Shiv Sena Symbol ಏಕನಾಥ್ ಶಿಂಧೆ ಬಣ ಪಾಲಾದ ‘ಬಿಲ್ಲು ಬಾಣ’ ಚಿಹ್ನೆ, ಉದ್ಧವ್ ಠಾಕ್ರಗೆ ಶಾಕ್ ಕೊಟ್ಟ ಚುನಾವಣಾ ಆಯೋಗ

ಕೇಂದ್ರ ಚುನಾವಣಾ ಆಯೋಗ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ಶಿಂಧೆ ಬಣಕ್ಕೆ ನೀಡುವ ಮೂಲಕ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿದೆ.

Shiv Sena Symbol ಏಕನಾಥ್ ಶಿಂಧೆ ಬಣ ಪಾಲಾದ 'ಬಿಲ್ಲು ಬಾಣ' ಚಿಹ್ನೆ, ಉದ್ಧವ್ ಠಾಕ್ರಗೆ ಶಾಕ್ ಕೊಟ್ಟ ಚುನಾವಣಾ ಆಯೋಗ
Follow us
ರಮೇಶ್ ಬಿ. ಜವಳಗೇರಾ
|

Updated on:Feb 17, 2023 | 8:27 PM

ನವದೆಹಲಿ: ಶಿವಸೇನಾ ಪಕ್ಷದ ಚಿಹ್ನೆಗಾಗಿ(shivsena symbol,) ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉದ್ಧವ್ ಠಾಕ್ರೆ ಬಣಗಳ ನಡುವೆ ಪೈಪೋಟಿ ನಡೆದಿದ್ದು, ಇದೀಗ ಕೇಂದ್ರ ಚುನಾವಣೆ ಆಯೋಗ(election commission) ಶಿವಸೇನೆಯ ‘ಬಿಲ್ಲು ಬಾಣ’ ಚಿಹ್ನೆಯನ್ನು ಏಕನಾಥ್ ಶಿಂಧೆ ಬಣಕ್ಕೆ ನೀಡಿ ಆದೇಶಿಸಿದೆ. ಇದರಿಂದ ಉದ್ಧವ್ ಠಾಕ್ರೆಗೆ (Uddhav Thackeray) ತೀವ್ರ ಮುಖಭಂಗವಾಗಿದೆ.

ಬಳಿಕ ಉದ್ಧವ್ ಠಾಕ್ರೆ ಹಾಗೂ ಏನಕಾಥ್ ಶಿಂಧೆ ಬಣಗಳ ನಡುವೆ ಶಿವಸೇನಾ ಚಿಹ್ನೆಗಾಗಿ ನಡೆದ ಹಗ್ಗಾಜಗ್ಗಾಟದ ಬಗ್ಗೆ ಕೇಂದ್ರ ಚುನಾವಣಾ ಆಯೋಗ ವಿಚಾರಣೆ ನಡೆಸಿ ನಡೆಸಿತ್ತು. ಎರಡು ಬಣದ ವಾದ ಆಲಿಸಿದ್ದ ಕೇಂದ್ರ ಚುನಾವಣಾ ಆಯೋಗ, ಅಂತಿಮವಾಗಿ ಇಂದು(ಫೆ.17) ಶಿವಸೇನೆಯ ‘ಬಿಲ್ಲು ಬಾಣ’ ಚಿಹ್ನೆಯನ್ನು ಏಕನಾಥ್ ಶಿಂಧೆಗೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಶಿಂಧೆ ಬಣವೇ ರಿಯಲ್ ಶಿವಸೇನೆ ಎಂದಿದೆ.

ಕೋರ್ಟ್ ಮೊರೆ ಹೋಗಲು ತೀರ್ಮಾನ

ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಿದೆ. ಪಕ್ಷದ ಚಿಹ್ನೆ ವಿವಾದ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆ ನಡೆಯುತ್ತಿರುವಾಗಲೇ ಚುನಾವಣಾ ಆಯೋಗ ಆದೇಶ ನೀಡಿದೆ ಚುನಾವಣಾ ಆಯೋಗದ ಆದೇಶವನ್ನು ‘ಸುಪ್ರೀಂ ಕೋರ್ಟ್​’ನಲ್ಲಿ ಪ್ರಶ್ನಿಸುತ್ತೇವೆ ಎಂದು ಮಾಜಿ ಸಿಎಂ ಉದ್ಧವ್ ಬಣದ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಏಕನಾಥ್ ಶಿಂಧೆಗೆ ಚಿಹ್ನೆ ಒಲಿದ ಬಗ್ಗೆ ಉದ್ಧವ್ ಬಣದ ನಾಯಕ ಆನಂದ್ ದುಬೆ ಪ್ರತಿಕ್ರಿಯಿಸಿ, ಚುನಾವಣಾ ಆಯೋಗದ ಆದೇಶದ ಬಗ್ಗೆ ನಮಗೆ ಅನುಮಾನವಿತ್ತು. ನಾವು ಚುನಾವಣಾ ಆಯೋಗವನ್ನು ನಂಬುವುದಿಲ್ಲ. ಇದೇ ವಿಚಾರದ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ಈ ಮಧ್ಯೆ ಚುನಾವಣಾ ಆಯೋಗ ಆತುರದ ನಿರ್ಧಾರ ಮಾಡಿದೆ. ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡಿದೆ. ನಾವು ಆಯೋಗ ಕ್ರಮವನ್ನು ಖಂಡಿಸುತ್ತೇವೆ ಎಂದಿದ್ದಾರೆ.

ಈ ಹಿಂದೆ ಅಂಧೇರಿ ಪೂರ್ವ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಎರಡು ಬಣಗಳು ಶಿವಸೇನೆ ಚಿಹ್ನೆ ಬಳಸಬಾರದು ಎಂದು ಚುನಾವಣಾ ಆಯೋಗ ಹೇಳಿತ್ತು. ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಅಂದಿನ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಆಘಾಡಿ ಸರ್ಕಾರವನ್ನು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರು ಠಾಕ್ರೆ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದರು. ಬಳಿಕ ಏಕನಾಥ್ ಶಿಂಧೆ ಬಿಜೆಪಿ ಜೊತೆ ಸೇರಿಕೊಂಡು ಸರ್ಕಾರ ರಚಿಸಿದ್ದರು. ಬಳಿಕ ಚಿಹ್ನೆಗಾಗಿ ಎರಡು ಬಣಗಳ ನಡುವೆ ಗುದ್ದಾಟ ಶುರುವಾಗಿತ್ತು.

Published On - 8:24 pm, Fri, 17 February 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್