AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ಕಡಿಮೆ ತಿನ್ನಿ, ದಿನವೂ ಯೋಗ ಮಾಡಿ; ಆರೋಗ್ಯದ ರಹಸ್ಯ ಹೇಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ತಮ್ಮ ಆರೋಗ್ಯ, ಆಹಾರದ ವಿಷಯದಲ್ಲಿ ಎಷ್ಟು ಕಟ್ಟುನಿಟ್ಟು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಯೋಗವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು ಜೂನ್ 21 ಅನ್ನು ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನಾಗಿ ಆಚರಿಸುವಲ್ಲಿ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗೇ, ತಾವು ಸೇವಿಸುವ ಆಹಾರದ ಬಗ್ಗೆಯೂ ಅವರು ಆಗಾಗ ತಮ್ಮ ಭಾಷಣದಲ್ಲಿ ಉಲ್ಲೇಖಿಸುತ್ತಿರುತ್ತಾರೆ. ಇದೀಗ ದೇಶದ ಜನರಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆಂಬುದರ ಬಗ್ಗೆ ಮೋದಿ ಕೆಲವು ಸಲಹೆಗಳನ್ನು ನೀಡಿದ್ದಾರೆ.

ಸಕ್ಕರೆ ಕಡಿಮೆ ತಿನ್ನಿ, ದಿನವೂ ಯೋಗ ಮಾಡಿ; ಆರೋಗ್ಯದ ರಹಸ್ಯ ಹೇಳಿದ ಪ್ರಧಾನಿ ಮೋದಿ
Prime Minister Modi Image Credit source: PTI
ಸುಷ್ಮಾ ಚಕ್ರೆ
|

Updated on:Mar 20, 2026 | 8:22 PM

Share

ನವದೆಹಲಿ, ಮಾರ್ಚ್ 20: ಪ್ರಧಾನಿ ನರೇಂದ್ರ ಮೋದಿ (PM Narendra Modi) ಯೋಗ, ಫಿಟ್​ನೆಸ್​, ಉತ್ತಮ ಆಹಾರ ಸೇವನೆಗೆ ಸದಾ ಆದ್ಯತೆ ನೀಡುತ್ತಾರೆ. ಅವರು ಯಾವ ರಾಜ್ಯ, ಯಾವ ದೇಶಕ್ಕೇ ಪ್ರಯಾಣಿಸಲಿ ತಮ್ಮ ಯೋಗ ದಿನಚರಿ, ತಾವು ಸೇವಿಸುವ ಆಹಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರತಿದಿನ ಯೋಗಾಭ್ಯಾಸ, ಧ್ಯಾನ ಮಾಡುವ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೂ ದಿನವೂ ಯೋಗ ಮಾಡಲು ಸಲಹೆ ನೀಡಿದ್ದಾರೆ.

ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಆರೋಗ್ಯವಾಗಿರಿ, ಸಂತೋಷವಾಗಿರಿ. ಚೆನ್ನಾಗಿ ತಿನ್ನಿ, ಆರೋಗ್ಯವಾದುದನ್ನೇ ತಿನ್ನಿ. ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿ. ಯೋಗವನ್ನು ದೈನಂದಿನ ಜೀವನದ ಭಾಗವಾಗಿಸಿಕೊಳ್ಳಿ” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಕ್ಕಳಲ್ಲಿ ಪ್ರೋಟೀನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ? ಯಾವ ರೀತಿಯ ಲಕ್ಷಣ ಕಂಡುಬರುತ್ತವೆ?

ಅತಿಯಾದ ಸಕ್ಕರೆ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಎಲ್ಲರೂ ಚೆನ್ನಾಗಿ ತಿನ್ನಿರಿ ಮತ್ತು ಆರೋಗ್ಯವಾಗಿರಿ ಎಂದು ಸಲಹೆ ನೀಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಜನರು ತಮ್ಮ ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿ ಎಂದು ಒತ್ತಾಯಿಸಿದ್ದಾರೆ.

PM Modi Instagram Story

PM Modi Instagram Story

ಅತಿಯಾದ ಸಕ್ಕರೆಯ ದುಷ್ಪರಿಣಾಮಗಳನ್ನು ಎತ್ತಿ ತೋರಿಸುತ್ತಾ, ಇದು ಹಲವಾರು ರೋಗಗಳನ್ನು ಆಹ್ವಾನಿಸುತ್ತದೆ. ಇದರಿಂದ ಸಹಜವಾಗಿಯೇ ಬೊಜ್ಜಿನ ಸಮಸ್ಯೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. ಹಾಗೇ, ಯೋಗವನ್ನು ತಮ್ಮ ಜೀವನದ ಭಾಗವನ್ನಾಗಿ ಮಾಡಿಕೊಳ್ಳುವಂತೆ ಅವರು ಜನರಿಗೆ ಸಲಹೆ ನೀಡಿದ್ದಾರೆ. ಇದು ನೀವು ಫಿಟ್ ಮತ್ತು ಆ್ಯಕ್ಟಿವ್ ಆಗಿರಲು ಉತ್ತಮ ಮಾರ್ಗವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರಿಯಾಗೇ ಮಾಡುತ್ತಿದೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ!

ಸೋಷಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್ ಯುವರಾಜ್ ದುವಾ ಅವರ ರೀಲ್‌ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ. ಅವರು ತಮ್ಮ ತಂದೆಗೆ ಸಕ್ಕರೆ ಸೇವನೆಯನ್ನು ಕಡಿಮೆ ಮಾಡಲು ಸಲಹೆ ನೀಡಿ ಎಂದು ಇನ್​ಸ್ಟಾಗ್ರಾಂನಲ್ಲಿ ತಮಾಷೆಯಾಗಿ ಪ್ರಧಾನಿ ಮೋದಿಗೆ ಮನವಿ ಮಾಡಿದ್ದರು. “ಯುವರಾಜ್ ಅವರ ಕೋರಿಕೆಯ ಮೇರೆಗೆ ನಾನು ಅವರ ತಂದೆಗೆ ಮತ್ತು ಎಲ್ಲರಿಗೂ ಸಕ್ಕರೆ ಸೇವನೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸುತ್ತೇನೆ. ಆರೋಗ್ಯವಾಗಿರಿ, ಸಂತೋಷವಾಗಿರಿ!” ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:13 pm, Fri, 20 March 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್