ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನದ ಅನುಭವ, ಮನೆಯಿಂದ ಓಡಿಬಂದ ಜನತೆ

ದೆಹಲಿ: ದೆಹಲಿ, ಎನ್​ಸಿಆರ್, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಂಜೆ 5.12ರಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯದಿಂದ ಮನೆಯಿಂದ ಹೊರಗೆ ಜನ ಓಡಿಬಂದಿದ್ದಾರೆ. ರಿಕ್ಟರ್​ ಮಾಪಕದಲ್ಲಿ 6.4ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ. ಕಾಬೂಲ್​ನಲ್ಲೂ ಭೂಕಂಪ: ಅಫ್ಘಾನಿಸ್ತಾನದ ಹಲವೆಡೆಯೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಆಫ್ಘನ್​ನ ರಾಜಧಾನಿ ಕಾಬೂಲ್​ ಭೂಕಂಪದ ಕೇಂದ್ರ ಬಿಂದುವಾಗಿದೆ. ರಿಕ್ಟರ್ ಮಾಪಕದಲ್ಲಿ 7.1ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನದ ಅನುಭವ, ಮನೆಯಿಂದ ಓಡಿಬಂದ ಜನತೆ
ಸಾಧು ಶ್ರೀನಾಥ್​

Updated on: Dec 20, 2019 | 6:40 PM

ದೆಹಲಿ: ದೆಹಲಿ, ಎನ್​ಸಿಆರ್, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಂಜೆ 5.12ರಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯದಿಂದ ಮನೆಯಿಂದ ಹೊರಗೆ ಜನ ಓಡಿಬಂದಿದ್ದಾರೆ. ರಿಕ್ಟರ್​ ಮಾಪಕದಲ್ಲಿ 6.4ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ.

ಕಾಬೂಲ್​ನಲ್ಲೂ ಭೂಕಂಪ:
ಅಫ್ಘಾನಿಸ್ತಾನದ ಹಲವೆಡೆಯೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಆಫ್ಘನ್​ನ ರಾಜಧಾನಿ ಕಾಬೂಲ್​ ಭೂಕಂಪದ ಕೇಂದ್ರ ಬಿಂದುವಾಗಿದೆ. ರಿಕ್ಟರ್ ಮಾಪಕದಲ್ಲಿ 7.1ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us