ಇಡಿ ನೀಡಿದ್ದ ಸಮನ್ಸ್ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ನಲ್ಲಿ ಭಾರೀ ಹಿನ್ನಡೆಯಾಗಿದೆ. ಮಧ್ಯಂತರ ರಕ್ಷಣೆ ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಡಿಕೆಶಿ ಇಂದೇ ಇಡಿ ಅಧಿಕಾರಿಗಳಿಂದ ಬಂಧನವಾಗುವ ಸಾಧ್ಯತೆ ಹೆಚ್ಚಾಗಿದೆ. ಇಂದು ವಿಚಾರಣೆಗೆ ಹಾಜರಾಗಲು ಇಡಿ ಅಧಿಕಾರಿಗಳು ಸೂಚನೆ ನೀಡಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಲು ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಅಧಿಕಾರಿಗಳ ಮುಂದೆ ಡಿಕೆ ಶಿವಕುಮಾರ್ ಹಾಜರಾದಾಗ ವಿಚಾರಣೆ ವೇಳೆ ಅಗತ್ಯಬಿದ್ದರೆ ಇಂದೇ ಡಿಕೆಶಿಯನ್ನು ಇಡಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ. ಒಂದು ವೇಳೆ ಇಂದು ಡಿಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗದಿದ್ರೆ ನಾಳೆ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ.
ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಮತ್ತು ಆಪ್ತರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ದಾಖಲೆಯಿಲ್ಲದ ಅಕ್ರಮ ಹಣ ಪತ್ತೆಯಾಗಿತ್ತು. ಡಿಕೆಶಿ ಮತ್ತು ಆಪ್ತರ ಮನೆಗಳಲ್ಲಿ ಒಟ್ಟು 8.59 ಕೋಟಿ ಹಣವನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದರು. ಈ ಸಂಬಂಧ ಹಣದ ಮೂಲದ ವಿವರಣೆ ನೀಡುವಂತೆ ಇಡಿ ಸಮನ್ಸ್ ನೀಡಿತ್ತು. ಇಡಿ ಸಮನ್ಸ್ ಪ್ರಶ್ನಿಸಿ ಡಿಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ನಿನ್ನೆ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
Published On - 3:31 pm, Fri, 30 August 19