಧಿಸಿಲ್ಲ. ಇವರು ಗಂಭೀರ ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಅವರ ಆಮ್ಲಜನಕದ ಮಟ್ಟವು ತೀವ್ರವಾಗಿ ಕುಸಿಯಿತು. ಅವುಗಳನ್ನು ಸರಿಪಡಿಸಲು ನಾವು ಪ್ರಯತ್ನಪಟ್ಟರೂ ಯಶಸ್ವಿಯಾಗಲಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಭಾರತದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ 3.52 ಲಕ್ಷ ಆಗಿದ್ದು 2,812 ಸಾವು ಸಂಭವಿಸಿದೆ. ಕಳೆದ 72 ಗಂಟೆಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಕೊವಿಡ್ ಎರಡನೇ ಅಲೆ ದೇಶವನ್ನು ಬೆಚ್ಚಿಬೀಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಕೊರೊನ ವಿರುದ್ಧದ ಹೋರಾಟದಲ್ಲಿ ರಾಜ್ಯಗಳನ್ನು ಬೆಂಬಲಿಸಲು ಕೇಂದ್ರ ಸರ್ಕಾರವು ಸದಾ ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

(Due To Oxygen Shortage 5 Die In hospital Haryana Hisar district 3rd Incident In State)

ಇದನ್ನೂ ಓದಿ: ಮುಸ್ಲಿಂ ಹೆಣ್ಣುಮಕ್ಕಳು ಮೈನೆರೆದ ತಕ್ಷಣ ಮದುವೆಗೆ ಅರ್ಹರು: ಪಂಜಾಬ್​-ಹರ್ಯಾಣ ಹೈಕೋರ್ಟ್​ ತೀರ್ಪು

Published On - 12:42 pm, Mon, 26 April 21