AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ದೇಶದಲ್ಲಿ ತೀವ್ರ ಗತಿಯಲ್ಲಿ ಕೊವಿಡ್ ಹೆಚ್ಚಳ; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ

Covid 19 | Omicron: ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ.

PM Modi: ದೇಶದಲ್ಲಿ ತೀವ್ರ ಗತಿಯಲ್ಲಿ ಕೊವಿಡ್ ಹೆಚ್ಚಳ; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: shivaprasad.hs|

Updated on:Jan 07, 2022 | 10:06 AM

Share

ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸುವ ಸಾಧ್ಯತೆಯಿದೆ. ದೇಶದಲ್ಲಿ ಕೋವಿಡ್ -19 ಪರಿಸ್ಥಿತಿ ಬಿಗಡಾಯಿಸುತ್ತಿರುವುದು ಮತ್ತು ಅದನ್ನು ಸಾಮೂಹಿಕವಾಗಿ ಎದುರಿಸುವುದು ಹೇಗೆ ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಸೋಂಕಿತ ವ್ಯಕ್ತಿಗಳಿಂದ ಇತರರಿಗೆ ಸೋಂಕು ಹರಡವುದನ್ನು ತಪ್ಪಿಸಲು ಪರೀಕ್ಷೆಗಳನ್ನು ಹೆಚ್ಚಿಸುವಂತೆ ಕೇಂದ್ರವು ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದ ಬೆನ್ನಲ್ಲೇ ಸಭೆ ನಡೆಸುವ ತೀರ್ಮಾನ ಕೈಗೊಂಡಿರುವುದು ಪ್ರಾಮುಖ್ಯತೆ ಪಡೆದಿದೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಖಚಿತಪಡಿಸಿದ್ದಾರೆ.

ಬಂಗಾಳದಲ್ಲಿ ಕೊವಿಡ್ ಹೆಚ್ಚಳ; ಪ್ರಧಾನಿ ಜತೆ ಸಭೆಯಲ್ಲಿ ಭಾಗವಹಿಸಲಿರುವ ಮಮತಾ ಬ್ಯಾನರ್ಜಿ: ಏತನ್ಮಧ್ಯೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆತಂಕಕಾರಿ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿಯವರೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ್ದಾರೆ. ಬಂಗಾಳದಲ್ಲಿ ಜನವರಿ 5 ರಂದು 24 ಗಂಟೆಗಳಲ್ಲಿ 14,000 ಹೊಸ ಪ್ರಕರಣಗಳು ದಾಖಲಾಗಿವೆ. ನಿನ್ನೆ ಹೌರಾ ಜಿಲ್ಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ, ‘‘ರಾಜ್ಯದಲ್ಲಿ ದೈನಂದಿನ ಕೋವಿಡ್ -19 ಪ್ರಕರಣಗಳ ಸಂಖ್ಯೆ 14,022 ಕ್ಕೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 33,042 ಕ್ಕೆ ಏರಿದೆ. ನಾನು ನಾಳೆ (ಶುಕ್ರವಾರ) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವರ್ಚುವಲ್ ಸಭೆಯಲ್ಲಿ ಭಾಗವಹಿಸುತ್ತೇನೆ’’ ಎಂದಿದ್ದಾರೆ.

ಪಶ್ಚಿಮ ಬಂಗಾಳದ ಕೋವಿಡ್ -19 ಪರಿಸ್ಥಿತಿಯ ಬಗ್ಗೆ ವಿವರಗಳನ್ನು ನೀಡಿದ ಮಮತಾ, ಅಂತರರಾಜ್ಯ ಗಡಿ ಪ್ರದೇಶದ ಪ್ರಯಾಣಕ್ಕೆ ಕಡ್ಡಾಯ ಆರ್‌ಟಿ-ಪಿಸಿಆರ್ ಪರೀಕ್ಷೆಯೊಂದಿಗೆ ನಿರ್ಬಂಧಗಳನ್ನು ಹೆಚ್ಚಿಸುವಂತೆ ಅವರು ತಿಳಿಸಿದ್ದಾರೆ. ‘‘ಒಟ್ಟು 2,075 ಕೋವಿಡ್-19 ರೋಗಿಗಳು ಬಂಗಾಳದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು 403 ಪ್ರದೇಶಗಳು ಕಂಟೈನ್‌ಮೆಂಟ್ ವಲಯಗಳಾಗಿವೆ. ಪಾಸಿಟಿವಿಟಿ ಪ್ರಮಾಣವು 23.17 ಶೇಕಡಾ, ಸಾವಿನ ಪ್ರಮಾಣ ಶೇಕಡಾ 1.18 ಇದೆ. ರಾಜ್ಯದಲ್ಲಿ ಸುಮಾರು 19,517 ಹಾಸಿಗೆಗಳು ಲಭ್ಯವಿದೆ. ಅಂತರರಾಜ್ಯ ಗಡಿಗೆ ಆರ್‌ಟಿ-ಪಿಸಿಆರ್ ಕಡ್ಡಾಯವಾಗಿದೆ.’’ ಎಂದು ಅವರು ಹೇಳಿದ್ದರು. ಇದಲ್ಲದೆ, ಮುಂದಿನ 15 ದಿನಗಳು ಪ್ರಮುಖವಾಗಿವೆ ಮತ್ತು ರಾಜ್ಯ ಸರ್ಕಾರವು ಕೋವಿಡ್ -19 ನಿರ್ಬಂಧಗಳನ್ನು ಹೆಚ್ಚಿಸಲಿದೆ ಎಂದು ಮುಖ್ಯಮಂತ್ರಿ ಮಮತಾ ಹೇಳಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿವೆ ಕೊವಿಡ್ ಪ್ರಕರಣಗಳು; 10,000 ಗಡಿ ದಾಟಿದ ಎಂಟೇ ದಿನಕ್ಕೆ 1 ಲಕ್ಷ ಗಡಿ ದಾಟಿದ ಸೋಂಕು: ಭಾರತದಲ್ಲಿ ಕೊವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. 10,000 ಗಡಿ ದಾಟಿದ ಎಂಟೇ ದಿನಕ್ಕೆ ದೈನಂದಿನ ಸೋಂಕಿನ ಪ್ರಮಾಣ 1 ಲಕ್ಷಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೊನೆಯ ಬಾರಿಗೆ 1 ಲಕ್ಷಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು ಜೂನ್ 6ರಂದು. ಬರೋಬ್ಬರಿ 214 ದಿನಗಳ ನಂತರ ಭಾರತದಲ್ಲಿ ದೈನಂದಿನನ 1 ಲಕ್ಷಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3.5 ಲಕ್ಷಕ್ಕೆ ಏರಿದೆ. ಗುರುವಾರ, ಮಹಾರಾಷ್ಟ್ರದಲ್ಲಿ 36,265 ಪ್ರಕರಣಗಳು ವರದಿಯಾಗಿವೆ. ಪಶ್ಚಿಮ ಬಂಗಾಳ ಸೇರಿದಂತೆ ವಿವಿದೆಡೆ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

PM Modi: ₹ 530 ಕೋಟಿ ವೆಚ್ಚದಲ್ಲಿ ನಿರ್ಮಿತವಾದ ಕೋಲ್ಕತ್ತಾದ ಸಿಎನ್​ಸಿಐ 2ನೇ ಕ್ಯಾಂಪಸ್ಅನ್ನು ಇಂದು​ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿ ಹೆಚ್ಚಳ; ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಓರ್ವ ಅಭ್ಯರ್ಥಿ ಎಷ್ಟು ಖರ್ಚು ಮಾಡಬಹುದು?

Published On - 9:57 am, Fri, 7 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ