AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ನೋಯ್ಡಾ ರಸ್ತೆ ಮಧ್ಯೆ ಪಟಾಕಿ ತುಂಬಿದ್ದ ಇ ರಿಕ್ಷಾಗೆ ತಗುಲಿದ ಬೆಂಕಿ; ಓರ್ವ ವ್ಯಕ್ತಿ ಸಾವು

ಇ-ರಿಕ್ಷಾಗೆ ಬೆಂಕಿ ಹತ್ತಿ ಪಟಾಕಿ ಸಿಡಿಯುತ್ತಿರುವ ದೃಶ್ಯ ರಸ್ತೆಯಲ್ಲಿರುವ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗ್ರೇಟರ್ ನೋಯ್ಡಾ ರಸ್ತೆ ಮಧ್ಯೆ ಪಟಾಕಿ ತುಂಬಿದ್ದ ಇ ರಿಕ್ಷಾಗೆ ತಗುಲಿದ ಬೆಂಕಿ; ಓರ್ವ ವ್ಯಕ್ತಿ  ಸಾವು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 28, 2023 | 4:53 PM

Share

ಗ್ರೇಟರ್ ನೋಯ್ಡಾದಲ್ಲಿ (Greater Noida)ರಸ್ತೆ ಮಧ್ಯದಲ್ಲಿ ಪಟಾಕಿ ತುಂಬಿದ ಇ-ರಿಕ್ಷಾಕ್ಕೆ (e-rickshaw) ಬೆಂಕಿ ಹೊತ್ತಿಕೊಂಡಿದ್ದು, ಓರ್ವ ವ್ಯಕ್ತಿ ಸಾವಿಗೀಡಾಗಿದ್ದಾರೆ. ಈ ಪ್ರದೇಶದಲ್ಲಿ ಜಗನ್ನಾಥ ಯಾತ್ರೆ ವೇಳೆ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಪೊಲೀಸ್ ಸಿಬ್ಬಂದಿ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಮಂಗಳವಾರ ನಡೆದ ಈ ಘಟನೆಯಲ್ಲಿ ಗಾಯಗೊಂಡ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ. ಇ ರಿಕ್ಷಾಗೆ ಬೆಂಕಿ ಹತ್ತಿ ಪಟಾಕಿ ಸಿಡಿಯುತ್ತಿರುವ ದೃಶ್ಯ ರಸ್ತೆಯಲ್ಲಿರುವ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ, ಇ-ರಿಕ್ಷಾ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದ ಸಣ್ಣ ಅಂಗಡಿಯೊಂದರ ಮುಂದೆ ನಿಂತಿದ್ದು ಅಲ್ಲೇ ಪಕ್ಕದಲ್ಲಿ ಜನರು ಹಾದು ಹೋಗುತ್ತಿರುವುದು ಕಾಣಿಸುತ್ತದೆ. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಜನರು ಓಡಲಾರಂಭಿಸಿದ್ದು ಆಗ ಸೈಕಲ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿ ಕೆಳಗೆ ಬಿದ್ದಿದ್ದಾರೆ. ಮೊದಲಿಗೆ ಜನರು ಗಾಬರಿಯಿಂದ ಓಡಿದ್ದರಿಂದ ರಸ್ತೆ ನಿರ್ಜನವಾಗಿತ್ತು, ಆದರೆ ನಂತರ ಕೆಲವರು ಸಹಾಯಕ್ಕಾಗಿ ಧಾವಿಸಿದ್ದಾರೆ.

ಈ ಬಗ್ಗೆ ಟ್ವಿಟರ್​ನಲ್ಲಿ ವಿಡಿಯೊ ಪೋಸ್ಟ್ ಮಾಡಿದ ಗ್ರೇಟರ್ ನೋಯ್ಡಾದ ಎಡಿಸಿಪಿ 27.02.2023 ರಂದು ದಾದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ದಾದ್ರಿ ಪಟ್ಟಣದಲ್ಲಿ ಜಗನ್ನಾಥ ಶೋಭಾ ಯಾತ್ರೆ ಸಾಂಪ್ರದಾಯಿಕವಾಗಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಕೆಲವರು ಪಟಾಕಿ ಸಿಡಿಸುತ್ತಿದ್ದರು. ಮುಂದೆ ಸಾಗುತ್ತಿದ್ದ ಇ-ರಿಕ್ಷಾದ ಮೇಲೆ ಒಂದು ಪಟಾಕಿ ಬಿದ್ದಿತು, ಅದರಲ್ಲಿ ಇತರ ಪಟಾಕಿಗಳನ್ನು ಇರಿಸಲಾಗಿತ್ತು, ಇದರಿಂದಾಗಿ ಉಳಿದವುಗಳಿಗೆ ಬೆಂಕಿ ಹಚ್ಚಿಕೊಂಡಿತು ಎಂದಿದ್ದಾರೆ.

ಅಪಘಾತದಲ್ಲಿ ಪಟಾಕಿ ಹಚ್ಚುತ್ತಿದ್ದ ಸಲ್ಮಾನ್ ಮತ್ತು ಇ-ರಿಕ್ಷಾ ಚಾಲಕ ಪಪ್ಪು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಜಲಫಿರಂಗಿಗಳನ್ನು ತಂದು ಬೆಂಕಿಯನ್ನು ನಂದಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Tue, 28 February 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ