Breaking News: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್​ ಅನರ್ಹತೆಗೆ ಚುನಾವಣಾ ಆಯೋಗ ಶಿಫಾರಸು

ಗಣಿಗಾರಿಕೆ ಸೇರಿದಂತೆ ಹಲವು ಮಹತ್ವದ ಖಾತೆಗಳನ್ನು ತಮ್ಮೊಳಗೆ ಉಳಿಸಿಕೊಂಡಿರುವ ಹೇಮಂತ್ ಸೊರೆನ್ ಅಕ್ರಮ ನಡೆಸಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದರು.

Breaking News: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್​ ಅನರ್ಹತೆಗೆ ಚುನಾವಣಾ ಆಯೋಗ ಶಿಫಾರಸು
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 25, 2022 | 1:16 PM

ದೆಹಲಿ: ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪ ಎದುರಿಸುತ್ತಿರುವ ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೊರೆನ್ (Jharkhand CM Hemant Soren) ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಕೇಂದ್ರ ಚುನಾವಣಾ ಆಯೋಗ ಶಿಫಾರಸು ಮಾಡಿದೆ. ಗಣಿಗಾರಿಕೆ ಸೇರಿದಂತೆ ಹಲವು ಮಹತ್ವದ ಖಾತೆಗಳನ್ನು ತಮ್ಮೊಳಗೆ ಉಳಿಸಿಕೊಂಡಿರುವ ಹೇಮಂತ್ ಸೊರೆನ್ ಅಕ್ರಮ ನಡೆಸಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯಪಾಲರು ಪತ್ರ ಬರೆದಿದ್ದರು. ಈ ಪತ್ರ ಆಧರಿಸಿ ಹಲವು ಅಂಶಗಳನ್ನು ಪರಿಶೀಲಿಸಿದ ಚುನಾವಣಾ ಆಯೋಗವು ಮುಖ್ಯಮಂತ್ರಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದೆ.

ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ‘ಮುಖ್ಯಮಂತ್ರಿಯೇ ಗಣಿ ಇಲಾಖೆಯನ್ನು ಇರಿಸಿಕೊಂಡು ತಮ್ಮ ಪರವಾಗಿರುವ ಕಂಪನಿಗಳಿಗೆ ಲೈಸೆನ್ಸ್​ ಕೊಡುವುದು ಭ್ರಷ್ಟಾಚಾರವಲ್ಲವೇ? ಜಾರ್ಖಂಡ್​ನಲ್ಲಿ ವಿಧಾನಸಭೆ ವಿಸರ್ಜನೆಯಾಗಬೇಕು. ಶೀಘ್ರ ಚುನಾವಣೆ ಆಗಬೇಕು’ ಎಂದು ಆಗ್ರಹಿಸಿದರು. ಚುನಾವಣಾ ಆಯೋಗದ ಕ್ರಮವನ್ನು ಬಿಜೆಪಿ ಸ್ವಾಗತಿಸಿದೆ.

ತಮ್ಮದೇ ಮಾಲೀಕತ್ವದಲ್ಲಿರುವ ಕಂಪನಿಗೆ ಗಣಿಗಾರಿಕೆ ಲೈಸೆನ್ಸ್​ ಕೊಟ್ಟುಕೊಳ್ಳುವ ಮೂಲಕ ಗಣಿ ಸಚಿವರೂ ಆಗಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್ ‘ಪ್ರಜಾಪ್ರತಿನಿಧಿ ಕಾಯ್ದೆ’ಯ ಹಲವು ಅಂಶಗಳನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ದೂರು ಸಲ್ಲಿಸಿತ್ತು. ಇಂದು ಜಾರ್ಖಂಡ್​ ರಾಜಧಾನಿ ರಾಂಚಿಯಲ್ಲಿ ಆಡಳಿತಾರೂಢ ಜೆಎಂಎಂ ಶಾಸಕರ ಸಭೆ ನಡೆಯಲಿದ್ದು ಮುಂದಿನ ನಡೆಯ ಬಗ್ಗೆ ಹೇಮಂತ್ ಸೊರೆನ್ ತೀರ್ಮಾನ ಪ್ರಕಟಿಸಲಿದ್ದಾರೆ.

ಹೇಮಂತ್ ಸೊರೆನ್ ಅನರ್ಹತೆ ಸಂಬಂಧ ಜಾರ್ಖಂಡ್ ರಾಜ್ಯಪಾಲ ರಮೇಶ್ ಬಿಯಾಸ್ ಅವರಿಗೆ ‘ಕೇಂದ್ರ ಚುನಾವಣಾ ಆಯೋಗ’ (Election Commission of India – ECI) ಪತ್ರ ಬರೆದಿದ್ದು, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬಹುದು ಎಂದು ತಿಳಿಸಿದೆ. ಚುನಾವಣಾ ಆಯೋಗವು ತನ್ನ ಅಭಿಪ್ರಾಯವನ್ನು ರಾಜ್ಯಪಾಲರಿಗೆ ಸಲ್ಲಿಸಿದೆ. ರಾಜ್ಯಪಾಲರು ಈ ಶಿಫಾರಸನ್ನು ಒಪ್ಪಬಹುದು ಅಥವಾ ಬಿಡಬಹುದು ಎಂದು ಹೆಸರು ಹೇಳಲು ಇಚ್ಛಿಸದ ಚುನಾವಣಾ ಆಯೋಗದ ಅಧಿಕಾರಿಗಳ ಹೇಳಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಏನಿದು ಪ್ರಕರಣ?

ಬಿಜೆಪಿ ಸಲ್ಲಿಸಿದ್ದ ದೂರಿನ ಬಗ್ಗೆ ರಾಜ್ಯಪಾಲರು ಚುನಾವಣಾ ಆಯೋಗದ ಅಭಿಪ್ರಾಯ ಕೇಳಿದ್ದರು. ತಮ್ಮ ಹೆಸರಿನ ಕಂಪನಿಗೆ ಕಲ್ಲುಗಣಿಗಾರಿಕೆ ಲೈಸೆನ್ಸ್​ ಪಡೆದುಕೊಳ್ಳುವ ಮೂಲಕ ‘ಲಾಭದಾಯಕ ಹುದ್ದೆ’ ಹೊಂದಿರುವ ಅವರು ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿಯ ಜಾರ್ಖಂಡ್ ರಾಜ್ಯ ಘಟಕದ ಅಧ್ಯಕ್ಷರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ಚುನಾವಣಾ ಆಯೋಗದಿಂದ ಅನರ್ಹತೆಯ ಬಗ್ಗೆ ಶಿಫಾರಸು ಬಂದಿರುವುದನ್ನು ಜಾರ್ಖಂಡ್​ ಸರ್ಕಾರದ ಉನ್ನತ ಮೂಲಗಳು ದೃಢಪಡಿಸಿವೆ. ರಾಜ್ಯಪಾಲರು ಈ ಬಗ್ಗೆ ಏನು ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಾಜ್ಯಪಾಲರ ಕಚೇರಿಯಲ್ಲಿ ಅಗತ್ಯ ವಿಧಿವಿಧಾನಗಳು ಪೂರ್ಣಗೊಂಡ ನಂತರವೇ ಈ ಕುರಿತು ಮಾಹಿತಿ ಅಧಿಕೃತವಾಗಿ ಹೊರಬೀಳಲಿದೆ.

ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿರುವ ರಾಜ್ಯಪಾಲ ರಮೇಶ್ ಬಿಯಾಸ್, ಇಂದು ಜಾರ್ಖಂಡ್ ರಾಜಧಾನಿ ರಾಂಚಿಗೆ ಮರಳಲಿದ್ದಾರೆ. ಜಾರ್ಖಂಡ್​ನ ಆಡಳಿತಾರೂಢ ಯುಪಿಎ ಮೈತ್ರಿಕೂಟವು ಚುನಾವಣಾ ಆಯೋಗದ ಶಿಫಾರಸಿಗಾಗಿ ಕಾತರದಿಂದ ಕಾಯುತ್ತಿತ್ತು. ಪ್ರತಿಪಕ್ಷ ಬಿಜೆಪಿಯು ಮುಂದಿನ ಸಿದ್ಧತೆಯನ್ನು ಅದಾಗಲೇ ಆರಂಭಿಸಿದ್ದು, ಯುಪಿಎ ವಿರುದ್ಧ ಅಭಿಯಾನ ನಡೆಸಲು ಮುಂದಾಗಿದೆ.

ಹಲವು ತಿಂಗಳ ಹೋರಾಟ

ಹೇಮಂತ್ ಸೊರೆನ್ ಪ್ರಕರಣದ ವಿಚಾರಣೆಗಾಗಿ ಚುನಾವಣಾ ಆಯೋಗವು ಪ್ರತ್ಯೇಕ ಸಮಿತಿಯನ್ನು ರಚಿಸಿತ್ತು. ಬಿಜೆಪಿ ಮತ್ತು ಹೇಮಂತ್ ಸೊರೆನ್ ಅವರ ವಕೀಲರ ವಾದಗಳನ್ನು ಆಲಿಸಿತ್ತು. ಕಳೆದ ಫೆಬ್ರುವರಿ 10ರಂದು ಮಾಜಿ ಮುಖ್ಯಮಂತ್ರಿ ರಘುಬರ್ ದಾಸ್ ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಾಬುಲಾಲ್ ಮರಂಡಿ ಫೆಬ್ರುವರಿ 11ರಂದು ರಾಜ್ಯಪಾಲರನ್ನು ಭೇಟಿಯಾಗಿದ್ದರು. ‘ಪ್ರಜಾಪ್ರತಿನಿಧಿ ಕಾಯ್ದೆಯ (1952) 9ಎ ವಿಧಿಯ ಪ್ರಕಾರ ಸೊರೆನ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಿಗೊಳಿಸಬೇಕು’ ಎಂದು ಆಗ್ರಹಿಸಿದ್ದರು.

ಈ ದೂರನ್ನು ರಾಜ್ಯಪಾಲರು ಚುನಾವಣಾ ಆಯೋಗಕ್ಕೆ ರವಾನಿಸಿದ್ದರು. ಆಯೋಗವು ಗಣಿಗಾರಿಕೆಗೆ ಸಂಬಂಧಿಸಿದ ಎಲ್ಲ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿತ್ತು. ಈ ದಾಖಲೆಗಳನ್ನು ಆಧರಿಸಿ ಚುನಾವಣಾ ಆಯೋಗವು ಮೇ 2ರಂದು ಸೊರೆನ್ ಅವರಿಗೆ ನೊಟೀಸ್ ನೀಡಿದ್ದರು.

Published On - 12:48 pm, Thu, 25 August 22

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ