Delhi Earthquake: ದೆಹಲಿ-ಎನ್​ಸಿಆರ್​ನಲ್ಲಿ ಭೂಕಂಪ

|

Updated on: Oct 03, 2023 | 3:44 PM

ದೆಹಲಿ-ಎನ್​ಸಿಆರ್​ನಲ್ಲಿ ಭೂಕಂಪ(Earthquake) ಸಂಭವಿಸಿದೆ. ಮಂಗಳವಾರ ಮಧ್ಯಾಹ್ನ 2:25 ಕ್ಕೆ ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ದೆಹಲಿ-ಎನ್​ಸಿಆರ್​ನಲ್ಲಿ ಭೂಕಂಪ(Earthquake) ಸಂಭವಿಸಿದೆ. ಮಂಗಳವಾರ ಮಧ್ಯಾಹ್ನ 2:25 ಕ್ಕೆ ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ದೆಹಲಿ-ಎನ್‌ಸಿಆರ್‌ನಲ್ಲಿ ಅನೇಕ ನೆಟ್ಟಿಗರು ಕಂಪನದ ಅನುಭವದ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಈ ಭೂಕಂಪವು ನಾನು ಅನುಭವಿಸಿದ ಪ್ರಬಲವಾದ ಭೂಕಂಪಗಳಲ್ಲಿ ಒಂದಾಗಿದೆ. ಭೂಕಂಪನದ ಕೇಂದ್ರದಲ್ಲಿ ಯಾವುದೇ ಸಾವುನೋವುಗಳು ಸಂಭವಿಸುವುದಿಲ್ಲ ಎಂದು ಭಾವಿಸುತ್ತೇವೆ ಎಂದು ಹೇಳಿದ್ದಾರೆ.

ದೆಹಲಿ ಪೊಲೀಸರು ಟ್ವೀಟ್​ ಮಾಡಿ, ನೀವೆಲ್ಲರೂ ಸುರಕ್ಷಿತವಾಗಿದ್ದೀರಿ ಎಂದು ನಾವು ಭಾವಿಸುತ್ತೇವೆ, ದಯವಿಟ್ಟು ನಿಮ್ಮ ಕಟ್ಟಡಗಳಿಂದ ಸುರಕ್ಷಿತ ಸ್ಥಳಕ್ಕೆ ಬನ್ನಿ, ಆದರೆ ಗಾಬರಿಯಾಗಬೇಡಿ, ಎಲಿವೇಟರ್​ಗಳನ್ನು ಬಳಸಬೇಡಿ, ತುರ್ತು ಸಹಾಯಕ್ಕಾಗಿ 112 ಡಯಲ್ ಮಾಡಿ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಲಕ್ನೋ, ಹಾಪುರ್ ಮತ್ತು ಅಮ್ರೋಹಾದಲ್ಲಿಯೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ನೇಪಾಳದಲ್ಲಿ ಸಂಭವಿಸಿದ ಭೂಕಂಪಗಳ ನಂತರ ಉತ್ತರಾಖಂಡದ ಕೆಲವು ಭಾಗಗಳಲ್ಲಿಯೂ ಕಂಪನಗಳು ಸಂಭವಿಸಿವೆ. ರಾಷ್ಟ್ರ ರಾಜಧಾನಿಯಲ್ಲಿ ಕಂಪನದ ಅನುಭವವಾದ ತಕ್ಷಣ, ಜನರು ಕಟ್ಟಡಗಳನ್ನು ಸ್ಥಳಾಂತರಿಸುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿವೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಸೋಮವಾರ ಸಂಜೆ ಮೇಘಾಲಯದ ಉತ್ತರ ಗಾರೋ ಹಿಲ್ಸ್ ಜಿಲ್ಲೆಯಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಸಂಜೆ 6.15ರ ಸುಮಾರಿಗೆ ಕಂಪನದ ಅನುಭವವಾಗಿದ್ದು, ಭೂಕಂಪದ ಆಳ 10 ಕಿ.ಮೀ. ಇತ್ತು.

 

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:02 pm, Tue, 3 October 23