AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರಿ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲು

ಭಾರತದ ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲಾಗಿದೆ. ಭೂಮಿಯ ಆಳದಲ್ಲಿ ಉಂಟಾದ ಈ ಪ್ರಕಂಪನದಿಂದಾಗಿ ದ್ವೀಪದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.0ರಷ್ಟು ತೀವ್ರತೆ ದಾಖಲಾಗಿದ್ದು, ಭೂಮಿಯ ಮೇಲ್ಮೈಯಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದೆ.  ಸದ್ಯಕ್ಕೆ ಲಭ್ಯವಿರುವ ಪ್ರಾಥಮಿಕ ವರದಿಗಳ ಪ್ರಕಾರ, ಈ ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಭಾರಿ ಹಾನಿಯಾದ ವರದಿಯಾಗಿಲ್ಲ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರಿ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲು
ಭೂಕಂಪImage Credit source: Getty Images
ಸುಷ್ಮಾ ಚಕ್ರೆ
|

Updated on: Oct 29, 2026 | 8:54 PM

Share

ಪೋರ್ಟ್ ಬ್ಲೇರ್, ಅಕ್ಟೋಬರ್ 29: ಭಾರತದ ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹದಲ್ಲಿ ಇಂದು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲಾಗಿದೆ. ಅಮೆರಿಕದ ಭೌಗೋಳಿಕ ಸಮೀಕ್ಷೆ (USGS) ನೀಡಿದ ಮಾಹಿತಿಯ ಪ್ರಕಾರ, ಅಂಡಮಾನ್‌ನ ಬ್ಯಾಂಬೂ ಫ್ಲಾಟ್‌ ಭಾಗದಿಂದ ಉತ್ತರ-ವಾಯುವ್ಯಕ್ಕೆ ಸುಮಾರು 218 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ.

ಸದ್ಯಕ್ಕೆ ಲಭ್ಯವಿರುವ ಮಾಹಿತಿಯ ಪ್ರಕಾರ, ಈ ಭೂಕಂಪನದಿಂದ ಯಾವುದೇ ಆಸ್ತಿಪಾಸ್ತಿ ಹಾನಿ ಅಥವಾ ಪ್ರಾಣಹಾನಿ ಸಂಭವಿಸಿದ ವರದಿಯಾಗಿಲ್ಲ. ಅಂಡಮಾನ್ ಮತ್ತು ನಿಕೋಬಾರ್ ಪ್ರದೇಶದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಸರಣಿ ಭೂಕಂಪನಗಳು ವರದಿಯಾಗುತ್ತಿವೆ.

ಇದನ್ನೂ ಓದಿ: ವಿಡಿಯೋ: ಟಿಬೆಟ್‌ನಲ್ಲಿ 7.0 ತೀವ್ರತೆಯ ಭೂಕಂಪ: 18 ಸಾವು, 46 ಮಂದಿಗೆ ಗಾಯ, 300ಕ್ಕೂ ಹೆಚ್ಚು ಮನೆಗಳು ನೆಲಸಮ

ಭೂಕಂಪನದ ತೀವ್ರತೆಯು ಮಧ್ಯಮ ಪ್ರಮಾಣದ್ದಾಗಿದ್ದರಿಂದ ಯಾವುದೇ ಸುನಾಮಿಯ ಮುನ್ನೆಚ್ಚರಿಕೆಯನ್ನು ನೀಡಲಾಗಿಲ್ಲ ಎಂದು ಸಾಗರ ಮಾಹಿತಿ ಸೇವೆಗಳ ರಾಷ್ಟ್ರೀಯ ಕೇಂದ್ರ ಮತ್ತು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಕರಾವಳಿ ತೀರದ ಜನರಿಗೆ ಜಾಗರೂಕರಾಗಿರಲು ಸೂಚಿಸಲಾಗಿದ್ದು, ವಿಪತ್ತು ನಿರ್ವಹಣಾ ಪಡೆಗಳು ಹಾಗೂ ಸ್ಥಳೀಯ ಆಡಳಿತ ಮಂಡಳಿ ಪರಿಸ್ಥಿತಿಯ ಮೇಲೆ ನಿಕಟ ನಿಗಾ ವಹಿಸಿವೆ.

ಚೀನಾದ ಟಿಬೆಟ್‌ ವಲಯದಲ್ಲಿ 7.0 ತೀವ್ರತೆಯ ಭೀಕರ ಭೂಕಂಪ:

ಕಳೆದ ವಾರ ಚೀನಾದ ಆಡಳಿತಕ್ಕೊಳಪಟ್ಟ ಟಿಬೆಟ್ ಸ್ವಾಯತ್ತ ಪ್ರದೇಶದ ನಾಗ್ಚು ನಗರದ ಬಖೆನ್ ಕೌಂಟಿಯಲ್ಲಿ ರಾತ್ರಿ 10.33ರ ಸುಮಾರಿಗೆ ಭಾರಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಬರೋಬ್ಬರಿ 7.0 ತೀವ್ರತೆ ದಾಖಲಾಗಿದ್ದು, ಭೂಮಿಯ ಮೇಲ್ಮೈಯಿಂದ 10 ಕಿಲೋಮೀಟರ್ ಆಳದಲ್ಲಿ ಕೇಂದ್ರಬಿಂದು ದಾಖಲಾಗಿತ್ತು.

ಇತ್ತೀಚೆಗಷ್ಟೇ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ರಾತ್ರಿ 8ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಭೂಕಂಪನದ ಆಘಾತಕ್ಕೆ ಜಲಪ್ರಳಯದ ಭೀತಿಕೊಂಡ ಜನರು ಭಯದಿಂದ ಮನೆಗಳಿಂದ ಹೊರಗೆ ಓಡಿಬಂದಿದ್ದರು. ಉತ್ತರಕಾಶಿಯಿಂದ ವಾಯುವ್ಯಕ್ಕೆ 2 ಕಿ.ಮೀ ದೂರದಲ್ಲಿ, 11 ಕಿ.ಮೀ ಆಳದಲ್ಲಿ ಇದರ ಕೇಂದ್ರಬಿಂದುವಿತ್ತು. ಅಕ್ಟೋಬರ್ 6ರಂದು ಚಮೋಲಿ ಜಿಲ್ಲೆಯಲ್ಲೂ 4.9 ತೀವ್ರತೆಯ ಕಂಪನ ದಾಖಲಾಗಿತ್ತು.

ಇದನ್ನೂ ಓದಿ: ಪೆಸಿಫಿಕ್ ಸಾಗರದಲ್ಲಿ ನಡುಗಿದ ಭೂಮಿ: ವನವಾಟು ದ್ವೀಪಗಳಲ್ಲಿ 3 ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ನೇಪಾಳದ ಸುದೂರ್ ಪಶ್ಚಿಮ ಪ್ರಾಂತ್ಯದ, ಭಾರತ-ನೇಪಾಳ ಗಡಿಗೆ ಸಮೀಪವಿರುವ ಬೆಟಾಡಿ ಜಿಲ್ಲೆಯ ದಿಲಸೈನಿ ಪ್ರದೇಶದಲ್ಲಿ 4.2 ತೀವ್ರತೆಯ ಭೂಕಂಪನ ದಾಖಲಾಗಿದೆ. ಬೆಟಾಡಿ ಹಾಗೂ ದಾರ್ಚುಲಾ ಜಿಲ್ಲೆಗಳಲ್ಲಿ ಪ್ರಕಂಪನದ ಅನುಭವವಾಗಿದೆ. ಅತ್ಯಂತ ಜಾಗೃತ ಭೂಕಂಪನ ವಲಯಗಳಾದ ಸಿಸ್ಮಿಕ್ ಝೋನ್ 4 ಮತ್ತು 5 ರ ವ್ಯಾಪ್ತಿಯಲ್ಲಿ ಹಿಮಾಲಯನ್ ರಾಷ್ಟ್ರ ನೇಪಾಳ ಇರುವುದರಿಂದ ಇಲ್ಲಿ ಆಗಾಗ ಭೂಕಂಪನಗಳು ಸಂಭವಿಸುತ್ತಿರುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಮೀರಿದ ರೈತರ ತಾಳ್ಮೆ: ಮತ್ತೊಂದು ಹಂತಕ್ಕೆ ಕಬ್ಬು ಬೆಳೆಗಾರರ ಹೋರಾಟ
ಮೀರಿದ ರೈತರ ತಾಳ್ಮೆ: ಮತ್ತೊಂದು ಹಂತಕ್ಕೆ ಕಬ್ಬು ಬೆಳೆಗಾರರ ಹೋರಾಟ
ನಂದಿನಿ ಹಾಲಿನ ಬೆಲೆ ಹೆಚ್ಚಳ ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್​​
ನಂದಿನಿ ಹಾಲಿನ ಬೆಲೆ ಹೆಚ್ಚಳ ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್​​
ಕೇವಲ ಹಾಲು ಮಾತ್ರವಲ್ಲ ಅದರ ಉತ್ಪನ್ನಗಳ ಬೆಲೆನೂ ಜಾಸ್ತಿ ಆಗುತ್ತೆ: ಸವದಿ
ಕೇವಲ ಹಾಲು ಮಾತ್ರವಲ್ಲ ಅದರ ಉತ್ಪನ್ನಗಳ ಬೆಲೆನೂ ಜಾಸ್ತಿ ಆಗುತ್ತೆ: ಸವದಿ
ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ:ಬಿಗ್ ಅಪ್ಡೇಟ್ ನೀಡಿದ ಸಚಿವ
ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ:ಬಿಗ್ ಅಪ್ಡೇಟ್ ನೀಡಿದ ಸಚಿವ
ಜೈಲಿನಿಂದ ಕೊಟ್ಟ ಸಂದೇಶಕ್ಕೆ ತಲೆ ಕೆಡಿಸಿಕೊಳ್ಳಬೇಕಿಲ್ಲ: ಧನ್ವೀರ್ ಲಾಯರ್
ಜೈಲಿನಿಂದ ಕೊಟ್ಟ ಸಂದೇಶಕ್ಕೆ ತಲೆ ಕೆಡಿಸಿಕೊಳ್ಳಬೇಕಿಲ್ಲ: ಧನ್ವೀರ್ ಲಾಯರ್
ಸಿದ್ದರಾಮಯ್ಯ ಈಸ್ ಬ್ಯಾಕ್: ಅಹಿಂದ ಹಳೆ ಅಸ್ತ್ರಕ್ಕೆ ಸಾಣೆ ಹಿಡಿಯಲು ಸಿದ್ದತೆ
ಸಿದ್ದರಾಮಯ್ಯ ಈಸ್ ಬ್ಯಾಕ್: ಅಹಿಂದ ಹಳೆ ಅಸ್ತ್ರಕ್ಕೆ ಸಾಣೆ ಹಿಡಿಯಲು ಸಿದ್ದತೆ
ಹೆಣ್ಮಕ್ಕಳ ಬಗ್ಗೆ ತೂಕವಾಗಿ ಮಾತಾಡಬೇಕು: ವಿವಾದಕ್ಕೆ ಪ್ರೇಮ್ ಪ್ರತಿಕ್ರಿಯೆ
ಹೆಣ್ಮಕ್ಕಳ ಬಗ್ಗೆ ತೂಕವಾಗಿ ಮಾತಾಡಬೇಕು: ವಿವಾದಕ್ಕೆ ಪ್ರೇಮ್ ಪ್ರತಿಕ್ರಿಯೆ
‘ದರ್ಶನ್​​ ಅನ್ನು ಹೊರಗೆ ತರಲು ವಿಜಯಲಕ್ಷ್ಮಿ ಬಹಳ ಕಷ್ಟಪಡುತ್ತಿದ್ದಾರೆ’
‘ದರ್ಶನ್​​ ಅನ್ನು ಹೊರಗೆ ತರಲು ವಿಜಯಲಕ್ಷ್ಮಿ ಬಹಳ ಕಷ್ಟಪಡುತ್ತಿದ್ದಾರೆ’
10 ಕೋಟಿ ರೂಪಾಯಿ ವಿವಾದ; ಎಲ್ಲಾ ತನಿಖೆ ಎದುರಿಸಲು ಧನ್ವೀರ್ ರೆಡಿ ಎಂದ ಲಾಯರ್
10 ಕೋಟಿ ರೂಪಾಯಿ ವಿವಾದ; ಎಲ್ಲಾ ತನಿಖೆ ಎದುರಿಸಲು ಧನ್ವೀರ್ ರೆಡಿ ಎಂದ ಲಾಯರ್