ಡಿಕೆ ಶಿವಕುಮಾರ್ ಗೆ ಇ.ಡಿ ಬಂಧನದ ಭೀತಿ..!

ಇಡಿ ನೀಡಿದ್ದ ಸಮನ್ಸ್ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ನಲ್ಲಿ ಭಾರೀ ಹಿನ್ನಡೆಯಾಗಿದೆ. ಮಧ್ಯಂತರ ರಕ್ಷಣೆ ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಡಿಕೆಶಿ ಇಂದೇ ಇಡಿ ಅಧಿಕಾರಿಗಳಿಂದ ಬಂಧನವಾಗುವ ಸಾಧ್ಯತೆ ಹೆಚ್ಚಾಗಿದೆ. ಇಂದು ವಿಚಾರಣೆಗೆ ಹಾಜರಾಗಲು ಇಡಿ ಅಧಿಕಾರಿಗಳು ಸೂಚನೆ ನೀಡಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಲು ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಅಧಿಕಾರಿಗಳ ಮುಂದೆ ಡಿಕೆ ಶಿವಕುಮಾರ್ ಹಾಜರಾದಾಗ ವಿಚಾರಣೆ ವೇಳೆ ಅಗತ್ಯಬಿದ್ದರೆ ಇಂದೇ ಡಿಕೆಶಿಯನ್ನು […]

ಡಿಕೆ ಶಿವಕುಮಾರ್ ಗೆ ಇ.ಡಿ ಬಂಧನದ ಭೀತಿ..!
Follow us
ಸಾಧು ಶ್ರೀನಾಥ್​
| Updated By: Team Veegam

Updated on:Sep 03, 2019 | 4:25 PM

ಇಡಿ ನೀಡಿದ್ದ ಸಮನ್ಸ್ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ನಲ್ಲಿ ಭಾರೀ ಹಿನ್ನಡೆಯಾಗಿದೆ. ಮಧ್ಯಂತರ ರಕ್ಷಣೆ ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಡಿಕೆಶಿ ಇಂದೇ ಇಡಿ ಅಧಿಕಾರಿಗಳಿಂದ ಬಂಧನವಾಗುವ ಸಾಧ್ಯತೆ ಹೆಚ್ಚಾಗಿದೆ. ಇಂದು ವಿಚಾರಣೆಗೆ ಹಾಜರಾಗಲು ಇಡಿ ಅಧಿಕಾರಿಗಳು ಸೂಚನೆ ನೀಡಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಲು ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಅಧಿಕಾರಿಗಳ ಮುಂದೆ ಡಿಕೆ ಶಿವಕುಮಾರ್ ಹಾಜರಾದಾಗ ವಿಚಾರಣೆ ವೇಳೆ ಅಗತ್ಯಬಿದ್ದರೆ ಇಂದೇ ಡಿಕೆಶಿಯನ್ನು ಇಡಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ. ಒಂದು ವೇಳೆ ಇಂದು ಡಿಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗದಿದ್ರೆ ನಾಳೆ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ.

ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಮತ್ತು ಆಪ್ತರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ದಾಖಲೆಯಿಲ್ಲದ ಅಕ್ರಮ ಹಣ ಪತ್ತೆಯಾಗಿತ್ತು. ಡಿಕೆಶಿ ಮತ್ತು ಆಪ್ತರ ಮನೆಗಳಲ್ಲಿ ಒಟ್ಟು 8.59 ಕೋಟಿ ಹಣವನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದರು. ಈ ಸಂಬಂಧ ಹಣದ ಮೂಲದ ವಿವರಣೆ ನೀಡುವಂತೆ ಇಡಿ ಸಮನ್ಸ್ ನೀಡಿತ್ತು. ಇಡಿ ಸಮನ್ಸ್ ಪ್ರಶ್ನಿಸಿ ಡಿಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ನಿನ್ನೆ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

Published On - 3:31 pm, Fri, 30 August 19

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ