AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಲಘು ಭೂಕಂಪ: 3.4 ತೀವ್ರತೆ ದಾಖಲು

Kolhapur Earthquake: ಮಹರಾಷ್ಟ್ರದ ಕೊಲ್ಹಾಪುರದಲ್ಲಿ ಲಘು ಭೂಕಂಪ ಸಂಭವಿಸಿದ್ದು, 3.4 ತೀವ್ರತೆ ದಾಖಲಾಗಿದೆ. ಕೊಲ್ಹಾಪುರದಲ್ಲಿ ಬೆಳಗ್ಗೆ 06.45ಕ್ಕೆ ಭೂಕಂಪ ಸಂಭವಿಸಿದೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಲಘು ಭೂಕಂಪ: 3.4 ತೀವ್ರತೆ ದಾಖಲು
ಭೂಕಂಪImage Credit source: Hindustan Times
ನಯನಾ ರಾಜೀವ್
|

Updated on:Aug 16, 2023 | 9:17 AM

Share

ಮಹರಾಷ್ಟ್ರದ ಕೊಲ್ಹಾಪುರದಲ್ಲಿ ಲಘು ಭೂಕಂಪ ಸಂಭವಿಸಿದ್ದು, 3.4 ತೀವ್ರತೆ ದಾಖಲಾಗಿದೆ. ಕೊಲ್ಹಾಪುರದಲ್ಲಿ ಬೆಳಗ್ಗೆ 06.45ಕ್ಕೆ ಭೂಕಂಪ ಸಂಭವಿಸಿದೆ. 5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ತಕ್ಷಣದ ವರದಿಗಳಿಲ್ಲ. ಕೊಲ್ಹಾಪುರವು ಪಶ್ಚಿಮ ಮಹಾರಾಷ್ಟ್ರದಲ್ಲಿದೆ, ಮುಂಬೈನಿಂದ ಸುಮಾರು 375 ಕಿಮೀ ದೂರದಲ್ಲಿದೆ. ಈ ನಡುವೆ ಸತಾರಾ ಜಿಲ್ಲೆಯ ಪಟಾನ್ ನಗರ ಸೇರಿದಂತೆ ಸಮೀಪದ ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ಬೆಳಗ್ಗೆ 6.40ಕ್ಕೆ ಭೂಕಂಪ ಸಂಭವಿಸಿದೆ.

ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಯಿತು. ಕೊಯ್ನಾ ಅಣೆಕಟ್ಟಿನಿಂದ 20 ಕಿ.ಮೀ ದೂರದಲ್ಲಿ ಭೂಕಂಪನದ ಅನುಭವವಾಗಿದ್ದು, ಅಣೆಕಟ್ಟು ಸುರಕ್ಷಿತವಾಗಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಮೂರು ತಿಂಗಳ ಹಿಂದೆ ಪಾಲ್ಘರ್‌ನಲ್ಲಿ ಭೂಕಂಪ ಸಂಭವಿಸಿತ್ತು , ಮೇ 27ರಂದು ಶನಿವಾರದಂದು ಮಹಾರಾಷ್ಟ್ರದ ಪಾಲ್ಘಡ ಜಿಲ್ಲೆಯಲ್ಲಿ 3.3 ಮತ್ತು 3.5 ತೀವ್ರತೆಯ ಲಘು ಕಂಪನಗಳು ಸಂಭವಿಸಿದವು. 3.3 ರ ತೀವ್ರತೆಯೊಂದಿಗೆ ಆರಂಭಿಕ ಕಂಪನವು ಸಂಜೆ 5:15 ಕ್ಕೆ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ, ನಂತರ 15 ನಿಮಿಷಗಳ ನಂತರ 5.28 ಕ್ಕೆ 3.5 ರ ತೀವ್ರತೆಯೊಂದಿಗೆ ಎರಡನೇ ಭೂಕಂಪ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:06 am, Wed, 16 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ