Video: ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ: ಹಲವೆಡೆ ಇವಿಎಂ ದೋಷ, ಮತಗಟ್ಟೆಗಳ ಬಳಿ ಹಿಂಸಾಚಾರ

Updated on: Apr 29, 2026 | 10:56 AM

ಬಂಗಾಳದ ಅಂತಿಮ ಸಮರದಲ್ಲಿ ಮತದಾನದ ಮೊದಲ ಗಂಟೆಗಳಲ್ಲೇ ರಕ್ತಪಾತ ನಡೆದಿದೆ. ನಾಡಿಯಾ ಜಿಲ್ಲೆಯ ಛಪ್ರಾದಲ್ಲಿ ಬಿಜೆಪಿ ಏಜೆಂಟ್ ಮೊಶರೆಫ್ ಮಿರ್ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಂದೂಕು ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಸೈಕತ್ ಸರ್ಕಾರ್ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಕೋಲ್ಕತ್ತಾ, ಏಪ್ರಿಲ್ 29: ಬಂಗಾಳದ ಅಂತಿಮ ಸಮರದಲ್ಲಿ ಮತದಾನದ ಮೊದಲ ಗಂಟೆಗಳಲ್ಲೇ ರಕ್ತಪಾತ ನಡೆದಿದೆ. ನಾಡಿಯಾ ಜಿಲ್ಲೆಯ ಛಪ್ರಾದಲ್ಲಿ ಬಿಜೆಪಿ ಏಜೆಂಟ್ ಮೊಶರೆಫ್ ಮಿರ್ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಂದೂಕು ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಸೈಕತ್ ಸರ್ಕಾರ್ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಇತ್ತ ಎಂಟಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೆವಾಲ್ ಅವರು ತಮ್ಮ ಏಜೆಂಟ್‌ನನ್ನು ಮತಗಟ್ಟೆಯಿಂದ ಹೊರಹಾಕಿದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದರು. ಮತಗಟ್ಟೆಯೊಳಗೆ ಅಕ್ರಮವಾಗಿ ಜನರು ನುಗ್ಗುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಹಲವೆಡೆ ಇವಿಎಂ ದೋಷಗಳಿಂದ ಮತದಾನ ವಿಳಂಬವಾಗಿದ್ದು, ಮತದಾರರು ಪರದಾಡುವಂತಾಗಿದೆ. ಬಿಗಿ ಭದ್ರತೆಯ ನಡುವೆಯೂ ಘರ್ಷಣೆಗಳು ಮುಂದುವರೆದಿದ್ದು, ಬಂಗಾಳದ ಅಂತಿಮ ಹಂತದ ಮತದಾನವು ಪ್ರಕ್ಷುಬ್ಧ ವಾತಾವರಣದಲ್ಲಿ ಸಾಗುತ್ತಿದೆ. ತೃಣಮೂಲ ಕಾಂಗ್ರೆಸ್ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 29, 2026 10:55 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More