AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಮೇಘಾಲಯದ ಪಶ್ಚಿಮ ಖಾಸಿ ಬೆಟ್ಟದಲ್ಲಿ ಭೂಕಂಪ: 3.6 ರಷ್ಟು ತೀವ್ರತೆ ದಾಖಲು

ಮೇಘಾಲಯದ ಪಶ್ಚಿಮ ಖಾಸಿ ಬೆಟ್ಟಗಳಲ್ಲಿ ಲಘು ಭೂಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 3.6ರಷ್ಟು ಕಂಪನದ ತೀವ್ರತೆ ದಾಖಲು ಆಗಿದೆ. 

Earthquake: ಮೇಘಾಲಯದ ಪಶ್ಚಿಮ ಖಾಸಿ ಬೆಟ್ಟದಲ್ಲಿ ಭೂಕಂಪ: 3.6 ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:May 28, 2023 | 6:54 PM

Share

ಮೇಘಾಲಯ: ಮೇಘಾಲಯದ ಪಶ್ಚಿಮ ಖಾಸಿ ಬೆಟ್ಟಗಳಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಲಘು ಭೂಕಂಪನ (Earthquake) ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 3.6ರಷ್ಟು ಕಂಪನದ ತೀವ್ರತೆ ದಾಖಲು ಆಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ದಿಂದ 10 ಕಿ.ಮೀ ದೂರದಲ್ಲಿ ಭೂಕಂಪನ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸದ್ಯ ಇದುವರೆಗೂ ಯಾವುದೇ ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ. ಮೇ 22 ರಂದು ನೆರೆಯ ದೇಶ ಮ್ಯಾನ್ಮಾರ್​ನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿತ್ತು.

ಮ್ಯಾನ್ಮಾರ್ನಲ್ಲಿ ಬೆಳಿಗ್ಗೆ 8:15 ರ ಸುಮಾರಿಗೆ ಭೂಕಂಪ ಸಂಭವಿಸಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿತ್ತು. ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿರಲಿಲ್ಲ.

ಇದನ್ನೂ ಓದಿ: Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ, 4.9 ತೀವ್ರತೆ ದಾಖಲು

ಭಾನುವಾರ ಬೆಳಗ್ಗೆ 10.19ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 4.9ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ  5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ಹಾಗೆಯೇ ದೆಹಲಿ, ಎನ್​ಸಿಆರ್​ ಹಾಗೂ ಪಂಜಾಬ್​ ಹರ್ಯಾಣ ಭಾಗಗಳಲ್ಲೂ ಭೂಮಿ ಕಂಪಿಸಿದೆ. ಭೂಕಂಪದ ಕೇಂದ್ರ ಬಿಂದು ಅಫ್ಘಾನಿಸ್ತಾನದ ತಜಿಖಿಸ್ತಾನದ ಗಡಿಯಲ್ಲಿದೆ.

ಮಹಾರಾಷ್ಟ್ರದ ಪಾಲ್ಘಾರ್‌ನಲ್ಲಿ ಎರಡು ಸಲ ಕಂಪಿಸಿದ ಭೂಮಿ

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಕ್ರಮವಾಗಿ ಸಂಜೆ 5:15 ಮತ್ತು 5:28 ಕ್ಕೆ ರಿಕ್ಟರ್ ಮಾಪಕದಲ್ಲಿ 3.5 ಮತ್ತು 3.3 ರ ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿವೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಹೇಳಿದೆ.ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಹೊರತಾಗಿ, ಪಾಲ್ಘರ್ ಜಿಲ್ಲಾಧಿಕಾರಿಗಳ ಕಚೇರಿ ಕೂಡಾ ಭೂಕಂಪ ವರದಿಯನ್ನು ದೃಢಪಡಿಸಿದೆ. ಇದುವರೆಗೆ ಯಾವುದೇ ಹಾನಿ ವರದಿಯಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:40 pm, Sun, 28 May 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?