AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಪ್ರಬಲ ಭೂಕಂಪ

Earthquake in North India: ದೆಹಲಿ-ಎನ್‌ಸಿಆರ್ ಮತ್ತು ಚಂಡೀಗಢ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ಭೂ ಕಂಪನದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದರಿಂದ ಜನರು ತಮ್ಮ ಮನೆಗಳು ಮತ್ತು ಕಚೇರಿಗಳನ್ನು ಬಿಟ್ಟು ಹೊರಗೆ ಓಡಿಬಂದಿದ್ದಾರೆ. ದೆಹಲಿಯ ಭೂಕಂಪದ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದುವರೆಗೂ ಯಾವುದೇ ಸಾವು-ನೋವಿನ ವರದಿಯಾಗಿಲ್ಲ.

Delhi Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಪ್ರಬಲ ಭೂಕಂಪ
Earthquake
ಸುಷ್ಮಾ ಚಕ್ರೆ
|

Updated on:Apr 03, 2026 | 10:20 PM

Share

ನವದೆಹಲಿ, ಏಪ್ರಿಲ್ 3: ಇಂದು ಸಂಜೆ ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಕಡೆಗಳಲ್ಲಿ ಪ್ರಬಲ ಭೂಕಂಪನದ (Earthquake in Delhi) ಅನುಭವವಾಗಿದೆ. ಇದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀತಿಯನ್ನು ಉಂಟುಮಾಡಿದೆ. ದೆಹಲಿ-ಎನ್‌ಸಿಆರ್, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದರಿಂದ ಜನರು ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದರು.

ಇಂದು ಸಂಜೆ ದೆಹಲಿ-ಎನ್‌ಸಿಆರ್‌ನಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದಾದ್ಯಂತ ಕಂಪನದ ಅನುಭವವಾಗಿದೆ. ಇದರ ಕೇಂದ್ರಬಿಂದು ಅಫ್ಘಾನಿಸ್ತಾನದಲ್ಲಿದೆ ಎಂದು ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿಯೂ ಭೂಕಂಪನದ ಅನುಭವವಾಗಿದೆ ಎನ್ನಲಾಗಿದೆ. ದೆಹಲಿ ಮತ್ತು ಪಕ್ಕದ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿಯೂ ಜನರು ಗಾಬರಿಯಿಂದ ಮನೆಯಿಂದ ಹೊರಗೆ ಓಡಿಬರುತ್ತಿರುವ ದೃಶ್ಯ ಕಂಡುಬಂದಿತು. ಇದುವರೆಗೂ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: Indonesia Earthquake: ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪದ ನಂತರ ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇಂದು ರಾತ್ರಿ 9.50ರ ಸುಮಾರಿಗೆ ಉಂಟಾದ ಭೂಕಂಪನವು ನೋಯ್ಡಾ, ಚಂಡೀಗಢ, ಪಂಜಾಬ್‌ನ ಲುಧಿಯಾನ, ಮತ್ತು ಜಮ್ಮು ಮತ್ತು ಕಾಶ್ಮೀರದ ಪೂಂಚ್, ಶ್ರೀನಗರ ಮತ್ತು ಉಧಂಪುರ ಸೇರಿದಂತೆ ಹಲವಾರು ನಗರಗಳಲ್ಲಿಯೂ ಕಂಡುಬಂದಿದೆ. ಈ ಕಂಪನವು ಕೆಲವೇ ಸೆಕೆಂಡುಗಳ ಕಾಲ ಉಂಟಾಯಿತು. ಆದರೆ ಜನರು ಭಯಭೀತರಾಗಿ ಸುರಕ್ಷತೆಗಾಗಿ ಹೊರಗೆ ಓಡಿಬಂದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:04 pm, Fri, 3 April 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್