AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat earthquake: ಗುಜರಾತ್‌ನ ಕಚ್‌ನಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ ದಾಖಲು

ಗುರುವಾರ ಕಚ್‌ನಲ್ಲಿ ಬಿಪೋರ್‌ಜಾಯ್ ಚಂಡಮಾರುತದ ಅಪ್ಪಳಿಸುವ ಸಾಧ್ಯತೆ ಇದ್ದು, ಅದಕ್ಕಿಂತ ಮುನ್ನ ಇಲ್ಲಿ ಭೂಕಂಪ ಉಂಟಾಗಿದೆ

Gujarat earthquake: ಗುಜರಾತ್‌ನ ಕಚ್‌ನಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jun 14, 2023 | 7:13 PM

Share

ಗುಜರಾತ್‌ನ (Gujarat) ಕಚ್ ಜಿಲ್ಲೆಯಲ್ಲಿ (Kutch) ಬುಧವಾರ ಭೂಮಿ ಕಂಪಿಸಿದ್ದು (Earthquake)  3.5 ತೀವ್ರತೆಯ ಭೂಕಂಪ  ದಾಖಲಾಗಿದೆ. ಗುರುವಾರ ಕಚ್‌ನಲ್ಲಿ ಬಿಪೋರ್‌ಜಾಯ್ ಚಂಡಮಾರುತದ ಅಪ್ಪಳಿಸುವ ಸಾಧ್ಯತೆ ಇದ್ದು, ಅದಕ್ಕಿಂತ ಮುನ್ನ ಇಲ್ಲಿ ಭೂಕಂಪ ಉಂಟಾಗಿದೆ. ಇನ್‌ಸ್ಟಿಟ್ಯೂಟ್ ಆಫ್ ಸಿಸ್ಮಾಲಾಜಿಕಲ್ ರಿಸರ್ಚ್, ಗಾಂಧಿನಗರದ ಪ್ರಕಾರ ಭೂಕಂಪದ ಕೇಂದ್ರಬಿಂದು ಕಚ್ ಜಿಲ್ಲೆಯ ಭಚೌದಿಂದ ಪಶ್ಚಿಮ-ನೈಋತ್ಯಕ್ಕೆ 5 ಕಿಲೋಮೀಟರ್ ದೂರದಲ್ಲಿದೆ. ಬುಧವಾರ ಸಂಜೆ 5:05ಕ್ಕೆ ಭೂಕಂಪ ಸಂಭವಿಸಿದೆ.

ಬಿಪೋರ್‌ಜಾಯ್ ಅಪ್ಪಳಿಸುವ ಮುನ್ನ ಗುಜರಾತ್​​ನಲ್ಲಿ ರೆಡ್ ಅಲರ್ಟ್

ಬಿಪೋರ್‌ಜಾಯ್  ಚಂಡಮಾರುತದ ಹಿನ್ನೆಲೆಯಲ್ಲಿ ಗುಜರಾತ್‌ನ ಸೌರಾಷ್ಟ್ರ, ದ್ವಾರಕಾ ಮತ್ತು ಕಚ್ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಈ ಚಂಡಮಾರುತವು ಭಾರಿ ಹಾನಿಯನ್ನುಂಟುಮಾಡುವ ನಿರೀಕ್ಷೆಯಿದ್ದು ಹಲವಾರು ರಾಜ್ಯಗಳಿಗೆ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.

ಚಂಡಮಾರುತವು ಕಚ್ ಕರಾವಳಿಯತ್ತ ಅಪ್ಪಳಿಸುತ್ತಿರುವುದರಿಂದ ಗುಜರಾತ್‌ನ ಎಂಟು ಜಿಲ್ಲೆಗಳಲ್ಲಿ ಸಮುದ್ರದ ಸಮೀಪ ವಾಸಿಸುತ್ತಿದ್ದ ಸುಮಾರು 50,000 ಜನರನ್ನು ಸ್ಥಳಾಂತರಿಸಲಾಗಿದೆ.

ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಹದಿನೆಂಟು ಎನ್‌ಡಿಆರ್‌ಎಫ್ ತಂಡಗಳನ್ನು ಗುಜರಾತ್‌ನಲ್ಲಿ ಇರಿಸಲಾಗಿದ್ದು, ಕಚ್ ಜಿಲ್ಲೆಯಲ್ಲಿ ನಾಲ್ಕು ಎನ್‌ಡಿಆರ್‌ಎಫ್ ತಂಡಗಳು, ರಾಜ್‌ಕೋಟ್ ಮತ್ತು ದೇವಭೂಮಿ ದ್ವಾರಕಾದಲ್ಲಿ ತಲಾ ಮೂರು, ಜಾಮ್‌ನಗರದಲ್ಲಿ ಎರಡು, ಪೋರಬಂದರ್,ಗಾಂಧಿನಗರ, ಜುನಾಗಢ್, ಗಿರ್ ಸೋಮನಾಥ್, ಮೋರ್ಬಿ, ವಲ್ಸಾದ್ ಮತ್ತು ತಲಾ ಒಂದು ತಂಡಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Senthil Balaji: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಯ ಬಂಧನಕ್ಕೆ ಕಾರಣವಾದ ಘಟನೆಗಳ ಟೈಮ್‌ಲೈನ್

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೂರು ಸೇನಾ ಮುಖ್ಯಸ್ಥರೊಂದಿಗೆ ಮಾತನಾಡಿದ್ದು, ಚಂಡಮಾರುತದ ಪ್ರಭಾವವನ್ನು ಎದುರಿಸಲು ಸಶಸ್ತ್ರ ಪಡೆಗಳ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ ಎಂದು ಹೇಳಿದರು. ಚಂಡಮಾರುತದಿಂದ ಉಂಟಾಗಬಹುದಾದ ಯಾವುದೇ ಪರಿಸ್ಥಿತಿ ಅಥವಾ ಆಕಸ್ಮಿಕತೆಯನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡಲು ಪಡೆಗಳು ಸಿದ್ಧವಾಗಿವೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Wed, 14 June 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ