AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದ ಉಖ್ರುಲ್​ನಲ್ಲಿ 5.1 ತೀವ್ರತೆಯ ಭೂಕಂಪ

ಮಣಿಪುರದ ಉಖ್ರುಲ್​ನಲ್ಲಿ 5.1 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ. ಸೋಮವಾರ ರಾತ್ರಿ 11.1ಕ್ಕೆ 20 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಹಾನಿಯ ಬಗ್ಗೆ ವರದಿಯಾಗಿಲ್ಲ. ಜುಲೈ 21 ರಂದು ಉಕ್ರುಲ್ 3.5 ತೀವ್ರತೆಯ ಮತ್ತೊಂದು ಭೂಕಂಪಕ್ಕೆ ಸಾಕ್ಷಿಯಾಗಿತ್ತು. ಏತನ್ಮಧ್ಯೆ, ಮಂಗಳವಾರ ಅಂಡಮಾನ್ ಸಮುದ್ರದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. NCS ಪ್ರಕಾರ, ಮಂಗಳವಾರ ಮುಂಜಾನೆ 3.39 ಕ್ಕೆ ಭೂಕಂಪ ಸಂಭವಿಸಿದೆ ಮತ್ತು 93 ಕಿ.ಮೀ ಆಳದಲ್ಲಿ ಸಂಭವಿಸಿದೆ.

ಮಣಿಪುರದ ಉಖ್ರುಲ್​ನಲ್ಲಿ 5.1 ತೀವ್ರತೆಯ ಭೂಕಂಪ
ಭೂಕಂಪ
ನಯನಾ ರಾಜೀವ್
|

Updated on: Sep 12, 2023 | 7:39 AM

Share

ಮಣಿಪುರ(Manipur)ದ ಉಖ್ರುಲ್​ನಲ್ಲಿ 5.1 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ. ಸೋಮವಾರ ರಾತ್ರಿ 11.1ಕ್ಕೆ 20 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಹಾನಿಯ ಬಗ್ಗೆ ವರದಿಯಾಗಿಲ್ಲ. ಜುಲೈ 21 ರಂದು ಉಕ್ರುಲ್ 3.5 ತೀವ್ರತೆಯ ಮತ್ತೊಂದು ಭೂಕಂಪಕ್ಕೆ ಸಾಕ್ಷಿಯಾಗಿತ್ತು. ಏತನ್ಮಧ್ಯೆ, ಮಂಗಳವಾರ ಅಂಡಮಾನ್ ಸಮುದ್ರದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. NCS ಪ್ರಕಾರ, ಮಂಗಳವಾರ ಮುಂಜಾನೆ 3.39 ಕ್ಕೆ ಭೂಕಂಪ ಸಂಭವಿಸಿದೆ ಮತ್ತು 93 ಕಿ.ಮೀ ಆಳದಲ್ಲಿ ಸಂಭವಿಸಿದೆ.

ಸೋಮವಾರ ಮುಂಜಾನೆ ಬಂಗಾಳ ಕೊಲ್ಲಿಯಲ್ಲಿ 4.4 ತೀವ್ರತೆಯ ಮತ್ತೊಂದು ಭೂಕಂಪ ವರದಿಯಾಗಿದೆ. ಭೂಕಂಪವು 70 ಕಿಮೀ ಆಳದಲ್ಲಿ ದಾಖಲಾಗಿದೆ ಎಂದು ದೇಶದಲ್ಲಿ ಭೂಕಂಪದ ಚಟುವಟಿಕೆಯ ಮೇಲ್ವಿಚಾರಣೆಗಾಗಿ ಕೇಂದ್ರ ಸರ್ಕಾರದ ನೋಡಲ್ ಏಜೆನ್ಸಿಯಾದ ಎನ್‌ಸಿಎಸ್ ತಿಳಿಸಿದೆ.

ಮತ್ತಷ್ಟು ಓದಿ: Morocco Earthquake: ಉತ್ತರ ಆಫ್ರಿಕಾ ಖಂಡದ ಮೊರಾಕ್ಕೊ ದೇಶದಲ್ಲಿ ಭೂಕಂಪನದಿಂದ 2 ಸಾವಿರ ಜನರ ಸಾವು

ಒಂದು ದಿನದ ಹಿಂದಷ್ಟೆ ಇಂಡೋನೇಷ್ಯಾದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ, ಈ ವರ್ಷ ಏಪ್ರಿಲ್​ನಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿತ್ತು, ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿತ್ತು. ಮೊರಾಕೋದಲ್ಲಿ ಭೂಕಂಪದಿಂದ 2,700ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 6.8 ತೀವ್ರತೆಯ ಭೂಕಂಪ ಸಂಭವಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?