Mumbai Section 144: ಒಮಿಕ್ರಾನ್ ಆತಂಕ; ಮುಂಬೈನಲ್ಲಿ 48 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿ

Omicron: ಮುಂಬೈನಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Mumbai Section 144: ಒಮಿಕ್ರಾನ್ ಆತಂಕ; ಮುಂಬೈನಲ್ಲಿ 48 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on:Dec 11, 2021 | 10:57 AM

ಮುಂಬೈ: ಕರೋನವೈರಸ್‌ನ ಒಮಿಕ್ರಾನ್ (Omicron) ರೂಪಾಂತರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮುಂಬೈನಲ್ಲಿ (Mumbai) 48 ಗಂಟೆಗಳ ಕಾಲ ನಿಷೇಧಾಜ್ಞೆ (Section 144) ಜಾರಿಗೊಳಿಸಲಾಗಿದೆ. ವೀಕೆಂಡ್​ನಲ್ಲಿ ದೊಡ್ಡ ಸಮಾರಂಭಗಳನ್ನು ಆಯೋಜಿಸುವುದನ್ನೂ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಮುಂಬೈ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಜನರು ಮತ್ತು ವಾಹನಗಳನ್ನು ಒಳಗೊಂಡ ರ್ಯಾಲಿಗಳು ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು ನಿರ್ಬಂಧಿಸಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕಳೆದ ವಾರ ಮಹಾರಾಷ್ಟ್ರದ ಅಮರಾವತಿ ಮತ್ತು ಇತರ ಪ್ರದೇಶಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶಗಳನ್ನು ಹೊರಡಿಸಲಾಗಿದೆ. ಮುಂಬೈನಲ್ಲಿ ಹೊರಡಿಸಲಾದ ನಿಷೇಧಾಜ್ಞೆಗಳನ್ನು  ಉಲ್ಲಂಘಿಸುವವರಿಗೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 188 ಮತ್ತು ಇತರ ಕಾನೂನು ನಿಬಂಧನೆಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ. 

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 695 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 12 ಸಾವುಗಳು ವರದಿಯಾಗಿವೆ. ಹೊಸ ಸೋಂಕಿನೊಂದಿಗೆ, ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ  6,534ಕ್ಕೆ ಏರಿದೆ.ಇಲ್ಲಿಯವರೆಗೆ ಒಟ್ಟು 66,42,372 ಪ್ರಕರಣಗಳು ದಾಖಲಾಗಿವೆ.

ಮಹಾರಾಷ್ಟ್ರ ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಕಂಡುಬಂದ ಒಮಿಕ್ರಾನ್ ರೂಪಾಂತರದ ಸೋಂಕಿನ ಸಂಖ್ಯೆ 17 ಕ್ಕೆ ಏರಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ ಇತ್ತೀಚಿನ ವರದಿಯು ಮಹಾರಾಷ್ಟ್ರದಲ್ಲಿ ಏಳು ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದೆ. ಅವುಗಳಲ್ಲಿ ಮೂರು ಮುಂಬೈನಲ್ಲಿ ಮತ್ತು ನಾಲ್ಕು ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಶನ್‌ ವ್ಯಾಪ್ತಿಯಲ್ಲಿ ದಾಖಲಾಗಿವೆ.

ಮುಂಬೈನಲ್ಲಿ ಇತ್ತೀಚೆಗೆ ಪತ್ತೆಯಾದ ಮೂವರು ಹೊಸ ರೋಗಿಗಳು 48, 25 ಮತ್ತು 37 ವರ್ಷ ವಯಸ್ಸಿನವರಾಗಿದ್ದು, ಅನುಕ್ರಮವಾಗಿ ತಾಂಜಾನಿಯಾ, ಯುಕೆ ಮತ್ತು ದಕ್ಷಿಣ ಆಫ್ರಿಕಾಕ್ಕೆ ಇತ್ತೀಚಿಗೆ ಪ್ರಯಾಣಿಸಿದ ಇತಿಹಾಸವನ್ನು ಹೊಂದಿದ್ದಾರೆ.

ಇದನ್ನೂ ಓದಿ:

ಸೋಮವಾರದಿಂದ 3 ದಿನ ಸಿಎಂ ಪ್ರವಾಸ; ಕುಟುಂಬ ಸಮೇತರಾಗಿ ಕಾಶಿ, ಅಯೋಧ್ಯೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬೊಮ್ಮಾಯಿ

ಅಬ್ಬರದ ಎಕೆ-47 ಮಶೀನ್ ಗನ್ ತಯಾರಿಸುತ್ತಿದ್ದ ಕಲಾಷ್ನಿಕೋವ್ ಕಂಪನಿ ಸದ್ದಿಲ್ಲದೆ ಇಲೆಕ್ಟ್ರಿಕ್ ಕಾರು ತಯಾರಿಸುತ್ತಿದೆ!

Published On - 10:56 am, Sat, 11 December 21