Sign In

By signing in or creating an account, you agree with Associated Broadcasting Company's Terms & Conditions and Privacy Policy.

ENPO Meet Amit Shah: ಪ್ರತ್ಯೇಕ ರಾಜ್ಯದ ಬೇಡಿಕೆ: ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿಯಾಗಲಿರುವ ENPO

ಪೂರ್ವ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (ENPO) ನಾಯಕರು ಡಿಸೆಂಬರ್ 3 ರಂದು ನವದೆಹಲಿಯಲ್ಲಿ ಕೇಂದ್ರ ಗೃಹ ವ್ಯವಹಾರಗಳು ಮತ್ತು ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ.

ENPO Meet Amit Shah: ಪ್ರತ್ಯೇಕ ರಾಜ್ಯದ ಬೇಡಿಕೆ: ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿಯಾಗಲಿರುವ ENPO
ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿಯಾಗಲಿರುವ ENPO
Follow us
TV9 Web
| Updated By: Rakesh Nayak Manchi

Updated on:Dec 03, 2022 | 6:55 AM

ನಾಗಾಲ್ಯಾಂಡ್​​ನಿಂದ ಬೇರ್ಪಡಲು ಬಯಸುವ ಆರು ಜಿಲ್ಲೆಗಳನ್ನು ಪ್ರತಿನಿಧಿಸುವ ಪೂರ್ವ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (Eastern Nagaland People’s Organization-ENPO) ನಾಯಕರು ಡಿಸೆಂಬರ್ 3 ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿಯಾಗಿ ರಾಜ್ಯತ್ವದ ಬೇಡಿಕೆ (Demand for statehood)ಯನ್ನು ಚರ್ಚಿಸಲಿದ್ದಾರೆ. ನಾಗಾಲ್ಯಾಂಡ್ (Nagaland)​ನ 16 ಜಿಲ್ಲೆಗಳ ಪೈಕಿ ಆರು ಜಿಲ್ಲೆಗಳಿಗೆ ರಾಜ್ಯ ಸ್ಥಾನಮಾನದ ಬಗ್ಗೆ ಚರ್ಚಿಸಲು ಕೇಂದ್ರ ಗೃಹಸಚಿವರು ತಂಡವನ್ನು ಆಹ್ವಾನಿಸಿದ್ದಾರೆ ಎಂದು ಇಎನ್​​ಪಿಒ ವಕ್ತಾರರು ಹೇಳಿದ್ದಾರೆ. ಸಂಜೆ 4 ಗಂಟೆಗೆ ನಿಗದಿಯಾಗಿರುವ ಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಆಹ್ವಾನ ಪತ್ರವನ್ನು ಸ್ವೀಕರಿಸಲಾಗಿದೆ ಎಂದು ENPOನ ಕಾರ್ಯದರ್ಶಿ ಡಬ್ಲ್ಯು.ಮನ್ವಾಂಗ್ ಕೊನ್ಯಾಕ್ ಅವರು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ. ಈ ಜಿಲ್ಲೆಗಳಲ್ಲಿ ಪ್ರಾಬಲ್ಯ ಹೊಂದಿರುವ ಆರು ಪ್ರಮುಖ ಬುಡಕಟ್ಟು ಜನಾಂಗದವರನ್ನು ದಶಕಗಳಿಂದ ನಿರ್ಲಕ್ಷ್ಯ ಮಾಡಲಾಗಿದೆ. ಹೀಗಾಗಿ ರಾಜ್ಯದಿಂದ ಭೇರ್ಪಡಲು ‘ಗಡಿನಾಡು ನಾಗಾಲ್ಯಾಂಡ್’ (Frontier Nagaland) ಅನ್ನು ರಚಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

CBLT, KBCA, KBBB, PBCA, USBLA, TBBA ಮತ್ತು YBBA ನಾಗಾಲ್ಯಾಂಡ್‌ನ ಏಳು ಬುಡಕಟ್ಟು ಸಂಸ್ಥೆಗಳ ಒಂದು ಛತ್ರಿ ಸಂಸ್ಥೆಯಾಗಿ ಇಎನ್​​ಪಿಒ ಕಾರ್ಯನಿರ್ವಹಿಸುತ್ತಿದೆ. “ಆರ್ ತ್ಸಪಿಕಿಯು ಸಾಂಗ್ತಮ್ ನೇತೃತ್ವದ ಇಎನ್​ಪಿಒ ಗುಂಪಿನ 11 ಸದಸ್ಯರನ್ನೊಳಗೊಂಡ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲಿದೆ. ನಾವು ಪ್ರತ್ಯೇಕ ರಾಜ್ಯತ್ವ ‘ಗಡಿನಾಡು ನಾಗಾಲ್ಯಾಂಡ್’ಗೆ ಒತ್ತಾಯಿಸುತ್ತಿದ್ದೇವೆ ಮತ್ತು ಈ ವಿಷಯವನ್ನು ಸಭೆಯಲ್ಲಿ ಚರ್ಚಿಸಲಾಗುವುದು” ಮನ್ವಾಂಗ್ ಕೊನ್ಯಾಕ್ ಹೇಳಿದ್ದಾರೆ.

ಇದನ್ನೂ ಓದಿ: SpiceJet flight ಜೆದ್ದಾದಿಂದ ಹೊರಟ ಸ್ಪೈಸ್‌ಜೆಟ್ ವಿಮಾನ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ

ಇದಲ್ಲದೆ, ಡಿಸೆಂಬರ್ 3 ರಂದು ಸಂಜೆ 4 ಗಂಟೆಗೆ ಆಯಾ ಸಂಘಗಳ ಅಡಿಯಲ್ಲಿ ಎಲ್ಲಾ ಚರ್ಚ್‌ಗಳನ್ನು ಒಳಗೊಂಡ ವಿಶೇಷ ಪ್ರಾರ್ಥನಾ ಕಾರ್ಯಕ್ರಮವನ್ನು ನಡೆಸಲು ಆಧ್ಯಾತ್ಮಿಕ ಮುಖಂಡರಿಗೆ ಇಎನ್​​ಪಿಒ ಮನವಿ ಮಾಡಿದೆ. ಪೂರ್ವ ನಾಗಾಲ್ಯಾಂಡ್‌ನ ಎಲ್ಲಾ ಪ್ರಾಮಾಣಿಕ ಸದಸ್ಯರು ಸಂಜೆ 4 ಗಂಟೆಗೆ 5 ನಿಮಿಷಗಳ ಕಾಲ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಮನವಿ ಮಾಡಿದೆ. ಅಷ್ಟೇ ಅಲ್ಲದೆ, ಪ್ರತ್ಯೇಕ ರಾಜ್ಯತ್ವದ ಬೇಡಿಕೆ ಈಡೇರುವವರೆಗೂ ಯಾವುದೇ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಪೂರ್ವ ನಾಗಾಲ್ಯಾಂಡ್‌ನ ಜನಸಾಮಾನ್ಯರಿಗೆ ಇಎನ್​ಪಿಒ ತನ್ನ ಮನವಿಯನ್ನು ಪುನರುಚ್ಚರಿಸಿದೆ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:55 am, Sat, 3 December 22

ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ