ರಾಜಸ್ಥಾನದಲ್ಲಿ 4.2 ಮಧ್ಯಮ ತೀವ್ರತೆಯ ಭೂಕಂಪ: ದೆಹಲಿ-ಎನ್‌ಸಿಆರ್‌ನಲ್ಲೂ ನಡುಕ
ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ 4.2 ಮಧ್ಯಮ ತೀವ್ರತೆಯ ಭೂಕಂಪನ ಸಂಭವಿಸಿದ್ದು, ಇದರ ತೀವ್ರತೆಗೆ ದೆಹಲಿ-ಎನ್‌ಸಿಆರ್‌ನಲ್ಲೂ ನಡುಕ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ದೆಹಲಿ: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ 4.2 ಮಧ್ಯಮ ತೀವ್ರತೆಯ ಭೂಕಂಪನ ಸಂಭವಿಸಿದ್ದು, ಇದರ ತೀವ್ರತೆಗೆ ದೆಹಲಿ-ಎನ್‌ಸಿಆರ್‌ನಲ್ಲೂ ನಡುಕ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಆರಂಭಿಕ ವರದಿಗಳ ಪ್ರಕಾರ ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.2ರಷ್ಟು ದಾಖಲಾಗಿದೆ. ರಾಜಸ್ಥಾನದ ಅಲ್ವಾರ್ ಭೂಕಂಪದ ಕೇಂದ್ರಬಿಂದುವಾಗಿದ್ದು, ರಾತ್ರಿ 11.46 ಕ್ಕೆ ಐದು ಕಿಲೋಮೀಟರ್ ಆಳದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ವಿವರಿಸಿದೆ. ಭೂಕಂಪನದ ತೀವ್ರತೆಗೆ ದೆಹಲಿ-ಎನ್‌ಸಿಆರ್‌ನಲ್ಲೂ ನಡುಕ ಉಂಟಾಗಿದ್ದು ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಹರಿಯಾಣದ ಗುರುಗ್ರಾಮ್‌ನಿಂದ ನೈರುತ್ಯ ದಿಕ್ಕಿನಲ್ಲಿ 48 ಕಿಲೋಮೀಟರ್ ದೂರದಲ್ಲಿ 7.5 ಕಿಲೋಮೀಟರ್ ಆಳದಲ್ಲಿ ಮೂಲವನ್ನು ಕಂಡುಹಿಡಿಯಲಾಗಿದೆ. ದೆಹಲಿ, ನೋಯ್ಡಾ, ಗುರುಗ್ರಾಮ್ ಮತ್ತು ಗಾಜಿಯಾಬಾದ್‌ನ ಕೆಲವು ಭಾಗಗಳಲ್ಲಿ ನಡುಕ ಉಂಟಾಗಿದೆ ಎಂದು ಟ್ವಿಟರ್‌ನಲ್ಲಿ ಕೆಲವರು ಮಾಹಿತಿ ಹಂಚಿಕೊಂಡಿದ್ದಾರೆ.
ನಿಮ್ಮ ಮುಖ ನಿಮಗೆ ಬೇಸರವಾಗಿದೆಯೆ? ಜಪಾನಿನಲ್ಲಿ ಲಭ್ಯ ತ್ರಿಡಿ ಮುಖವಾಡ!