Earthquake: ಜಮ್ಮು- ಕಾಶ್ಮೀರದಲ್ಲಿ 4.0 ತೀವ್ರತೆಯ ಭೂಕಂಪ

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಬೆಳಿಗ್ಗೆ 10.10ಕ್ಕೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

Earthquake: ಜಮ್ಮು- ಕಾಶ್ಮೀರದಲ್ಲಿ 4.0 ತೀವ್ರತೆಯ ಭೂಕಂಪ
ಭೂಕಂಪ

Updated on: Apr 12, 2023 | 11:21 AM

ಜಮ್ಮು ಮತ್ತು ಕಾಶ್ಮೀರದಲ್ಲಿ (jammu and kashmir) ಇಂದು ಬೆಳಿಗ್ಗೆ 10.10ಕ್ಕೆ 4.0 ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರವು ಹೆಚ್ಚಿನ ಭೂಕಂಪನ ವಲಯ ಎಂದು ತಿಳಿದು ಬಂದಿದೆ. ಭೂಕಂಪದ ಆಳ 10 ಕಿ.ಮೀ ಇತ್ತು ಎಂದು ಅದು ಹೇಳಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಭೂಕಂಪದ ತೀವ್ರತೆ: 4.0, 12-04-2023 ರಂದು ಸಂಭವಿಸಿದೆ, 10:10:51 IST, ಲ್ಯಾಟ್: 34.44 ಮತ್ತು ಉದ್ದ: 73.60, ಆಳ: 10 ಕಿಮೀ, ಸ್ಥಳ: ಜಮ್ಮು ಮತ್ತು ಕಾಶ್ಮೀರ, ಭಾರತ, ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಟ್ವಿಟರ್‌ನಲ್ಲಿ ಬರೆದುಕೊಂಡಿದೆ.

ಬಿಹಾರದಲ್ಲಿ 4.3 ತೀವ್ರತೆ  ಭೂಂಕಪ

ಬಿಹಾರದಲ್ಲಿ ಭೂಕಂಪ ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ. ಪುರ್ನಿಯಾ ಬಳಿ 10 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಬೆಳಿಗ್ಗೆ 5.35 ರ ಸುಮಾರಿಗೆ ಕಂಪನದ ಅನುಭವವಾಯಿತು. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.3 ಎಂದು ಅಳೆಯಲಾಗಿದೆ. ಬಿಹಾರದ ಅರಾರಿಯಾದಲ್ಲಿ ಬುಧವಾರ ಬೆಳಗ್ಗೆ 5.35ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಭೂಕಂಪದ ಕೇಂದ್ರಬಿಂದುವು ನೆಲದ ಮೇಲ್ಮೈಯಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿದೆ.

Published On - 11:21 am, Wed, 12 April 23

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us