Cuttack Violence: ಕರ್ಫ್ಯೂ, 36 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತ, ಶಾಂತಿ ಕಾಪಾಡುವಂತೆ ಸಿಎಂ ಮಾಝಿ ಮನವಿ
ಕಟಕ್‌ನ ದರ್ಗಾ ಬಜಾರ್‌ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಕಟಕ್ ಡಿಸಿಪಿ ರಿಷಿಕೇಶ್ ಖಿಲಾರಿ ಸೇರಿದಂತೆ ಎಂಟು ಜನರು ಗಾಯಗೊಂಡ ಒಂದು ದಿನದ ನಂತರ, ಭಾನುವಾರ ಹೊಸ ಹಿಂಸಾಚಾರದ ಘಟನೆ ವರದಿಯಾಗಿದೆ. ಕಟಕ್ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ ಮತ್ತು ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ. ಕಟಕ್‌ನಲ್ಲಿ ಶಾಂತಿ ಕದಡಲು ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭರವಸೆ ನೀಡಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಒಡಿಶಾ, ಅಕ್ಟೋಬರ್ 06: ಕಟಕ್‌ನಲ್ಲಿ ದುರ್ಗಾ ಪೂಜೆಯ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ಭಾನುವಾರದಿಂದ 36 ಗಂಟೆಗಳ ಕಾಲ ಕರ್ಫ್ಯೂ(Curfew) ವಿಧಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯಿಂದ 13 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಸಂಜೆ 7 ಗಂಟೆಯಿಂದ ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸಿಎಂಸಿ, ಸಿಡಿಎ ಮತ್ತು ಬಯಾಲಿಶ್ ಮೌಜಾ ಪ್ರದೇಶಗಳಲ್ಲಿ ನಿರ್ಬಂಧಗಳು ಜಾರಿಯಲ್ಲಿವೆ. ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಜನರಲ್ಲಿ ಮನವಿ ಮಾಡಿದ್ದಾರೆ.
ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಸ್ನ್ಯಾಪ್‌ಚಾಟ್ ಮತ್ತು ಎಕ್ಸ್ ಸೇರಿದಂತೆ ಎಲ್ಲಾ ಅಂತರ್ಜಾಲ ಮಾಧ್ಯಮ ನಿರ್ಬಂಧಿಸಲಾಗಿದೆ. ರಾತ್ರಿಯಾಗುತ್ತಿದ್ದಂತೆ, ಸೋಮವಾರ ಬೆಳಗ್ಗೆಯಿಂದ ಕಟಕ್‌ನ ವಿವಿಧ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕರ್ಫ್ಯೂ ವಿಧಿಸಲಾಯಿತು.
ಪೊಲೀಸರು ನಿರಂತರವಾಗಿ ಬೀದಿಗಳಲ್ಲಿ ಗಸ್ತು ತಿರುಗುತ್ತಿದ್ದಾರೆ. ಇಂಟರ್ನೆಟ್ ಸೇವಾ ಪೂರೈಕೆದಾರರು ಮತ್ತು ಬ್ರಾಡ್‌ಬ್ಯಾಂಡ್ ಸೇವೆಗಳನ್ನು ಸಹ ನಿರ್ಬಂಧಿಸಲಾಗಿದೆ. ಅಹಿತಕರ ಪರಿಸ್ಥಿತಿಯನ್ನು ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎಸ್. ದೇವದತ್ ಸಿಂಗ್ ಹೇಳಿದ್ದಾರೆ.
ಮತ್ತಷ್ಟು ಓದಿ: ಜಾರ್ಖಂಡ್: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಚಾಕು ಇರಿತ, 7 ಮಂದಿಗೆ ಗಂಭೀರ ಗಾಯ
ವೈದ್ಯಕೀಯ, ಅಗತ್ಯ ಸೇವೆಗಳಿಗೆ ವಿನಾಯಿತು
ವೈದ್ಯಕೀಯ ಮತ್ತು ಅಗತ್ಯ ಸೇವೆಗಳನ್ನು ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಕರ್ಫ್ಯೂ ವಿಸ್ತರಿಸಬಹುದು ಅಥವಾ ಕಡಿಮೆ ಮಾಡಬಹುದು. ಪೆಟ್ರೋಲ್ ಪಂಪ್‌ಗಳು, ಆಸ್ಪತ್ರೆಗಳು, ಮೆಡಿಕಲ್ ಶಾಪ್ ಮತ್ತು ದಿನಸಿ ಅಂಗಡಿಗಳು ತೆರೆದಿರುತ್ತವೆ.
ಕಟಕ್ ಬೀದಿಗಳು ಈಗ ಹೇಗಿವೆ ನೋಡಿ
#WATCH | Cuttack, Odisha | Visuals from Cuttack where a 36-hour curfew has been imposed and heavy police force deployed in the sensitive areas of the city after violence erupted between police and VHP
A total of 25 people, including eight policemen, were injured in the… pic.twitter.com/hFhRq2moTp
— ANI (@ANI) October 6, 2025
ಕಟಕ್‌ನಲ್ಲಿ ಕರ್ಫ್ಯೂ ಮತ್ತು ನಿರ್ಬಂಧಗಳ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಅನಗತ್ಯವಾಗಿ ಹೊರಗೆ ಓಡಾಡುವುದನ್ನು ತಪ್ಪಿಸುವಂತೆ ಮತ್ತು ಬಸ್ ಸಂಚಾರವನ್ನು ಕಡಿಮೆ ಮಾಡುವಂತೆ ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.
ಕಟಕ್ ನಗರದ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಎಸ್‌ಸಿಬಿ ವೈದ್ಯಕೀಯ ಕಾಲೇಜು ತೆರೆದಿರುತ್ತವೆ. ಪೊಲೀಸರು ವಿವಿಧ ಪ್ರದೇಶಗಳಲ್ಲಿ ನಿರಂತರವಾಗಿ ಗಸ್ತು ತಿರುಗುತ್ತಿದ್ದಾರೆ. ಕಟಕ್‌ನಲ್ಲಿ ಸೋಮವಾರ ಸಂಜೆ 7 ಗಂಟೆಯವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು. ವಿಸರ್ಜನಾ ಸಮಾರಂಭದ ನಂತರ ಉಂಟಾದ ಘರ್ಷಣೆಗಳ ಹಿನ್ನೆಲೆಯಲ್ಲಿ ಗೃಹ ಇಲಾಖೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




