ಭ್ರಷ್ಟಾಚಾರದಲ್ಲಿ ಕಾಂಗ್ರೆಸ್​ ವಿಶ್ವ ದಾಖಲೆ ಮಾಡಿದೆ: ಅಶ್ವಿನಿ ವೈಷ್ಣವ್

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್​ ವಿಶ್ವ ದಾಖಲೆ ಮಾಡಿದೆ ಎಂದು ಕೇಂದ್ರ ರೈಲ್ವೆ, ಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಹೇಳಿದ್ದಾರೆ.  ಯುಪಿಎ ಸರ್ಕಾರದ ಅವಧಿಯಲ್ಲಿನ 2ಜಿ ಹಗರಣವನ್ನು ಎಂದೂ ನೆನಪಿಸಿಕೊಳ್ಳಬೇಡಿ ಎಂದರು. ನರೇಂದ್ರ ಮೋದಿ(Narendra Modi) ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತ ದೂರಸಂಪರ್ಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳ ಕುರಿತು ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿದ್ದಾರೆ.

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್​ ವಿಶ್ವ ದಾಖಲೆ ಮಾಡಿದೆ: ಅಶ್ವಿನಿ ವೈಷ್ಣವ್
ಅಶ್ವಿನಿ ವೈಷ್ಣವ್
Image Credit source: Indian Express

Updated on: Dec 14, 2023 | 9:52 AM

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್​ ವಿಶ್ವ ದಾಖಲೆ ಮಾಡಿದೆ ಎಂದು ಕೇಂದ್ರ ರೈಲ್ವೆ, ಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಹೇಳಿದ್ದಾರೆ.  ಯುಪಿಎ ಸರ್ಕಾರದ ಅವಧಿಯಲ್ಲಿನ 2ಜಿ ಹಗರಣವನ್ನು ಎಂದೂ ನೆನಪಿಸಿಕೊಳ್ಳಬೇಡಿ ಎಂದರು. ನರೇಂದ್ರ ಮೋದಿ(Narendra Modi) ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತ ದೂರಸಂಪರ್ಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳ ಕುರಿತು ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿದ್ದಾರೆ.

ಆದರೆ ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ದೂರಸಂಪರ್ಕ ಕ್ಷೇತ್ರವು ಅಭಿವೃದ್ಧಿ ಹೊಂದುತ್ತಿದೆ. ಮೋದಿ ಸರ್ಕಾರವು ಟೆಲಿಕಾಂ ಕ್ಷೇತ್ರವನ್ನು ಸನ್‌ರೈಸ್ ಸೆಕ್ಟರ್‌ಗೆ ಕೊಂಡೊಯ್ಯುತ್ತಿದ್ದಾರೆ ಎಂದಿದ್ದಾರೆ.

ಇಂದು, ಟೆಲಿಕಾಂ ಕ್ಷೇತ್ರದಲ್ಲಿ ಬೆಳವಣಿಗೆ ಮತ್ತು ಹೂಡಿಕೆ ಮತ್ತು ಪಾರದರ್ಶಕತೆ ಇದೆ. ದೇಶದಲ್ಲಿ ಮಾರಾಟವಾಗುವ ಒಟ್ಟು ಸ್ಮಾರ್ಟ್‌ಫೋನ್‌ಗಳಲ್ಲಿ ಶೇಕಡಾ 30-35 ರಷ್ಟು 5G ಸಂವಹನ ಸಾಮರ್ಥ್ಯವನ್ನು ಹೊಂದಿವೆ ಎಂದು ವರದಿಯೊಂದು ತಿಳಿಸಿದೆ. ಭಾರತವು 2029 ರ ವೇಳೆಗೆ 6G ನೆಟ್‌ವರ್ಕ್ ಮೂಲಸೌಕರ್ಯವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ವರ್ಷದ ಮಾರ್ಚ್‌ನಲ್ಲಿ ಹೇಳಿದ್ದರು.

ಮತ್ತಷ್ಟು ಓದಿ: Emergency Alert: ಟೆಲಿಕಾಂ ಕಂಪನಿಯಿಂದ ಬಳಕೆದಾರರಿಗೆ ಫ್ಲ್ಯಾಶ್ ಎಚ್ಚರಿಕೆ ಸಂದೇಶ

OTT (ಓವರ್-ದಿ-ಟಾಪ್) ಘಟಕಗಳಿಂದ ನೆಟ್‌ವರ್ಕ್ ಬಳಕೆಯ ಶುಲ್ಕಗಳನ್ನು ವಿಧಿಸುವ ಪ್ರಸ್ತಾಪದ ಕುರಿತು ಪ್ರಶ್ನೆಗಳಿಗೆ ಪ್ರತ್ಯುತ್ತರಿಸುವಾಗ ಭಾರತದಲ್ಲಿ ನೆಟ್ ನ್ಯೂಟ್ರಾಲಿಟಿ ತತ್ವವು ಉತ್ತಮವಾಗಿದೆ ಎಂದು ವೈಷ್ಣವ್ ಹೇಳಿದರು.

ಒಂದೆರಡು ಕಂಪನಿಗಳು ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸುತ್ತಿವೆ ಎಂಬ ಗೌರವ್ ಗೊಗೊಯ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ವೈಷ್ಣವ್ ಅವರು ಯುಪಿಎ ಅವಧಿಯಲ್ಲಿ ನಡೆದ 2G ಹಗರಣ ಮತ್ತು ಟೆಲಿಕಾಂ ಕ್ಷೇತ್ರವನ್ನು ವಿಶೇಷವಾಗಿ BSNLನ್ನು ಸರ್ಕಾರವು ಹಾಳುಮಾಡಿರುವುದು ಎಲ್ಲರಿಗೂ ನೆನಪಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us