ಇಂದೋರ್​: ಪ್ರಧಾನಿ ಮೋದಿ ಪ್ರಮಾಣ ವಚನ ವೇಳೆ ಬಿಜೆಪಿ ಕಚೇರಿಗೆ ಬೆಂಕಿ

ಪ್ರಧಾನಿ ಮೋದಿ ಪ್ರಮಾಣವಚನದ ವೇಳೆ ಬಿಜೆಪಿ ಕಚೇರಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.

ಇಂದೋರ್​: ಪ್ರಧಾನಿ ಮೋದಿ ಪ್ರಮಾಣ ವಚನ ವೇಳೆ ಬಿಜೆಪಿ ಕಚೇರಿಗೆ ಬೆಂಕಿ
ಬೆಂಕಿ
Follow us
ನಯನಾ ರಾಜೀವ್
|

Updated on: Jun 10, 2024 | 8:48 AM

ಪ್ರಧಾನಿ ನರೇಂದ್ರ ಮೋದಿ(Narendra Modi) ಪ್ರಮಾಣವಚನ ವೇಳೆ ಬಿಜೆಪಿ ಕಚೇರಿ ಹೊತ್ತಿ ಉರಿದಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಭಾನುವಾರ ರಾತ್ರಿ ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ನಾಲ್ಕು ಅಂತಸ್ತಿನ ಬಿಜೆಪಿ ಕಚೇರಿಯ ಮೇಲ್ಛಾವಣಿಗೆ ಬೆಂಕಿ ಆವರಿಸಿದ್ದು, ಪಕ್ಷದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರದ ವೇಳೆ ಪಟಾಕಿ ಸಿಡಿಸಿದ್ದರು.

ಕಟ್ಟಡದ ಮೇಲ್ಛಾವಣಿಯಲ್ಲಿದ್ದ ಪ್ಲೈವುಡ್, ಹಳೆಯ ಸೋಫಾ, ತ್ಯಾಜ್ಯ ವಸ್ತುಗಳು ಮತ್ತು ಇತರ ಪೀಠೋಪಕರಣಗಳ ತುಣುಕುಗಳಿಗೆ ಕೆಲವು ಬೆಂಕಿ ಕಿಡಿಗಳು ತಾಗಿ ಹೊತ್ತಿ ಉರಿದಿವೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. “ಬಿಜೆಪಿ ಕಚೇರಿಯ ಕೆಳಗೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾಗ, ರಾಕೆಟ್ ಅಥವಾ ಪಟಾಕಿಗಳಿಂದ ಕಚೇರಿಯ ಮೇಲಿನ ಮಹಡಿ, 4 ನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಇಂದೋರ್ ಎಸಿಪಿ ತುಷಾರ್ ಸಿಂಗ್ ಹೇಳಿದ್ದಾರೆ.

ಮತ್ತಷ್ಟು ಓದಿ: Modi Cabinet 3.0: ನರೇಂದ್ರ ಮೋದಿ ಹೊಸ ಕ್ಯಾಬಿನೆಟ್; ಪ್ರಮಾಣವಚನ ಸ್ವೀಕರಿಸಿದ ಕೇಂದ್ರ ಸಚಿವರ ಪಟ್ಟಿ ಇಲ್ಲಿದೆ ಸೋಫಾ ಹಾಗೂ ಕೆಲವು ತ್ಯಾಜ್ಯ ವಸ್ತುಗಳು ಅಲ್ಲಿ ಬಿದ್ದಿದ್ದರಿಂದ ಬೆಂಕಿ ಹೊತ್ತಿಕೊಂಡಿತ್ತು, ಸಮಯಕ್ಕೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಮತ್ತು ಹೆಚ್ಚಿನ ಹಾನಿಯಾಗಿಲ್ಲ ಎಂದು ಅವರು ಹೇಳಿದರು.

ಲೋಕಸಭಾ ಚುನಾವಣೆ ಮುಗಿದಿದ್ದು ಫಲಿತಾಂಶ ಹೊರಬಿದ್ದಿದೆ, ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರವು ಬಹುಮತ ಪಡೆದಿದೆ. ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ