AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗಾಗಿ ಇ-ಶ್ರಮ್ ಪೋರ್ಟಲ್: ಸರ್ಕಾರಿ ಯೋಜನೆಗಳನ್ನು ಒದಗಿಸಲು ಮಹತ್ವದ ಕ್ರಮ

ಕೋಟ್ಯಂತರ ಕಾರ್ಮಿಕರನ್ನು ಈ ಪೋರ್ಟಲ್ ಮೂಲಕ ಸರ್ಕಾರವು ಗುರುತಿಸಲಿದ್ದು, ಸಾಮಾಜಿಕ ಭದ್ರತೆ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯ ಒದಗಿಸಲು ನೆರವಾಗಲಿದೆ.

ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗಾಗಿ ಇ-ಶ್ರಮ್ ಪೋರ್ಟಲ್: ಸರ್ಕಾರಿ ಯೋಜನೆಗಳನ್ನು ಒದಗಿಸಲು ಮಹತ್ವದ ಕ್ರಮ
ಅಸಂಘಟಿತ ವಲಯದ ಕಾರ್ಮಿಕರಿಗೆ ಇ-ಪೋರ್ಟಲ್ ನೆರವು ಸಿಗಲಿದೆ. (ಪ್ರಾತಿನಿಧಿಕ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Aug 25, 2021 | 10:46 PM

Share

ದೆಹಲಿ: ಭಾರತ ಸರ್ಕಾರವು ಇ-ಶ್ರಮ್ ಹೆಸರಿನ ಪೋರ್ಟಲ್ (eSHRAM Portal) ಒಂದನ್ನು ಗುರುವಾರ (ಆಗಸ್ಟ್ 26) ಮಧ್ಯಾಹ್ನ 3.30ಕ್ಕೆ ಆರಂಭಿಸಲಿದೆ. ಇದು ಭಾರತದ ಅಸಂಘಟಿತ ವಲಯದಲ್ಲಿ ಮಹತ್ವದ ಬದಲಾವಣೆ ತರಲಿದೆ. ಕೋಟ್ಯಂತರ ಕಾರ್ಮಿಕರನ್ನು ಈ ಪೋರ್ಟಲ್ ಮೂಲಕ ಸರ್ಕಾರವು ಗುರುತಿಸಲಿದ್ದು, ಸಾಮಾಜಿಕ ಭದ್ರತೆ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯ ಒದಗಿಸಲು ನೆರವಾಗಲಿದೆ.

ಇದು ದೊಡ್ಡ ಸವಾಲು ಎಂಬುದು ನಿಜ. ಆದರೆ ಪ್ರತಿಸಲದಂತೆ ಈ ಬಾರಿಯೂ ಇಡೀ ದೇಶವು ಇಂಥ ಸವಾಲು ಎದುರಿಸಲು ಸಜ್ಜಾಗಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದ್ರ ಯಾದವ್ ಈ ಪೋರ್ಟಲ್​ ಅನ್ನು ವಿವಿಧ ರಾಜ್ಯಗಳು ಮತ್ತು ಕೇಂದ್ರಡಳಿತ ಪ್ರದೇಶಗಳಿಗೆ ಹಸ್ತಾಂತರಿಸಲಿದ್ದಾರೆ.

ಪೋರ್ಟಲ್​ಗೆ ಚಾಲನೆ ನೀಡುವ ಸಮಾರಂಭ ಲೈವ್ ಸ್ಟ್ರೀಮಿಂಗ್ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಲಭ್ಯವಿರಲಿದೆ. #ShramevJayate ಹ್ಯಾಷ್​ಟ್ಯಾಗ್​ ಬಳಸಿ ಪೋರ್ಟಲ್​ ಚಾಲನೆ ಸಮಾರಂಭ ಮತ್ತು ಸಂಬಂಧಿಸಿತರ ಇತರ ಕಾರ್ಯಕ್ರಮಗಳನ್ನು ಸರ್ಕಾರ ಹಲವು ಸಂಸ್ಥೆಗಳು ಹಂಚಿಕೊಳ್ಳಲಿವೆ. ಮುಂದಿನ ದಿನಗಳಲ್ಲಿ ಈ ಯೋಜನೆಯಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ಕೇಂದ್ರ ಸಚಿವ ಭೂಪೇಂದ್ರ ಯಾದವ್ ಈಚೆಗೆ ಪೋರ್ಟಲ್​ನ ಲೊಗೊ ಬಿಡುಗಡೆ ಮಾಡಿದ್ದರು. ಈ ಪೋರ್ಟಲ್ ಮೂಲಕ ಸರ್ಕಾರವು ಅಸಂಘಟಿತ ವಲಯದಲ್ಲಿರುವ 38 ಕೋಟಿ ಕಾರ್ಮಿಕರನ್ನು ನೋಂದಾಯಿಸುವ ಗುರಿ ಹೊಂದಿದೆ. ಕಟ್ಟಡ ನಿರ್ಮಾಣ ಕಾರ್ಮಿಕರು, ವಲಸೆ ಕಾರ್ಮಿಕರು, ರಸ್ತೆ ಬದಿ ವ್ಯಾಪಾರಿಗಳು ಮತ್ತು ಮನೆಕೆಲಸದವರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು ಎನ್ನುವ ಗುರಿಯನ್ನು ಈ ಯೋಜನೆ ಹೊಂದಿದೆ.

ಈ ಪೋರ್ಟಲ್ ಸಾರ್ವಜನಿಕ ಬಳಕೆಗೆ ಲಭ್ಯವಾಗುವ ದಿನವೇ ಅಸಂಘಟಿತ ವಲಯದ ಕಾರ್ಮಿಕರು ನೋಂದಣಿ ಮಾಡಿಕೊಳ್ಳಬಹುದು. ಕಾರ್ಮಿಕರಿಗೆ ನೆರವಾಗಲೆಂದು ಸಹಾಯವಾಣಿಯನ್ನೂ ಕಾರ್ಮಿಕ ಇಲಾಖೆ ಆರಂಭಿಸಲಿದೆ. 14434 ಸಂಖ್ಯೆಯ ಮೂಲಕ ಕಾರ್ಮಿಕರು ನೋಂದಣಿಗೆ ನೆರವು ಪಡೆದುಕೊಳ್ಳಬಹುದು.

ಈ ಯೋಜನೆಯ ಭಾಗವಾಗಿ ನೋಂದಾಯಿಸಿಕೊಳ್ಳುವ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್​ಗಳನ್ನು ನೀಡಲಾಗುತ್ತದೆ. ಈ ಕಾರ್ಡ್​ನಲ್ಲಿರುವ 12 ಅಂಕಿಗಳ ವಿಶಿಷ್ಟ ಸಂಖ್ಯೆ ಇರುತ್ತದೆ.

ಸರ್ಕಾರದ ವಿವಿಧ ಯೋಜನೆಗಳನ್ನು ಫಲಾನುಭವಿಗಳಿಗೆ ಒದಗಿಸಲು ಸಂಯೋಜಿತ ಪದ್ಧತಿಯೊಂದು ರೂಪುಗೊಳ್ಳಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. ಕಾರ್ಮಿಕರ ಮಾಹಿತಿಯನ್ನು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಒದಗಿಸಲಿವೆ. ಅಸಂಘಟಿತ ಕಾರ್ಮಿಕರು ತಮ್ಮ ಆಧಾರ್ ಕಾರ್ಡ್​ ಸಂಖ್ಯೆ, ಬ್ಯಾಂಕ್ ಖಾತೆಯ ವಿವರ, ಜನ್ಮದಿನಾಂಕ, ಸ್ವಂತ ಊರು, ಮೊಬೈಲ್ ಸಂಖ್ಯೆ ಒದಗಿಸುವ ಒದಗಿಸುವ ಮೂಲಕ ಪೋರ್ಟಲ್​ಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

(e-Shram portal helps to create database for unorganised sector workers to get government schemes)

ಇದನ್ನೂ ಓದಿ: ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್​ಗಳಿಗೆ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಇದನ್ನೂ ಓದಿ: BJP: ನಾಗರಿಕರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ಯೋಜನೆ ಮೂಲಕ ಪಕ್ಷ ಸಂಘಟನೆಗೆ ಹೊರಟ ಬಿಜೆಪಿ

ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ಅಭಿವೃದ್ಧಿ ವಿಷಯದಲ್ಲಿ ಸಿದ್ದರಾಮಯ್ಯ ಯಾವತ್ತೂ ಚರ್ಚೆ ಮಾಡಲ್ಲ: ಅಶೋಕ
ಅಭಿವೃದ್ಧಿ ವಿಷಯದಲ್ಲಿ ಸಿದ್ದರಾಮಯ್ಯ ಯಾವತ್ತೂ ಚರ್ಚೆ ಮಾಡಲ್ಲ: ಅಶೋಕ