AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯಗಳಲ್ಲಿ ಕಂಪಿಸಿದ ಭೂಮಿ: 5.4ರ ತೀವ್ರತೆ ದಾಖಲು

ಭೂಮಿಯ 10 ಕಿಮೀ ಆಳದಲ್ಲಿ ಭಾರತೀಯ ಕಾಲಮಾನ ರಾತ್ರಿ 8.49ಕ್ಕೆ ಭೂಮಿಯು ಕಂಪಿಸಿದೆ ಎಂದು ಭೂತರಂಗಾತರ ತಜ್ಞರು ಮಾಹಿತಿ ನೀಡಿದ್ದಾರೆ. ನೇಪಾಳದ ಕೆಲ ಊರುಗಳಲ್ಲಿಯೂ ಜನರಿಗೆ ಭೂಕಂಪನದ ಅನುಭವವಾಗಿದೆ.

ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯಗಳಲ್ಲಿ ಕಂಪಿಸಿದ ಭೂಮಿ: 5.4ರ ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 05, 2021 | 9:41 PM

Share

ಗ್ಯಾಂಗ್​ಟಕ್: ಸಿಕ್ಕಿಂ ರಾಜಧಾನಿ ಗ್ಯಾಂಗ್​ಟಕ್ ನಗರದಲ್ಲಿ ಸೋಮವಾರ ರಾತ್ರಿ ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ಪ್ರಮಾಣ 5.4 ದಾಖಲಾಗಿದೆ. ಗ್ಯಾಂಗ್​ಟಕ್​ ನಗರಕ್ಕೆ 25 ಕಿಮೀ ಪೂರ್ವದಲ್ಲಿ ಭೂಕಂಪದ ಕೇಂದ್ರವಿತ್ತು ಎಂದು ಭೂವಿಜ್ಞಾನಿಗಳು ಹೇಳಿದ್ದಾರೆ.

ಭೂಮಿಯ 10 ಕಿಮೀ ಆಳದಲ್ಲಿ ಭಾರತೀಯ ಕಾಲಮಾನ ರಾತ್ರಿ 8.49ಕ್ಕೆ ಭೂಮಿಯು ಕಂಪಿಸಿದೆ ಎಂದು ಭೂತರಂಗಾತರ ತಜ್ಞರು ಮಾಹಿತಿ ನೀಡಿದ್ದಾರೆ. ಸಿಕ್ಕಿಂ ಜೊತೆಗೆ ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ರಾಜ್ಯಗಳಲ್ಲಿಯೂ ಭೂಮಿಯು ಕಂಪಿಸಿರುವುದು ವರದಿಯಾಗಿದೆ. ನೇಪಾಳದ ಕೆಲ ಊರುಗಳಲ್ಲಿಯೂ ಜನರಿಗೆ ಭೂಕಂಪನದ ಅನುಭವವಾಗಿದೆ.

ಪಾಟ್ನಾ, ಅರಾರಿಯಾ ಮತ್ತು ಕಿಶನ್​ಗಂಜ್​ಗಳ ನಾಗರಿಕರು ಭೂಮಿ ಕಂಪಿಸಿರುವುದನ್ನು ದೃಢಪಡಿಸಿದ್ದಾರೆ. ಭೂಕಂಪದಿಂದ ಆಸ್ತಿ ಮತ್ತು ಪ್ರಾಣಹಾನಿ ಆಗಿರುವ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ಫೆಬ್ರುವರಿ 15ಂದು 3.5 ತೀವ್ರತೆಯ ಭೂಕಂಪ ಪಾಟ್ನಾದಲ್ಲಿ ಸಂಭವಿಸಿತ್ತು. ಈ ಭೂಕಂಪದ ಕೇಂದ್ರ ನಳಂದ ಪಟ್ಟಣದ 20 ಕಿಮೀ ವಾಯವ್ಯಕ್ಕೆ ಮತ್ತು ಭೂಮಿಯ 5 ಕಿಮೀ ಆಳದಲ್ಲಿ ಇತ್ತು.

ನ್ಯೂಝಿಲೆಂಡ್​ನಲ್ಲಿ ಪ್ರಬಲ ಭೂಕಂಪ ನ್ಯೂಝಿಲೆಂಡ್​ನ ಉತ್ತರ ದ್ವೀಪದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಿಕ್ಟರ್​ ಮಾಪಕದಲ್ಲಿ ಭೂಕಂಪದ ತೀವ್ರತೆ 6 ಎಂದು ನಮೂದಾಗಿದೆ. ಆಸ್ತಿ ಮತ್ತು ಪ್ರಾಣ ಹಾನಿಯ ಮಾಹಿತಿ ಇನ್ನೂ ಸಿಕ್ಕಿಲ್ಲ.

(Earthquake in Sikkim Nepal border tremors felt in Bihar Assam and West Bengal)

ಇದನ್ನೂ ಓದಿ: Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

ಇದನ್ನೂ ಓದಿ: ದಕ್ಷಿಣ ಪೆಸಿಫಿಕ್‌ನಲ್ಲಿ 7.7 ತೀವ್ರತೆಯ ಭೂಕಂಪ, ಸುನಾಮಿ ಖಚಿತ ಪಡಿಸಿದ ಆಸ್ಟ್ರೇಲಿಯಾ ಹವಾಮಾನ ಇಲಾಖೆ

Follow Us
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ